ಗಂಗಾವತಿ | ಹೃದಯಾಘಾತದಿಂದ ಗದಗನ 25 ವರ್ಷದ ಯುವಕ ಸಾವು

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನ.04, ಶನಿವಾರ ನಡೆದಿದೆ. ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕಾರ್ತಿಕಗೌಡ (25) ಮೃತ ಯುವಕ.

- Advertisement -

ಗೆಳೆಯರ ಬಳಗದ 10 ಜನ ಸೇರಿ ಅಂಜನಾದ್ರಿ ದರ್ಶನ ಪಡೆಯುವುದಕ್ಕೆ ಬಂದಿದ್ದರು, ಈ ವೇಳೆ ಮೆಟ್ಟಿಲುಗಳನ್ನು ಹತ್ತುವಾಗ ಯುವಕನಿಗೆ ಏಕಾಏಕಿ ಹೃದಯಘಾತ ಉಂಟಾಗಿದ್ದು, ಸ್ಥಳದಲ್ಲೇ ಮೂರ್ಛೆ ಹೋಗಿದ್ದಾನೆ. ತಕ್ಷಣ ಗೆಳೆಯರು ಸೇರಿಕೊಂಡು ಆತನನ್ನು ಸ್ಥಳೀಯ ಆನೆಗುಂದಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ, ಗಂಗಾವತಿ ತಾಲೂಕು ಆಸ್ಪತ್ರೆ ತರುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ವೈದ್ಯರು ಮಾಹಿತಿ ನೀಡಿದ್ದಾಗಿ ಯುವಕನ ಸಂಬಂಧಿ ನಾಗಮ್ಮ ಅವರು ಮಾದ್ಯಮಗಳಿಗೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...