ಗದಗ | ʼಕರ್ನಾಟಕʼ ನಾಮಕರಣ ಹೋರಾಟದಲ್ಲಿ ಜಿಲ್ಲೆಯ ಕೊಡುಗೆ ಅಪಾರ: ಎಚ್.ಕೆ.ಪಾಟೀಲ್‌

Date:

ʼಕರ್ನಾಟಕʼ ನಾಮಕರಣ ಹೋರಾಟದಲ್ಲಿ ಗದಗ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ಕವಿಕುಮಾರವ್ಯಾಸರು 14-15ನೇ ಶತಮಾನದಲ್ಲಿಯೇ ತನ್ನ ಮಹಾ ಕಾವ್ಯಕ್ಕೆ ಕರ್ನಾಟಕ ಕಥಾಮಂಜರಿ ಎಂದು ಹೆಸರಿಸಿದ್ದಾರೆ. ಕನ್ನಡ ಭಾಷಿಕರ ಏಕೀಕರಣಕ್ಕೆ ಧೀರ್ಘವಾದ ರೋಚಕ ಇತಿಹಾಸವಿರುವಂತೆ ಕರ್ನಾಟಕ ನಾಮಕರಣಕ್ಕೆ ಭವ್ಯ ಇತಿಹಾಸವಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ್ ನುಡಿದಿದ್ದಾರೆ.

- Advertisement -

ಬುಧವಾರ ಗದಗ ಜಿಲ್ಲಾ ಕ್ರೀಡಾಂಗದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕ ನಾಮಕರಣದಲ್ಲಿ ಅವಿಸ್ಮರಣೀಯರಾದವರು ಅಂದಾನಪ್ಪ ದೊಡ್ಡಮೇಟಿ, ಹಳ್ಳಿಕೇರಿ ಗುದ್ಲೆಪ್ಪ, ಕೆ.ಎಫ್.ಪಾಟೀಲ, ವೀರಪ್ಪ ಬಸರೀಗಿಡದ,  ಎನ್.ಎಸ್.ಸುಬ್ಬರಾಯರು, ಬೆಳ್ಳಾವೆ ವೆಂಕಟನಾರಾಯಣಪ್ಪರವರು, ದಿವಾಕರ ರಂಗರಾಯರು, ಮುದವೀಡು ಕೃಷ್ಣರಾಯರು, ಚಂದ್ರಶೇಖರ ಶಾಸ್ತ್ರಿಗಳು, ಕೃಷ್ಣ ಶಾಸ್ತ್ರಿಗಳು, ದ.ರಾ.ಬೇಂದ್ರೆ, ಶಿ.ಶಿ.ಬಸವನಾಳರು ಮತ್ತಿತರ ಮಹನೀಯರು ನಾಮಕರಣದ ಸಂದರ್ಭದಲ್ಲಿ ಅಮೂಲ್ಯ ಪಾತ್ರ ನಿರ್ವಹಿಸಿದ್ದರು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

1961ರಲ್ಲಿ ಗದಗನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿತ್ತು. ಕೆ.ಜಿ.ಕುಂದಣಗಾರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಸಮ್ಮೆಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಕೆ.ಎಚ್.ಪಾಟೀಲ ಅವರು ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ನಿರ್ಣಯವನ್ನು ಮಂಡಿಸಿದರು ಹಾಗೂ ಅದು ಸರ್ವಾನುಮತದಿಂದ ಅಂಗೀಕಾರವಾಯಿತು ಎಂದರು. 1973ರಲ್ಲಿ ರಾಜ್ಯ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಡಿ. ದೇವರಾಜ ಅರಸ, ವಿಧಾನ ಪರಿಷತ್ತಿನಲ್ಲಿ ಕೃಷಿ ಮಂತ್ರಿ ಕೆ.ಎಚ್.ಪಾಟೀಲ ಅವರುಗಳು ಕರ್ನಾಟಕ ನಾಮಕರಣ ನಿರ್ಣಯ ಮಂಡಿಸಿದರು. ಬೆಂಗಳೂರು-ಹಂಪಿ ಗದಗದಲ್ಲಿ ಅದ್ದೂರಿಯ ನಾಮಕರಣೋತ್ಸವ ಸಮಾರಂಭಗಳು ಜರುಗಿದವು. ಗದುಗಿನ ವೀರನಾರಾಯಣ, ಬೇಲೂರಿನ ಚನ್ನಕೇಶವ, ಮೈಸೂರಿನ ತಾಯಿ ಚಾಮುಂಡಿ, ಕಲಬುರಗಿಯ ಬಂದೇನವಾಜ ಮತ್ತು ವಿಜಯಪುರದ ಗೋಳಗುಮ್ಮಟ, ಆನಂದನವನವೆಂದು ಕರೆಯಿಸಿಕೊಳ್ಳುವ ಕರಾವಳಿ, ಮುಂತಾದ ಐತಿಹಾಸಿಕ ಪ್ರದೇಶಗಳು ಕನ್ನಡನಾಡಿನ ಹಿರಿಮೆ-ಗರಿಮೆಯನ್ನು ಸಾರುತ್ತಾ ಕನ್ನಡ ನಾಡನ್ನು ಅತ್ಯಂತ ಶ್ರೀಮಂತಗೊಳಿಸಿ, ಕನ್ನಡ ತಾಯಿಯನ್ನು ಮತ್ತಷ್ಟು ಸುಂದರಗೊಳಿಸಿವೆ ಎಂದು ನುಡಿದರು.

ನಾಮಕರಣ ಮಹೋತ್ಸವ ನಡೆದು ಇದೀಗ 50 ವಸಂತಗಳು ತುಂಬಿವೆ. ಈ ಅವಧಿಯಲ್ಲಿ ಕೃಷ್ಣ, ಕಾವೇರಿ, ಭೀಮೆ, ತುಂಗೆ, ಭದ್ರೆ, ತುಂಗಭದ್ರೆ, ಮಲಪ್ರಭೆ, ಘಟಪ್ರಭೆ, ಗೋದಾವರಿ ನದಿಗಳಲ್ಲಿ ಅಪಾರವಾದ ನೀರು ಹರಿದಿದೆ. ಕರ್ನಾಟಕ ಅದ್ಬುತವಾಗಿ ಅಭಿವೃದ್ಧಿ ಸಾಧಿಸಿದೆ. ಅಭಿವೃದ್ಧಿಯ ಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಅನೇಕ ಸವಾಲುಗಳನ್ನು ಭೀಮ ಬಲದಿಂದ ಎದುರಿಸಿದೆ. ಪ್ರಾದೇಶಿಕ ಅಸಮತೋಲನವನ್ನು ಸಮತೋಲನಗೊಳಿಸುವ ಪ್ರಯತ್ನಗಳಲ್ಲಿ ತಕ್ಕಮಟ್ಟಿನ ಯಶ ದೊರೆತಿದೆ. ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣವಾಗಿ ಉತ್ತರ ಕರ್ನಾಟಕದ ಆಶೋತ್ತರಗಳ ಚರ್ಚೆಗೆ ವೇದಿಕೆ ಒದಗಿಸಿದೆ.

ಕಲಬುರಗಿ ಮತ್ತು ಧಾರವಾಡಗಳಲ್ಲಿ ಹೈಕೋರ್ಟ ಪೀಠಗಳು ಕಾರ್ಯನಿರ್ವಹಿಸುತ್ತಿವೆ. ಕರಾವಳಿಯಲ್ಲಿ ಸಾಗರಮಾಲಾ ಕಾರ್ಯಕ್ರಮ ಬೃಹದಾಕಾರದ ರೂಪದಲ್ಲಿ ಅನುಷ್ಠಾನಗೊಂಡು ಅಭಿವೃದ್ಧಿಯ ಕೀರ್ತಿ ತಂದುಕೊಟ್ಟಿದೆ. ಬೆಂಗಳೂರು, ಮಂಗಳೂರು, ಧಾರವಾಡ ಹಾಗೂ ಕಲಬುರಗಿಗಳು ಶಿಕ್ಷಣ ಕೇಂದ್ರಗಳಾಗಿ ಬೆಳೆದಿವೆ. ಎಲ್ಲಾ ವಲಯಗಳಲ್ಲಿ ವಿಶ್ವವಿದ್ಯಾಲಯಗಳು, ರಸ್ತೆ ಸಂಪರ್ಕ, ಮೂಲಭೂತ ಸೌಲಭ್ಯಗಳು ನಾಡಿನ ಅಭಿವೃದ್ಧಿಯ ದ್ಯೋತಕವಾಗಿವೆ. ಬೆಂಗಳೂರು ಸಿಲಿಕಾನ ಸಿಟಿ ಎಂದು ಖ್ಯಾತಿಹೊಂದಿ ಅತೀಹೆಚ್ಚು ಸಾಫ್ಟವೇರ ರಫ್ತು ಮಾಡುವ ನಗರಗವೆಂದು ದೇಶದಲ್ಲಿಯೇ ಮುಂಚೂಣಿಯಲ್ಲಿದೆ.

ರಾಜ್ಯ ಸರ್ಕಾರ ಕೆಲವೇ ದಿನಗಳಲ್ಲಿ ಚುನಾವಣೆಯಲ್ಲಿ ನೀಡಿದ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಕ್ರಾಂತಿಕಾರಕ ಹೆಜ್ಜೆಗಳನ್ನಿಟ್ಟು ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳು ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳು ಬಡತನ ರೇಖೆಯಿಂದ ಮೇಲೆ ಬರುವಂತೆ ಮಾಡಿವೆ ಎಂದರು.

ರಾಜ್ಯದ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳೆಸಿ ಇಂದಿನ ಪೀಳಿಗೆಗೆ ರಾಜ್ಯದ ಗತವೈಭವದ, ಇತಿಹಾಸದ ದರ್ಶನ ಮಾಡಿಸುವ ನಿಟ್ಟಿನಲ್ಲಿ ಪ್ರಾಚೀನ ಸ್ಮಾರಕಗಳನ್ನು ಗುರುತಿಸಿ ಅವುಗಳನ್ನು ಸಂರಕ್ಷಿಸಲು ಜನರ ಪಾಲ್ಗೋಳ್ಳುವಿಕೆಗಾಗಿ ಸ್ಮಾರಕ ದತ್ತು ಯೋಜನೆ ರೂಪಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ವೈಜ್ಞಾನಿಕ ಅಭಿವೃದ್ಧಿಗಾಗಿ ಈಗಾಗಲೇ ತಜ್ಞರಿಂದ ವರದಿ ಪಡೆಯಲಾಗಿದೆ. ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಕ್ರಮ ಜರುಗಿಸಲಾಗುತ್ತಿದೆ. ಗದಗ ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ, ಕ್ರೀಡಾ ಕ್ಷೇತ್ರಗಳಲ್ಲಿ ಹಾಗೂ ಮೂಲಭೂತ ಸೌಲಭ್ಯ ವಲಯಗಳಲ್ಲಿ ಅಪಾರ ಸೌಲಭ್ಯಗಳ ಸೃಷ್ಠಿಯಾಗಿದೆ. ಜಿಮ್ಸ್‍ನಲ್ಲಿ 450 ಹಾಸಿಗೆಗಳ ಆಸ್ಪತ್ರೆ ಲೋಕಾರ್ಪಣೆಗೊಳ್ಳುತ್ತಿದೆ. ಹೃದಯ ರೋಗಿಗಳ ಚಿಕಿತ್ಸೆಗಾಗಿ ಕ್ಯಾತಲ್ಯಾಬ ಸದ್ಯದಲ್ಲಿಯೇ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಸಮಾರಂಭದಲ್ಲಿ ವಿಧನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ನಿವೃತ್ತ ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು, ಅಪಾರ ಸಂಖ್ಯೆಯಲ್ಲಿ ಶಾಲಾ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...