ಗಜೇಂದ್ರಗಡ | ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆ ಈಡೇರಿಸುವಂತೆ ಎಸ್ಎಫ್‌ಐ ಆಗ್ರಹ

Date:

ರಾಜ್ಯದಲ್ಲಿ 430ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ 23ರಿಂದ ರಾಜ್ಯದಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಕೈಗೊಳ್ಳಲಿದ್ದು, ಅದಕ್ಕೆ ಬೆಂಬಲ ಸೂಚಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ ಗಜೇಂದ್ರಗಡ ತಾಲೂಕು ಸಮಿತಿ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದೆ.

- Advertisement -

ಈ ಸಂದರ್ಭದಲ್ಲಿ ಎಸ್‌ಎಫ್‌ಐ ರಾಜ್ಯ ಪದಾಧಿಕಾರಿ ಗಣೇಶ ರಾಠೋಡ್ ಮಾತನಾಡಿ, ಕೊರೊನ ಸಾಂಕ್ರಾಮಿಕ ಸಂದರ್ಭದಲ್ಲಿ ಖಾಸಗಿ ಕಾಲೇಜುಗಳ ಶುಲ್ಕವನ್ನು ಕಟ್ಟದೇ ಖಾಸಗೀ ಕಾಲೇಜು ತೊರೆದು ಸರ್ಕಾರಿ ಕಾಲೇಜಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಆದರೆ, ಈ ಶೈಕ್ಷಣಿಕ ವರ್ಷದಲ್ಲಿ ಮತ್ತೆ ದಾಖಲಾತಿಯಲ್ಲಿ ಇಳಿಕೆಯಾಗಿರುತ್ತದೆ. ಈ ಮಧ್ಯಯೂ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಹಾಗೂ ಸಮಯಕ್ಕೆ ಸರಿಯಾದ ಸಾರಿಗೆ ಸೌಲಭ್ಯವಿಲ್ಲದೆ ಗ್ರಾಮೀಣ ಭಾಗದಿಂದ ನಗರಕ್ಕೆ ಬಂದು ಸಾವಿರಾರು ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಯನ ನಡೆಸಲು ಬರುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇಷ್ಟು ಕಷ್ಟಗಳ ಮದ್ಯ ವಿದ್ಯಾರ್ಥಿಗಳಿಗೆ ಪಾಠ ಮಾಡಲು ಇಲ್ಲಿ ಅತಿಥಿ ಉಪನ್ಯಾಸಕರೇ ಇಲ್ಲಾ ಕಳೆದ 14 ದಿನಗಳಿಂದ ಹೋರಾಟ ಮಾಡುತ್ತಿದ್ದು ಸರ್ಕಾರ ಅವರ ಬೇಡಿಕೆ ಈಡೇರಿಸಬೇಕು ಇಲ್ಲಾವಾದರೆ ರಾಜ್ಯವಾಪ್ತಿ ವಿದ್ಯಾರ್ಥಿಗಳು ಬಿದಿಗಿಳಿದು ಹೋರಾಟ ಮಾಡುತ್ತೆವೆ ಎಂದು ಎಚ್ಚರಿಸಿದರು.

ಎಸ್‌ಎಫ್‌ಐನ ಜಿಲ್ಲಾ ಮುಖಂಡ ಚಂದ್ರು ರಾಠೋಡ ಮಾತನಾಡಿ, ಪ್ರತೀ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ಬೋಧನೆ ಮಾಡುವ ನೂರಾರು ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಪಾಠಗಳಿಂದ ದೂರ ಉಳಿಯುತ್ತಿದ್ದಾರೆ. ಇದರಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆಯನ್ನು ದೂರ ಮಾಡುವುದಕ್ಕೆ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಖಾಯಂ ಉಪನ್ಯಾಸಕರ ಅಗತ್ಯವಿದೆ ಎಂದರು.

ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಪ್ರದೀಪ್ ಮಾತನಾಡಿ, ರಾಜ್ಯದ ಅತಿಥಿ ಉಪನ್ಯಾಸಕರ ಪರವಾಗಿ ನೀತಿ ನಿಯಮಾವಳಿಗಳನ್ನು ರೂಪಿಸಿ ಸೇವಾ ಭದ್ರತೆ ಒದಗಿಸಿ, ಸಕಾಲಕ್ಕೆ ವೇತನವನ್ನು ನೀಡಿ ಅವರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವೇ ಬಗೆಹರಿಸಲು ಮುಂದಾಗಿ, ತರಗತಿಗಳು ಸುಸಜ್ಜಿತವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಎಸ್‌ಎಫ್‌ಐನ ತಾಲೂಕು ಕಾರ್ಯದರ್ಶಿ ಶರಣು ಎಂ ಮಾತನಾಡಿ, ಸ್ಥಳೀಯವಾಗಿ ಬಸ್ ಸಮಸ್ಯೆ, ವಿದ್ಯಾರ್ಥಿವೇತನ, ಶುಲ್ಕ ಸಮಸ್ಯೆ ಇದ್ದು, ಈ ಕುರಿತು ಮಾನ್ಯ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲು ಒತ್ತಾಯಿಸಿದರು.

ಹೋರಾಟದ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ ಕಿರಣಕುಮಾರ ಕುಲಕರ್ಣಿ ಅವರು ಮನವಿ ಸ್ವೀಕರಿಸಿ, ಸರ್ಕಾರಕ್ಕೆ ಮನವಿ ಮುಟ್ಟಿಸುತ್ತೇನೆ ಎಂದು ಭರವಸೆ ನೀಡಿದರು. ಸ್ಥಳೀಯ ಬೇಡಿಕೆಗಳ ಕುರಿತು ನನ್ನ ಅಧ್ಯಕ್ಷತೆಯಲ್ಲಿ ಆದಷ್ಟು ಬೇಗ ಸಭೆ ಮಾಡುತ್ತೆನೆ ಎಂದು ತಿಳಿಸಿದರು.

ಹೋರಾಟದಲ್ಲಿ ಎಸ್‌ಎಫ್‌ಐನ ರವಿ ಹಾದಿಮನಿ, ಅಂಜಲಿ, ಬಸವನಗೌಡ್ರ, ಶಿವಲಿಲಾ, ವಾಸುದೇವ, ಬಸವರಾಜ, ಭೂಮಿಕಾ, ಪ್ರವೀಣ್, ರವಿ, ಆಕಾಶ, ಸವಿತಾ, ಶಾಂತಾ, ದೀಪಾ, ಬೀಮವ್ವ, ಶಿವು, ವಿರೇಶ, ನೀಲು, ಮಾರುತಿ ಗಡ್ಡಿ, ಶಿವರಾಜ್, ದರ್ಶನ, ಕೃಷ್ಣಾ, ರಜಿಯಾ, ಅಂಬಿಕಾ, ನೇತ್ರಾ, ಶಾವಕ್ಕಾ, ಪ್ರಿಯಾಂಕಾ, ಐಶ್ವರ್ಯ, ಭಾಗ್ಯ, ರತ್ನಾ, ವಿಜಯಲಕ್ಷ್ಮಿ, ಮಹಾದೇವಿ, ಶಶಿಕಲಾ, ಅರ್ಜುನ, ಅಭಿ ಹಾಗೂ ನೂರಾರು ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...