ಗದಗ | ನಟ ಯಶ್ ಜನ್ಮದಿನದ ಬ್ಯಾನರ್​ ಹಾಕುವಾಗ ವಿದ್ಯುತ್​ ಸ್ಪರ್ಶ ; ಮೂವರು ಸಾವು

Date:

Advertisements

ಕನ್ನಡ ಚಿತ್ರರಂಗದ ನಟ ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.

ಹನಮಂತ ಮಜ್ಜುರಪ್ಪ ಹರಿಜನ (21), ಮುರಳಿ ನೀಲಪ್ಪ ನಡವಿನಮನಿ (20) ಹಾಗೂ ನವೀನ್ ಗಾಜಿ (19) ಮೃತ ಯುವಕರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವ ಮೂವರಿಗೆ ಗಂಭೀರ ಗಾಯಗಳಾಗಿವೆ.

ನೆಚ್ಚಿನ ನಟನ ಹುಟ್ಟುಹಬ್ಬವನ್ನು ಗ್ರಾಮದಲ್ಲಿ ಭರ್ಜರಿಯಾಗಿ ಆಚರಿಸಬೇಕೆಂದು ರವಿವಾರ ತಡರಾತ್ರಿ ಬ್ಯಾನರ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಘಟನೆಯಲ್ಲಿ ಗಾಯಗೊಂಡ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ. ಯುವಕರಿಗೆ ವಿದ್ಯುತ್ ತಗಲುತ್ತಿದ್ದಂತೆ ಕೂಗಾಟ ಚೀರಾಟ ಕೇಳಿ ಬಂದ ಘಟನೆಯ ಲೈವ್ ವಿಡಿಯೋ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

Advertisements

ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್​.ಕೆ.ಪಾಟೀಲ್, ಕುಟುಂಬಸ್ಥರ ಭೇಟಿಯಾಗಿ ಸಾಂತ್ವನ ಹೇಳುತ್ತೇನೆ, ಘಟನೆ ಸಂಬಂಧ ಜಿಲ್ಲಾಧಿಕಾರಿ, ಎಸ್​ಪಿಯಿಂದಲೇ ಮಾಹಿತಿ ಪಡೆದುಕೊಂಡಿದ್ದೇನೆ. ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ ಎಂದರು.

ಗದಗ ಎಸ್​ಪಿ ಬಿ.ಎಸ್.ನೇಮಗೌಡ ಲಕ್ಷ್ಮೇಶ್ವರ ಆಸ್ಪತ್ರೆಗೆ ಭೇಟಿ ನೀಡಿ ಗಂಭೀರ ಗಾಯಗೊಂಡ ಮೂವರ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಒಂಬತ್ತು ಜನ ಕಟೌಟ್ ಕಟ್ಟುವಾಗ ಘಟನೆ ನಡೆದಿದೆ. ಎಲ್ಲರೂ ಅಭಿಮಾನಿಗಳೇ ಇದ್ರು. ಕಬ್ಬಿಣದ ಫ್ರೇಮ್ ಇರೋದ್ರಿಂದ ಮೇಲೆತ್ತುವಾಗ ವಿದ್ಯುತ್ ತಂತಿ ತಗುಲಿ ದುರಂತ ನಡೆದಿದೆ. ಮೂವರು ಯುವಕರು ಸಾವನ್ನಪ್ಪಿದ್ದಾರೆ. ಮೂವರಿಗೆ ಗಾಯವಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದರು.

ನಟ ಯಶ್ ಬರಬೇಕೆಂದು ಅಭಿಮಾನಿ ಪಟ್ಟು

ಇನ್ನು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ನಟ ಯಶ್ ಬರಬೇಕೆಂದು ಮೃತ ಯುವಕರ ಸ್ನೇಹಿತ ಪಟ್ಟುಹಿಡಿದಿದ್ದಾನೆ. ಯಶ್ ನಮ್ಮೂರಿಗೆ ಬರಬೇಕು, ಬಂದು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಬೇಕು ಎಂದು ಪ್ರಕಾಶ ಮ್ಯಾಗೇರಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X