ರಾಜ್ಯದಲ್ಲಿ 430ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ 23ರಿಂದ ರಾಜ್ಯದಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಕೈಗೊಳ್ಳಲಿದ್ದು, ಅದಕ್ಕೆ ಬೆಂಬಲ ಸೂಚಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಗಜೇಂದ್ರಗಡ ತಾಲೂಕು ಸಮಿತಿ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ರಾಜ್ಯ ಪದಾಧಿಕಾರಿ ಗಣೇಶ ರಾಠೋಡ್ ಮಾತನಾಡಿ, ಕೊರೊನ ಸಾಂಕ್ರಾಮಿಕ ಸಂದರ್ಭದಲ್ಲಿ ಖಾಸಗಿ ಕಾಲೇಜುಗಳ ಶುಲ್ಕವನ್ನು ಕಟ್ಟದೇ ಖಾಸಗೀ ಕಾಲೇಜು ತೊರೆದು ಸರ್ಕಾರಿ ಕಾಲೇಜಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಆದರೆ, ಈ ಶೈಕ್ಷಣಿಕ ವರ್ಷದಲ್ಲಿ ಮತ್ತೆ ದಾಖಲಾತಿಯಲ್ಲಿ ಇಳಿಕೆಯಾಗಿರುತ್ತದೆ. ಈ ಮಧ್ಯಯೂ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಹಾಗೂ ಸಮಯಕ್ಕೆ ಸರಿಯಾದ ಸಾರಿಗೆ ಸೌಲಭ್ಯವಿಲ್ಲದೆ ಗ್ರಾಮೀಣ ಭಾಗದಿಂದ ನಗರಕ್ಕೆ ಬಂದು ಸಾವಿರಾರು ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಯನ ನಡೆಸಲು ಬರುತ್ತಿದ್ದಾರೆ.
ಇಷ್ಟು ಕಷ್ಟಗಳ ಮದ್ಯ ವಿದ್ಯಾರ್ಥಿಗಳಿಗೆ ಪಾಠ ಮಾಡಲು ಇಲ್ಲಿ ಅತಿಥಿ ಉಪನ್ಯಾಸಕರೇ ಇಲ್ಲಾ ಕಳೆದ 14 ದಿನಗಳಿಂದ ಹೋರಾಟ ಮಾಡುತ್ತಿದ್ದು ಸರ್ಕಾರ ಅವರ ಬೇಡಿಕೆ ಈಡೇರಿಸಬೇಕು ಇಲ್ಲಾವಾದರೆ ರಾಜ್ಯವಾಪ್ತಿ ವಿದ್ಯಾರ್ಥಿಗಳು ಬಿದಿಗಿಳಿದು ಹೋರಾಟ ಮಾಡುತ್ತೆವೆ ಎಂದು ಎಚ್ಚರಿಸಿದರು.
ಎಸ್‌ಎಫ್‌ಐನ ಜಿಲ್ಲಾ ಮುಖಂಡ ಚಂದ್ರು ರಾಠೋಡ ಮಾತನಾಡಿ, ಪ್ರತೀ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ಬೋಧನೆ ಮಾಡುವ ನೂರಾರು ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಪಾಠಗಳಿಂದ ದೂರ ಉಳಿಯುತ್ತಿದ್ದಾರೆ. ಇದರಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆಯನ್ನು ದೂರ ಮಾಡುವುದಕ್ಕೆ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಖಾಯಂ ಉಪನ್ಯಾಸಕರ ಅಗತ್ಯವಿದೆ ಎಂದರು.
ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಪ್ರದೀಪ್ ಮಾತನಾಡಿ, ರಾಜ್ಯದ ಅತಿಥಿ ಉಪನ್ಯಾಸಕರ ಪರವಾಗಿ ನೀತಿ ನಿಯಮಾವಳಿಗಳನ್ನು ರೂಪಿಸಿ ಸೇವಾ ಭದ್ರತೆ ಒದಗಿಸಿ, ಸಕಾಲಕ್ಕೆ ವೇತನವನ್ನು ನೀಡಿ ಅವರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವೇ ಬಗೆಹರಿಸಲು ಮುಂದಾಗಿ, ತರಗತಿಗಳು ಸುಸಜ್ಜಿತವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.
ಎಸ್‌ಎಫ್‌ಐನ ತಾಲೂಕು ಕಾರ್ಯದರ್ಶಿ ಶರಣು ಎಂ ಮಾತನಾಡಿ, ಸ್ಥಳೀಯವಾಗಿ ಬಸ್ ಸಮಸ್ಯೆ, ವಿದ್ಯಾರ್ಥಿವೇತನ, ಶುಲ್ಕ ಸಮಸ್ಯೆ ಇದ್ದು, ಈ ಕುರಿತು ಮಾನ್ಯ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲು ಒತ್ತಾಯಿಸಿದರು.
ಹೋರಾಟದ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ ಕಿರಣಕುಮಾರ ಕುಲಕರ್ಣಿ ಅವರು ಮನವಿ ಸ್ವೀಕರಿಸಿ, ಸರ್ಕಾರಕ್ಕೆ ಮನವಿ ಮುಟ್ಟಿಸುತ್ತೇನೆ ಎಂದು ಭರವಸೆ ನೀಡಿದರು. ಸ್ಥಳೀಯ ಬೇಡಿಕೆಗಳ ಕುರಿತು ನನ್ನ ಅಧ್ಯಕ್ಷತೆಯಲ್ಲಿ ಆದಷ್ಟು ಬೇಗ ಸಭೆ ಮಾಡುತ್ತೆನೆ ಎಂದು ತಿಳಿಸಿದರು.
ಹೋರಾಟದಲ್ಲಿ ಎಸ್‌ಎಫ್‌ಐನ ರವಿ ಹಾದಿಮನಿ, ಅಂಜಲಿ, ಬಸವನಗೌಡ್ರ, ಶಿವಲಿಲಾ, ವಾಸುದೇವ, ಬಸವರಾಜ, ಭೂಮಿಕಾ, ಪ್ರವೀಣ್, ರವಿ, ಆಕಾಶ, ಸವಿತಾ, ಶಾಂತಾ, ದೀಪಾ, ಬೀಮವ್ವ, ಶಿವು, ವಿರೇಶ, ನೀಲು, ಮಾರುತಿ ಗಡ್ಡಿ, ಶಿವರಾಜ್, ದರ್ಶನ, ಕೃಷ್ಣಾ, ರಜಿಯಾ, ಅಂಬಿಕಾ, ನೇತ್ರಾ, ಶಾವಕ್ಕಾ, ಪ್ರಿಯಾಂಕಾ, ಐಶ್ವರ್ಯ, ಭಾಗ್ಯ, ರತ್ನಾ, ವಿಜಯಲಕ್ಷ್ಮಿ, ಮಹಾದೇವಿ, ಶಶಿಕಲಾ, ಅರ್ಜುನ, ಅಭಿ ಹಾಗೂ ನೂರಾರು ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.