ಗದಗ ಜಿಲ್ಲೆಯಲ್ಲಿಯೇ ಶರವೇಗದಲ್ಲಿ ಬೆಳೆಯುತ್ತಿರುವ ನಗರ ಗಜೇಂದ್ರಗಡ. ಇಲ್ಲಿನ ಸುತ್ತಮುತ್ತಲಿನ ಜನರಿಗೆ ವ್ಯಾಪಾರವು ಒಂದು ಜೀವಾಳವಾಗಿದೆ ಎಂದು ಪುರಸಭೆ ಮಾಜಿ ಸದಸ್ಯ ಎಂ ಎಸ್ ಹಡಪದ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸೇವಾಲಾಲ್ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಸ್ಥರ ಸಂಘ(ಸಿಐಟಿಯು) ಸಹಯೋಗದಲ್ಲಿ ನಡೆದ ತಾಲೂಕು ಬೀದಿಬದಿ ವ್ಯಾಪಾರಸ್ಥರ ಸಮಾವೇಶ ಉದ್ಘಾಟಿಸಿ ಮಾತನಾಡಿರು.
“ಪಟ್ಟಣದಲ್ಲಿನ ಮಾರುಕಟ್ಟೆ ಸ್ಥಳಾಂತರವಾಗಿ ಎಷ್ಟೋ ಬಡ ಕುಟುಂಬಗಳು ಬೀದಿಗೆ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಮುಂದಾಗಬೇಕು” ಎಂದು ಒತ್ತಾಯಿಸಿದರು.
ಸಿಐಟಿಯು ಮುಖಂಡ ಬಾಲು ರಾಠೋಡ ಮಾತನಾಡಿ, “ಗಜೇಂದ್ರಗಡ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಮಾರಾಟ ಮಾಡಲು ಅಧಿಕಾರಿಗಳು ನಿರ್ಬಂಧ ಹಾಕಿರುವುದನ್ನು ಕೈ ಬಿಡಬೇಕು. ಎಲ್ಲ ವ್ಯಾಪಾರಸ್ಥರಿಗೆ ಕಾಲುದಾರಿ ಮೇಲೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು. ಬೀದಿಬದಿ ಕಾಯ್ದೆ ಅಡಿ ವ್ಯಾಪಾರಸ್ಥರಿಗೆ ರಕ್ಷಣೆ ನೀಡುವಂತಾಗಬೇಕು. ವ್ಯಾಪಾರ ಮಾಡಲು ಒಂದು ಶಾಶ್ವತ ಸ್ಥಳಾವಕಾಶ ಮಾಡಿಕೊಡಬೇಕು” ಎಂದು ಹೇಳಿದರು.
“ಡಬಲ್ ರೋಡ್ ಭಾಗವಾದ ದುರ್ಗಾ ಸರ್ಕಲ್‌ನಿಂದ ಕೆಕೆ ಸರ್ಕಲ್‌ನ ನಾಲ್ಕು ಭಾಗದಲ್ಲಿ 2004 ಕಾಯ್ದೆ ಅಡಿಯಲ್ಲಿ ಅವಕಾಶ ನಿಡಬೇಕು. ಸಂಬಂಧಪಟ್ಟ ಶಾಸಕರು ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೇರಿ ಎಲ್ಲ ವ್ಯಾಪಾರಸ್ಥರ ನಡುವೆ ಒಂದು ಜಂಟಿ ಸಭೆಯನ್ನು ನಡೆಸಿ ತಿರ್ಮಾನ ತೆಗೆದುಕೋಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.
“ತರಕಾರಿ ಮಾರುಕಟ್ಟೆಗೆ ಪ್ರತ್ಯೇಕ ಸ್ಥಳ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಹಣ್ಣು, ಎಗ್ ರೈಸ್, ಕಬ್ಬಿನ ಹಾಲು, ಬಟ್ಟೆ ವ್ಯಾಪಾರ, ಚಪ್ಪಲಿ, ಎಲೆ ಅಡಿಕೆ, ಪಾನಿಪುರಿ ಮಾರುವ ಎಲ್ಲ ವ್ಯಾಪಾರಸ್ಥರಿಗೆ ಬೀದಿಬದಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು” ಎಂಬ ಅಂಶಗಳ ಕುರಿತು ಸಮಾವೇಶದಲ್ಲಿ ನೂತನ ಸಮಿತಿಯ ತುರ್ತು ನಿರ್ಣಯಗಳನ್ನು ತೆಗೆದುಕೊಂಡರು.
ಈ ಸುದ್ದಿ ಓದಿದ್ದೀರಾ? ಬೀದರ್ | ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ : ಶಾಸಕ ಶೈಲೇಂದ್ರ ಬೆಲ್ದಾಳೆ
ಗಜೇಂದ್ರಗಡ ಬೀದಿಬದಿ ವ್ಯಾಪಾರಸ್ಥರ ತಾಲೂಕು ಅಧ್ಯಕ್ಷ ಶಾಮೀದ್ಅಲಿಸಾಬ್ ದಿಂಡವಾಡ, ಪ್ರಧಾನ ಕಾರ್ಯದರ್ಶಿ ಪೀರು ರಾಠೋಡ, ಪದಾಧಿಕಾರಿಗಳು ಚೌಡಮ್ಮ ಯಲ್ಪು, ಮೈಬೂಸಾಬ್ ಮಾಲ್ದಾರ, ಮುತ್ತಣ್ಣ ರಾಠೋಡ, ಅಂಬರೇಶ ಚವ್ಹಾಣ, ಮಾರುತಿ ಗೊಂದಳೆ, ಮುತ್ತಣ್ಣ ತೇಜಪ್ಪ ರಾಠೋಡ, ವಿಷ್ಣು ಚಂದುಕರ, ಮಹಾಂತೇಶ ಹೀರೇಮಠ, ಖಜಾಂಚಿ ಪರಶುರಾಮ ಬಡಿಗೇರ, ಸದಸ್ಯ ಗಂಗಾಧರ ಸತ್ಯನ್ನವರ, ಯಮನೂರಸಾಬ್ ಗಾದಿ, ಮರ್ತುಜಾ ದಿಂಡವಾಡ, ಅಶೋಕ್ ಚವ್ಹಾಣ, ಕಳಕಪ್ಪ ಮಾಳೋತ್ತರ, ರಾಜುಪಾಲ, ಅಲ್ಲಾಬಕ್ಷಿ ಮುಚ್ಚಾಲಿ, ಸುರೇಶ್ ಅಕ್ಕಸಾಲಿ, ನಾಗರಾಜ ಅಜ್ಮೀರ, ದೇವಕ್ಕ ರಾಠೋಡ, ಭದ್ರೇಶ್ ರಾಠೋಡ ಸೇರಿದಂತೆ 30 ಜನರ ಸಮಿತಿಯನ್ನು ರಚಿಸಲಾಯಿತು.
ಈ ಸಂದರ್ಭದಲ್ಲಿ ರೈತ ಮುಖಂಡ ಬಾಲು ರಾಠೋಡ, ಮೆಹಬೂಬ್ ಹವಾಲ್ದಾರ್, ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಚಂದ್ರು ರಾಠೋಡ ಹಾಗೂ ವ್ಯಾಪಾರಸ್ಥರು ಇದ್ದರು.
