ಕೊಪ್ಪಳ | ಸಿಎಂ ಬರುವ ದಾರಿಯಲ್ಲಿ ವಿರುದ್ಧ ದಿಕ್ಕಿಗೆ ಸಾಗಿದ ಜನಾರ್ದನ ರೆಡ್ಡಿ ಕಾರು : ತಪ್ಪಿದ ಅನಾಹುತ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಝೀರೋ ಟ್ರಾಫಿಕ್ ಮೂಲಕ ಬಳ್ಳಾರಿಯ ಜಿಂದಾಲ್‌ ಕಡೆಗೆ ಹೋಗುವಾಗ, ದಾರಿ ಮಧ್ಯೆಯಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿದ ಘಟನೆ ನಡೆದಿದೆ. ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

- Advertisement -

ರಾಯಚೂರು ಪ್ರವಾಸ ಮುಗಿಸಿ ಶನಿವಾರ ಸಂಜೆ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಇದ್ದ ವಾಹನ ತೆರಳುತ್ತಿದ್ದಾಗ ಈ ಬೆಳವಣಿಗೆ ನಡೆದಿದೆ. ಗಂಗಾವತಿ ನಗರದ ಸಿಬಿಎಸ್ ವೃತ್ತದಲ್ಲಿ ಶನಿವಾರ ರಾತ್ರಿ ಗಾಲಿ ಜನಾರ್ದನ್ ರೆಡ್ಡಿ ಅವರು ಟ್ರಾಫಿಕ್ ಜಾಮ್ ಆಗಿದ್ದರಿಂದ ಡಿವೈಡರ್ ಹತ್ತಿಸಿ ವಿರುದ್ಧ ದಿಕ್ಕಿಗೆ ತೆರಳಿದ್ದಾರೆ. ಇದೇ ವೇಳೆ ಸಿಎಂ ಅವರ ಕಾರು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಿಎಂ ಸಿದ್ದರಾಮಯ್ಯ ರಾಯಚೂರು ಜಿಲ್ಲೆಗೆ ಎರಡು ದಿನದ ಪ್ರವಾಸದಲ್ಲಿರುವುದರಿಂದ ಝೀರೋ ಟ್ರಾಫಿಕ್ ಮಾಡಲಾಗಿದೆ. ಈ ನಡುವೆ ಸುಮಾರು 30 ನಿಮಿಷ ಟ್ರಾಫಿಕ್ ಜಾಮ್ ಆಗಿದ್ದರಿಂದ ರೆಡ್ಡಿ ಅವರ ಕಾರು ಚಾಲಕ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿದ್ದಾರೆ.

ವಡ್ಡರಹಟ್ಟಿ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಮುಗಿಸಿಕೊಂಡು ಶಾಸಕ ರೆಡ್ಡಿ ನಗರದತ್ತ ಪ್ರಯಾಣ ಮಾಡುತ್ತಿದ್ದರು. ಸಿಎಂ ಬರುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ನಾಗರಿಕರಂತೆಯೇ ಪೊಲೀಸರ ಸೂಚನೆ ಪಾಲಿಸಿದರು. ಆದರೆ ಕೆಲವು ನಿಮಿಷಗಳ ಕಾಲ ಕಾಯ್ದ ಅವರು, ಬಳಿಕ ತಮ್ಮ ವಾಹನವನ್ನು ರಸ್ತೆ ಡಿವೈಡರ್ ಹತ್ತಿಸಿ, ಕೊಂಡೊಯ್ದರು. ಈ ವೇಳೆ ಶಾಸಕ ರೆಡ್ಡಿ ಚಾಲಕನ ಪಕ್ಕದಲ್ಲಿನ ಸೀಟ್​ನಲ್ಲಿ ಕುಳಿತಿದ್ದರು. ರೆಡ್ಡಿ ವಾಹನ ಸಂಚರಿಸುತ್ತಿದ್ದಂತೆಯೇ, ಎದುರಿನಿಂದ ಅದೇ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿದ್ದ ವಾಹನ ತೆರಳಿತು.

ರಾತ್ರಿ ವೇಳೆ ಸ್ವಲ್ಪ ವ್ಯತ್ಯಾಸವಾಗಿದ್ದರೆ ಭಾರೀ ಅನಾಹುತ ಸಂಭವಿಸಬಹುದಿತ್ತು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಇದನ್ನು ಓದಿದ್ದೀರಾ? ಸುಬ್ರಹ್ಮಣ್ಯ | ಇಂದಿನಿಂದ ಕುಮಾರ ಪರ್ವತಕ್ಕೆ ಚಾರಣ: ಆನ್‌ಲೈನ್‌ ನೋಂದಣಿ ಮಾಡಿದರಷ್ಟೇ ಅವಕಾಶ

ಝೀರೋ ಟ್ರಾಫಿಕ್ ಭದ್ರತೆಯ ವೇಳೆ ಶಾಸಕ ಜನಾರ್ದನ ರೆಡ್ಡಿ ನಿಯಮ ಮುರಿದಿದ್ದಾರೆ. ಅವರಿಗೊಂದು ನ್ಯಾಯ, ಜನ ಸಾಮಾನ್ಯರಿಗೂ ಒಂದು ನ್ಯಾಯನಾ ಎಂದು ಸಾರ್ವಜನಿಕರು ಪ್ರಶ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ರಸ್ತೆಯಲ್ಲಿ ಬರ್ತ್‌ಡೇ ಪಾರ್ಟಿ: ಮನೆಗೆ ಹೋಗಲು ದಾರಿ ಕೇಳಿದ ವ್ಯಕ್ತಿಯ ಮೇಲೆ ಹಲ್ಲೆ, ಮೂವರ ವಿರುದ್ಧ ದೂರು

ಮುಂಡಗೋಡ: ರಸ್ತೆಯಲ್ಲಿ ಹುಟ್ಟುಹಬ್ಬದ ಆಚರಣೆ ಮಾಡುತ್ತಿದ್ದಾಗ ಮನೆಗೆ ಹೋಗಲು ಜಾಗ ಕೇಳಿದ್ದಕ್ಕೆ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...