ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಬಂದರಿನಿಂದ ಹೊರಟು ಮೀನುಗಾರಿಕೆಗೆ ತೆರಳಿದ್ದ ಗಂಗೊಳ್ಳಿಯ ನಾರಾಯಣ ಮೊಗವೇರ (58) ಎಂಬ ವ್ಯಕ್ತಿಯು ಜನವರಿ 02 ರಂದು ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ಬೋಟಿನಿಂದ ಕಾಲು ಜಾರಿ ಅರಬ್ಬಿ ಸಮುದ್ರಕ್ಕೆ ಬಿದ್ದು ಕಾಣೆಯಾಗಿದ್ದು, ಇತರೆ ಮೀನುಗಾರರು ಹುಡುಕಾಡಿದರೂ ಈವರೆಗೆ ಪತ್ತೆಯಾಗಿರುವುದಿಲ್ಲ.
5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ದೂ.ಸಂಖ್ಯೆ: 08254-265333, ಮೊ.ನಂ: 9480805457 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

