ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರ, ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಕನ್ನಡ ಸಾಹಿತ್ಯ ಪರಿಷತ್ತ ಭವನದಲ್ಲಿ ಜರುಗಿತು.
ತಾಲೂಕು ಘಟಕದ ಮಾಜಿ ಅದ್ಯಕ್ಷ ಶ್ರೀನಿವಾಸ ಅಂಗಡಿಯವರು ನೂತನ ಅದ್ಯಕ್ಷ ರುದ್ರೇಶ ಎಮ್. ಆರಾಳ ಅವರಿಗೆ ಕನ್ನಡ ಧ್ವಜವನ್ನು ನೀಡುವುದರ ಮೂಲಕ ತಮ್ಮ ಅಧಿಕಾರ ಹಸ್ತಾಂತರಿಸಿದರು.
ನಾಡಗೀತೆ, ರೈತ ಗೀತೆಯೊಂದಿಗೆ ಆರಂಭಗೊಂಡ ಸಮಾರಂಭವನ್ನು ನಗರ ಸಭೆಯ ಅಧ್ಯಕ್ಷ ಮೌಲಾಸಾಬ್, ಹಿರಿಯ ಸಾಹಿತಿ ಶ್ರೀನಿವಾಸ್ ಅಂಗಡಿ ಅವರು ಭುವನೇಶ್ವರಿಯ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ನಗರ ಸಭೆಯ ಅಧ್ಯಕ್ಷ ಮೌಲಾಸಾಬ್ ಮಾತನಾಡಿ, ಕನ್ನಡ ಸಾರಸತ್ವ ಲೋಕಕ್ಕೆ ಗಂಗಾವತಿಯ ಜನತೆಯ ಸೇವೆ ಅಪಾರವಾಗಿದೆ. ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರ ನೇತೃತ್ವದಲ್ಲಿ ಜರುಗಿದ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಇತಿಹಾಸವನ್ನು ಸ್ಮರಿಸುವಂತಿದೆ. ಈಗಾಗಲೇ ಎಂಟು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದ ಕಸಾಪ ತಾಲೂಕ ಘಟಕ 9ನೇ ಸಾಹಿತ್ಯ ಸಮ್ಮೇಳನಕ್ಕೆ ತಮ್ಮಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.
ಇದನ್ನು ಓದಿದ್ದೀರಾ? ವಿಜಯಪುರ | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲನ ಬಂಧನ
ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ರುದ್ರೇಶ್ ಆರಾಳ್ ಮಾತನಾಡಿ, ಕನ್ನಡ ನಾಡು, ನುಡಿ, ನೆಲ, ಜಲ, ಸಂಬಂಧಿಸಿದಂತೆ ಸರ್ವರ ಸಹಕಾರ ಪಡೆದು ಅತ್ಯಂತ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.
ಮಾಜಿ ಅಧ್ಯಕ್ಷ ಶ್ರೀನಿವಾಸ್ ಅಂಗಡಿ ತಮ್ಮ ಅಧಿಕಾರದ ಅವಧಿಯಲ್ಲಿನ ಎಲ್ಲಾ ಕನ್ನಡ ಪರ ಕೆಲಸಗಳಿಗೆ ಸೇವೆ ಸಲ್ಲಿಸಿದ ತೃಪ್ತಿ ಇದೆ ಎಂದು ಹೇಳಿದರು.
ಪ್ರಾಚಾರ್ಯ ಡಾಕ್ಟರ್ ಶರಣಬಸಪ್ಪ ಕೋಲ್ಕಾರ್, ಡಾಕ್ಟರ್ ಮಲ್ಲಪ್ಪ ಹೊಸೂರ್, ರೋಟರಿ ಸಂಸ್ಥೆಯ ಅಧ್ಯಕ್ಷ ಟಿ ಆಂಜನೇಯ ಸೋಮಶೇಖರ ಗೌಡ ಜೆ ನಾಗರಾಜ್ ಸೇರಿದಂತೆ ಕೊಪ್ಪಳ ಜಿಲ್ಲೆಯ ಎಲ್ಲ ತಾಲೂಕುಗಳ ಕಸಾಪ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
