ಗಂಗಾವತಿ | ವಿದೇಶಿ ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣ; ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Date:

Advertisements

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಣಾಪುರದ ಬಳಿ ವಿದೇಶಿ ಪ್ರವಾಸಿಗರ ಮೇಲೆ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕಾಲುವೆಯಲ್ಲಿ ನಾಪತ್ತೆಯಾಗಿದ್ದ ಒಡಿಶಾ ರಾಜ್ಯದ ಬಿಬಾಸ್(42) ಎಂಬ ವ್ಯಕ್ತಿಯ ಶವ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.

ಮಲ್ಲಾಪುರದ ವಿದ್ಯುತ್ ಉತ್ಪಾದನೆ ಘಟಕದ ಬಳಿ ಶವ ಪತ್ತೆಯಾಗಿದ್ದು, ಅಗ್ನಿಶಾಮಕ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯರ ನೆರವಿನಿಂದ ಶವವನ್ನು ಹೊರಕ್ಕೆ ತೆಗೆಯಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಮೃತನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಅಮೆರಿಕದ ಪ್ರವಾಸಿಗ ಡೇನಿಯಲ್ ಹಾಗೂ ಇಸ್ರೇಲ್ ಮೂಲದ ಮಹಿಳೆ, ಗಂಗಾವತಿ ತಾಲೂಕಿನ ಆನೆಗೊಂದಿಯ ಹೋಂಸ್ಟೇವೊಂದರ ಮಾಲಕಿ​, ಮಹಾರಾಷ್ಟ್ರದ ನಾಸಿಕ್​ನ ಪಂಕಜ್ ಪಟೇಲ್​ ಹಾಗೂ ಒಡಿಶಾದ ಬಿಬಾಸ್ ಎಂಬುವರು ಜೊತೆಯಾಗಿ ವಿಹಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಗುರುವಾರ ಮಧ್ಯರಾತ್ರಿ ಅಪರಿಚಿತ ಮೂವರು ಯುವಕರು ಈ ಗುಂಪಿನ ಮೇಲೆ ದಾಳಿ ಮಾಡಿದ್ದರು. ಹಣಕ್ಕೆ ಬೇಡಿಕೆ ಇಟ್ಟು, ಈ ಗುಂಪಿನಲ್ಲಿದ್ದ ಪುರುಷರನ್ನು ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಗೆ ತಳ್ಳಿ, ವಿದೇಶಿ ಮಹಿಳೆ ಮತ್ತು ಸ್ಥಳೀಯ ಮಹಿಳೆಯ ಮೇಲೆ ಆರೋಪಿಗಳು ಲೈಂಗಿಕ ಶೋಷಣೆ ಮಾಡಿ ಅತ್ಯಾಚಾರ ಎಸಗಿರುವ ಬಗ್ಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು.

Advertisements

ಸ್ಥಳೀಯ ಪೊಲೀಸರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕಾಲುವೆಗೆ ತಳ್ಳಿದ್ದ ವ್ಯಕ್ತಿಗಳ ಪೈಕಿ ಡೇನಿಯಲ್ ಮತ್ತು ಪಂಕಜ್ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದರು. ಒಡಿಶಾದ ಬಿಬಾಸ್ ಕಾಲುವೆಯಲ್ಲಿ ನಾಪತ್ತೆಯಾಗಿದ್ದರು. ಶುಕ್ರವಾರ ಇಡೀ ದಿನ ಹುಡುಕಾಡಿದರೂ ಆತನ ಸುಳಿವು ಸಿಕ್ಕಿರಲಿಲ್ಲ. ಶನಿವಾರ ಬೆಳಿಗ್ಗೆ ಮಲ್ಲಾಪುರದಲ್ಲಿ ಶವ ಪತ್ತೆಯಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಆರೋಪಿಗಳ ಕುರಿತು ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಈಗಾಗಲೇ ಆರೋಪಿಗಳ ಹುಕಾಟಕ್ಕೆ ಶೋಧಕಾರ್ಯ ಆರಂಭವಾಗಿದೆ. ಆರೋಪಿಗಳು ಸಿಕ್ಕ ಬಳಿಕ ಹೆಚ್ಚಿನ ಮಾಹಿತಿ ಹೊರಬರಬೇಕಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅರಣ್ಯ ಪಾಲಾದ ಲಕ್ಷ್ಮಣಪುರ ಗ್ರಾಮ : ಪರಿಹಾರವೂ ಇಲ್ಲ, ಪುನರ್ವಸತಿಯು ಇಲ್ಲ

ಪ್ರಕರಣದ ಹಿನ್ನೆಲೆ: ಗುರುವಾರ ತಡರಾತ್ರಿ ತಾಲೂಕಿನ ಪ್ರವಾಸಿತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ಹೋಗುವ ರಸ್ತೆ ಮಧ್ಯದಲ್ಲಿನ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಗಿಟಾರ್ ಬಾರಿಸುತ್ತ ಕುಳಿತಿದ್ದ ಅಮೆರಿಕ ಹಾಗೂ ಇಸ್ರೇಲ್ ಮೂಲದ ಇಬ್ಬರು ವಿದೇಶಿ ಹಾಗೂ ಮೂವರು ದೇಶಿಯ ಪ್ರವಾಸಿಗರ ಮೇಲೆ ಮೂವರು ಯುವಕರು ಹಲ್ಲೆಗೆ ಮುಂದಾಗಿದ್ದರು. ಈ ವೇಳೆ ವಾಗ್ವಾದ ನಡೆದು ಪರಸ್ಪರ ಕೈಕೈ ಮಿಲಾಯಿಸಿದ್ದು, ಪ್ರವಾಸಿಗರ ತಂಡದಲ್ಲಿದ್ದ ಒಡಿಶಾದ ಪುರುಷ ಪ್ರವಾಸಿಗನನ್ನು ಆರೋಪಿಗಳು ಕಾಲುವೆಗೆ ತಳ್ಳಿದ್ದರು. ಬಳಿಕ ಇವರ ಗುಂಪಿನಲ್ಲಿದ್ದ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಆರೋಪವೂ ಕೇಳಿ ಬಂದಿತ್ತು. ಈ ಬಗ್ಗೆ ದೂರು ಕೂಡ ದಾಖಲಾಗಿತ್ತು. ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಒಡಿಶಾ ಮೂಲದ ಪ್ರವಾಸಿ ಯುವಕ ಬಿಬಾಸ್ ಶವ ಪತ್ತೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X