ಗಂಗಾವತಿ | ಹಂಪಿ ಪ್ರಕರಣದ ಬೆನ್ನಲ್ಲೇ ಮತ್ತೊಂದು ಘಟನೆ; ಮಹಿಳೆಯರ ಮುಖದ ಮೇಲೆ ಸಿಗರೇಟು ಹೊಗೆ ಬಿಟ್ಟ ದುಷ್ಟರು

Date:

ಕೆಲ ಕಿಡಿಗೇಡಿಗಳು ಸಿಗರೇಟು ಹೊಗೆಯನ್ನು ವಾಯು ವಿಹಾರಕ್ಕೆಂದು ಬಂದಿದ್ದ ಯುವತಿಯರು, ಮಹಿಳೆಯರ ಮುಖದ ಮೇಲೆ ಬಿಟ್ಟು ದುಷ್ಟತನ ಮೆರೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಎಂಎನ್ಎಂ ಶಾಲೆಯ ಬಳಿ ಶುಕ್ರವಾರ ರಾತ್ರಿ ನಡೆದಿದೆ.

- Advertisement -

ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ವಾಯು ವಿಹಾರದಲ್ಲಿ ತೊಡಗಿದ್ದ ಮಹಿಳೆಯರು, ಪುರುಷರು ಗುಂಪಾಗಿ ಕಿಡಿಗೇಡಿ ಯುವಕರನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದು, ಬಳಿಕ ಕೂಡಿ ಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಯುವಕರು ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕಕಾರಿ ವಾತಾವರಣ ನಿರ್ಮಾಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಕುವೆಂಪು ಬಡಾವಣೆ ಮತ್ತು ಜಯನಗರದ ಮಧ್ಯೆ ಇರುವ ಮಳೆಮಲ್ಲೇಶ್ವರ-ಗಾಯತ್ರಿ ದೇವಸ್ಥಾನಕ್ಕೆ ಹೋಗುವ ಮಾರ್ಗ ಮಧ್ಯದ ಜನ ವಸತಿ ಪ್ರದೇಶದಲ್ಲಿ ನೂತನ ವಸತಿ ಲೇಔಟ್ ನಿರ್ಮಾಣವಾಗಿದೆ. ಸಂಜೆ ಮತ್ತು ಬೆಳಿಗ್ಗೆ ವಾಯು ವಿಹಾರಕ್ಕೆ ಹೋಗುವ ಜನರಿಗೆ ಈ ಲೇಔಟ್​ನ ರಸ್ತೆಗಳು ಹೇಳಿ ಮಾಡಿಸಿದಂತಿವೆ. ಹೀಗಾಗಿ ಎಂದಿನಂತೆ ಶುಕ್ರವಾರ ರಾತ್ರಿ 9 ಗಂಟೆಯ ನಂತರ ಮಹಿಳೆಯರು ವಾಯು ವಿಹಾರದಲ್ಲಿ ತೊಡಗಿದ್ದರು ಎನ್ನಲಾಗಿದೆ.

ಈ ಸಂದರ್ಭದಲ್ಲಿ ರಸ್ತೆಯ ಬದಿಯಲ್ಲಿ ಕುಳಿತಿದ್ದ ಯುವಕರು ಸಿಗರೇಟು ಸೇದಿ, ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಮಹಿಳೆಯರ ಮುಖಕ್ಕೆ ಸಿಗರೇಟಿನ ಹೊಗೆ ಬಿಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಹಿಳೆಯರು ಪ್ರಶ್ನಿಸಿದ್ದಕ್ಕೆ “ನಮ್ಮ ಹಣದಲ್ಲಿ ನಾವು ಸೇದುತ್ತೇವೆ. ನೀವ್ಯಾರು ಕೇಳಲು. ಮುಖಕ್ಕೆ ಹೊಗೆ ಬರಬಾರದು ಎಂದರೆ ಈ ರಸ್ತೆಯಲ್ಲಿ ಓಡಾಡಬಾರದು” ಎಂದು ಯುವಕರು ತಾಕೀತು ಮಾಡಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ತಿಳಿದುಬಂದಿದೆ. ಇದರಿಂದ ಕೋಪಗೊಂಡ ಮಹಿಳೆಯರು, ಯುವಕರನ್ನು ತರಾಟೆಗೆ ತೆಗೆದುಕೊಳ್ಳುತಿದ್ದಂತೆಯೇ ಜನ ಜಮಾಯಿಸಿ ಯುವಕರನ್ನು ಹಿಡಿಯಲು ಯತ್ನಿಸಿದ್ದಾರೆ. ಈ ಪೈಕಿ ಇಬ್ಬರು ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ ಬಳಿಕ 112 ವಾಹನ ಸ್ಥಳಕ್ಕೆ ಬಂದು ಯುವಕರನ್ನು ಕರೆದೊಯ್ದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶನಿವಾರ ಜಯನಗರ, ಕುವೆಂಪು ಬಡಾವಣೆ, ಸತ್ಯನಾರಾಯಣ ಪೇಟೆಯ ಸುಮಾರು 150ಕ್ಕೂ ಹೆಚ್ಚು ಜನ ಆಗಮಿಸಿ ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದರು.

ದೂರು ಸ್ವೀಕರಿಸಿದ ಬಳಿಕ ಪ್ರತಿಕ್ರಿಯೆ ನೀಡಿದ ಡಿವೈಎಸ್‌ಪಿ ಸಿದ್ದಲಿಂಗಪ್ಪಗೌಡ ಪಾಟೀಲ್, “ಖಾಸಗಿ ಲೇಔಟ್​ಗಳಲ್ಲಿ ಸಿಸಿ ಕ್ಯಾಮರಾ ಹಾಕಿಸುವಂತೆ ನಗರಸಭೆಗೆ ಸೂಚನೆ ನೀಡಲಾಗುವುದು. ಹೆಚ್ಚಿನ ಭದ್ರತೆ ನೀಡಲು ಪೊಲೀಸ್ ಗಸ್ತು ನಿಯೋಜಿಸಲಾಗುವುದು” ಎಂದು ಭರವಸೆ ನೀಡಿದರು.

ಇದೇ ಮಾರ್ಚ್‌ ತಿಂಗಳ ಮೊದಲ ವಾರದಲ್ಲಿ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿಯಿರುವ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ವಾಯುವಿಹಾರಕ್ಕೆಂದು ಹೋಗಿದ್ದ ಸಂದರ್ಭದಲ್ಲಿ ವಿದೇಶಿಯರಿದ್ದ ಗುಂಪಿನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಬೆಳಕಿಗೆ ಬಂದಿತ್ತು. ಅಲ್ಲದೆ, ಆರೋಪಿಗಳನ್ನು ಪುರುಷ ಪ್ರವಾಸಿಗರನ್ನು ಕಾಲುವೆಗೆ ತಳ್ಳಿದ್ದು, ಒಡಿಶಾ ಮೂಲದ ಪ್ರವಾಸಿ ಯುವಕ ಬಿಬಾಸ್ ಮೃತಪಟ್ಟಿದ್ದರು. ಅಮೆರಿಕದ ಪ್ರವಾಸಿಗ ಡೇನಿಯಲ್ ಹಾಗೂ ಇಸ್ರೇಲ್ ಮೂಲದ ಮಹಿಳೆ, ಗಂಗಾವತಿ ತಾಲೂಕಿನ ಆನೆಗೊಂದಿಯ ಹೋಂ ಸ್ಟೇವೊಂದರ ಮಾಲಕಿ​, ಮಹಾರಾಷ್ಟ್ರದ ನಾಸಿಕ್​ನ ಪಂಕಜ್ ಪಟೇಲ್ ಹಲ್ಲೆಗೊಳಗಾಗಿದ್ದರು.

ಈ ಸುದ್ದಿ ಓದಿದ್ದೀರಾ? ಗಂಗಾವತಿ ಪ್ರಕರಣ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ; ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ದಾಳಿ

ಇದೀಗ ತಾಲೂಕಿನ ಎಂಎನ್ಎಂ ಶಾಲೆಯ ಬಳಿ ಶುಕ್ರವಾರ ರಾತ್ರಿ 9 ಗಂಟೆಯ ನಂತರ ವಾಯು ವಿಹಾರದಲ್ಲಿ ನಿರತರಾಗಿದ್ದ ಮಹಿಳೆಯರ ಮುಖದ ಮೇಲೆ ಕಿಡಿಗೇಡಿಗಳು ಸಿಗರೇಟಿನ ಹೊಗೆ ಬಿಟ್ಟು ನೀಚತನ ಮೆರೆದಿರುವುದಾಗಿ ವರದಿಯಾಗಿದ್ದು, ಸ್ಥಳೀಯ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ರಾತ್ರಿವೇಳೆ ಸ್ವತಂತ್ರವಾಗಿ ತಿರುಗಾಡದಂತ ಪರಿಸ್ಥಿತಿ ಬಂದೊದಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

SIR | ಒಂದೇ ಮತಗಟ್ಟೆಯಲ್ಲಿ ಶೇ. 62ರಷ್ಟು ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ರಮೇಶ್ ಬಾಬು ದೂರು

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...