ಅರಬಿ ಸಮುದ್ರದಲ್ಲಿ ಮೀನುಗಾರಿಕೆಯ ಸಂದರ್ಭದಲ್ಲಿ ಜಾರಿ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಮೃತ ಮೀನುಗಾರ ಮಾಚ (49) ಎಂದು ಗುರುತಿಸಲಾಗಿದ್ದು, ಜನವರಿ 6 ರಂದು ಬೆಳಿಗ್ಗೆ 10:30 ಗಂಟೆಗೆ ಗಂಗೊಳ್ಳಿ ಬಂದರ್ ನಿಂದ 12 ನ್ಯಾಟಿಕಲ್ ಮೈಲು ದೂರದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಅರಬ್ಬಿ ಸಮುದ್ರಕ್ಕೆ ಬಿದ್ದು ಕಾಣೆಯಾಗಿದ್ದು ಇಂದು ಮದ್ಯಾಹ್ನದ ಹೊತ್ತಿಗೆ ಮೃತ ದೇಹ ಪತ್ತೆಯಾಗಿದೆ.
ಈ ಬಗ್ಗೆ ಗಂಗೊಳ್ಳಿ ಠಾಣಾ ಯು.ಡಿ.ಆರ್ ಕ್ರಮಾಂಕ 01/2025 ಕಲಂ:194 BNSS BNSS ರಂತೆ ಪ್ರಕರಣ ದಾಖಲಾಗಿದೆ.
