ಗದಗ | ಸ್ಮಶಾನ ದಾರಿ ಸಮಸ್ಯೆ; ಗ್ರಾಮ ಪಂಚಾಯತಿ ಎದುರು ಶವವಿಟ್ಟು ಆಕ್ರೋಶ

Date:

ಸ್ಮಶಾನಕ್ಕೆ ತೆರಳುವ ದಾರಿಯ ಸಮಸ್ಯೆ ಬಗೆಹರಿಯದ ಕಾರಣ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂದೆ ಶವವಿಟ್ಟು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಚಿಕ್ಕಮಣ್ಣೂರು ಗ್ರಾಮದಲ್ಲಿ ನಡೆದಿದೆ.

- Advertisement -

ಚಿಕ್ಕಮಣ್ಣೂರು ಗ್ರಾಮದ ಯಲ್ಲಮ್ಮ ತಳವಾರ ಎಂಬ ಮಹಿಳೆ ಭಾನುವಾರ ಮೃತಪಟ್ಟಿದ್ದು, ಅಂತ್ಯಸಂಸ್ಕಾರಕ್ಕೆ ತೆರಳುವ ವೇಳೆ ಗ್ರಾಮದ ಜಮೀನಿನ ಮಾಲೀಕರೊಬ್ಬರು ಬೆಳೆ ಹಾಳಾಗುವುದರಿಂದ ಸ್ಮಶಾನಕ್ಕೆ ತೆರಳಲು ಅವಕಾಶ ನೀಡಲಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು, ಕುಟುಂಬಸ್ಥರು ಗ್ರಾಮ ಪಂಚಾಯತ್‌ ಕಚೇರಿ ಮುಂದೆ ಶವ ತೆಗೆದುಕೊಂಡು ಹೋಗಿ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಸ್ಮಶಾನ ಭೂಮಿಗೆ ತೆರಳಲು ದಾರಿ ಸಮಸ್ಯೆಯಿದ್ದು, ಸರಿಪಡಿಸುವಂತೆ ತಹಶೀಲ್ದಾರ್‌ ಗಮನಕ್ಕೆ ತರಲಾಗಿತ್ತು. ಆದರೆ ಸಮಸ್ಯೆ ಬಗೆಹರಿಸುವ ಬಗ್ಗೆ ಯಾವುದೇ ಪ್ರಯತ್ನ ಮಾಡಿಲಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಕೆ.ನಾಗರಾಜ, ಸಿಪಿಐ ಸಿದ್ದಪ್ಪ ಬೀಳಗಿ ಅವರೊಂದಿಗೆ ಗ್ರಾಮಸ್ಥರು ವಾಗ್ವಾದ ನಡೆಸಿ ಪ್ರತಿಭಟನೆ ಮುಂದುವರೆಸಿದರು.

ಸ್ಮಶಾನ ಜಾಗದ ಸಮಸ್ಯೆ ಹಿಂದಿನ ತಹಶೀಲ್ದಾರ್‌ ಗಮನಕ್ಕೆ ಬಂದಿದ್ದು, ನನಗೆ ಗೊತ್ತಿಲ್ಲ. ಸ್ಮಶಾನಕ್ಕೆ ದಾರಿ ಇರುವ ಬಗ್ಗೆ ಯಾವುದೇ ದಾಖಲೆ ಲಭ್ಯವಿಲ್ಲ. ಸಮೀಕ್ಷೆ ನಡೆಸಿ ರಸ್ತೆಗೆ ಅಗತ್ಯವಾದ ಜಾಗ ಖರೀದಿಸಲು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು” ಎಂದು ರೋಣ ತಹಶಿಲ್ದಾರ್ ಕೆ.ನಾಗರಾಜ ಭರವಸೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...