ಗಂಗಾವತಿ | ಕೇಂದ್ರ ಸರ್ಕಾರದ ಯೋಜನೆಗಳ ಜಾಗೃತಿ ಅಭಿಯಾನ; ಛಾಯಾಚಿತ್ರ ಪ್ರದರ್ಶನ

Date:

ಬಳ್ಳಾರಿಯ ಕೇಂದ್ರ ಸಂವಹನ ಇಲಾಖೆಯಿಂದ ಫೆಬ್ರವರಿ 19ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಛಾಯಾಚಿತ್ರ ಪ್ರದರ್ಶನ ಹಾಗೂ ಜನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

- Advertisement -

ನಗರಸಭೆ ಅಧ್ಯಕ್ಷ ಮೌಲಾಸಾಬ್ ದಾದೇಸಾಬ್ ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆ ನೆರವೇರಿಸಿ, “ಗ್ರಾಮೀಣ ಭಾಗಗಳ ಜನರಿಗೆ ಸರ್ಕಾರದ ಯೋಜನೆಗಳ ಮಾಹಿತಿ ತಲುಪಬೇಕು. ಇಂತಹ ಛಾಯಾಚಿತ್ರ ಪ್ರದರ್ಶನಗಳು ಮಾಹಿತಿಪೂರ್ಣವಾಗಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
ಕೇಂದ್ರ ಸರ್ಕಾರದ ಯೋಜನೆ

ಎಸ್‌ಬಿಐ ಬ್ಯಾಂಕ್‌ನ ಆರ್ಥಿಕ ಸಲಹೆಗಾರ ಆಂಜನೇಯ ಮಾತನಾಡಿ, “ಕೇಂದ್ರ ಸರ್ಕಾರದ ಪಿಂಚಣಿ ಹಾಗೂ ವಿಮಾ ಯೋಜನೆಗಳು ತಳಮಟ್ಟದ ಜನರಿಗೆ ಆರ್ಥಿಕ ಭದ್ರತೆ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಟಲ್ ಪಿಂಚಣಿ ಯೋಜನೆ ವಯಸ್ಕರಿಗೆ ಹಣಕಾಸು ಭದ್ರತೆ ಒದಗಿಸುತ್ತದೆ. ಜನರ ಸುರಕ್ಷೆಯ ಹಿತಕ್ಕಾಗಿ ಕೇಂದ್ರ ಸರ್ಕಾರ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ ಪರಿಚಯಿಸಿದೆ. ಅಟಲ್ ಪಿಂಚಣಿ ಯೋಜನೆಯಡಿ ವೃದ್ಧರು ಆರ್ಥಿಕ ಭದ್ರತೆ ಪಡೆಯಬಹುದಾಗಿದೆ” ಎಂದು ತಿಳಿಸಿದರು.

ಕೇಂದ್ರ ಯೋಜನೆ

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರುದ್ರೇಶ್ ಮಾತನಾಡಿ, “ಮಹಿಳೆಯರು ಮತ್ತು ಮಕ್ಕಳ ಹಿತಕ್ಕಾಗಿ ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಯೋಜನೆಗಳ ಮಾಹಿತಿಯನ್ನು ಛಾಯಾಚಿತ್ರ ಪ್ರದರ್ಶನದಲ್ಲಿ ನೀಡಲಾಗಿದ್ದು, ಗ್ರಾಮೀಣ ಹಾಗೂ ನಗರ ಭಾಗಗಳ ಮಹಿಳೆಯರು ಇದರ ಪ್ರಯೋಜನ ಪಡೆಯಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜಿಬಿಜಿಬಿ ಮಸೂದೆ 2024 ಕುರಿತು ಶಾಸಕ ಅರ್ಷದ್ ರಿಜ್ವಾನ್‌ ಜತೆಗೆ ಬಿಎನ್‌ಪಿ ಮಾತುಕತೆ

ಆಯುಷ್ಮಾನ್ ಭಾರತ ಹಾಗೂ ಕ್ಷಯ ಮುಕ್ತ ಭಾರತ ಕುರಿತು ಆರೋಗ್ಯ ಇಲಾಖೆಯ ಆಶಾ ಬೇಗಂ ಮಾತನಾಡಿದರು. ಉಪ ತಹಶೀಲ್ದಾರ್ ರವಿ ಕುಮಾರ್, ಶಿಕ್ಷಣ ಇಲಾಖೆಯ ಉಮಾದೇವಿ ಪಾಟೀಲ್, ಡಿ ಆಂಜನೇಯ ಸ್ವಾಮಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಸನ್ನ, ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಅಧಿಕಾರಿ ಅಕ್ಷತಾ ಸಿ ಹೆಚ್, ಇಲಾಖೆಯ ಸಿಬ್ಬಂದಿ ರಾಮಕೃಷ್ಣಪ್ಪ ಹಾಗೂ ಲಕ್ಷ್ಮೀಕಾಂತ ಇದ್ದರು.

ಜಾಗೃತಿ ಕಾರ್ಯಕ್ರಮದ ಛಾಯಾಚಿತ್ರ ಪ್ರದರ್ಶನ ಫೆಬ್ರವರಿ 20ರಂದೂ ಕೂಡಾ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...