ಕೊಡಗು | ಹೋಂಸ್ಟೇನಲ್ಲಿ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆ: ಮೈಸೂರಿನ ಯುವತಿ ಸಾವು

Date:

ಕೊಡಗು ಜಿಲ್ಲೆಯಲ್ಲಿ ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಬಂದಿದ್ದ ಮೈಸೂರಿನ ಯುವತಿಯೊಬ್ಬರು ಹೋಂಸ್ಟೇನಲ್ಲಿ ಗ್ಯಾಸ್ ಗೀಸರ್‌ ವಿಷಾನಿಲ ಸೋರಿಕೆಯಾಗಿ ಮೃತಪಟ್ಟಿರುವ ದುರ್ಘಟನೆ ಸೋಮವಾರಪೇಟೆ ತಾಲೂಕಿನ ಕಲ್ಕಂದೂರು ಗ್ರಾಮದ ಸಮೀಪ ನಡೆದಿದೆ.

- Advertisement -

ಮೈಸೂರಿನ ಯರಗನಹಳ್ಳಿ ಬಡಾವಣೆ ನಿವಾಸಿಗಳಾದ ಎಸ್. ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನುತ (27) ಮೃತ ದುರ್ದೈವಿ. ಅವರು ಖಾಸಗಿ ಹೆಲ್ತ್ ಕೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಕಂಪನಿಯಲ್ಲಿ ಎರಡು ದಿನಗಳ ರಜೆ ಇದ್ದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಕೊಡಗು ಪ್ರವಾಸಕ್ಕೆ ಬಂದಿದ್ದ ವಿನುತ ಹಾಗೂ ಅವರ ಸ್ನೇಹಿತರು ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ಸಮೀಪದ ಹೋಂಸ್ಟೇ ಒಂದರಲ್ಲಿ ತಂಗಿದ್ದರು ಎನ್ನಲಾಗಿದೆ.

ಮಂಗಳವಾರ ಬೆಳಿಗ್ಗೆ ಸ್ನಾನ ಮಾಡಲು ಬಾತ್‌ರೂಮ್‌ಗೆ ತೆರಳಿದ್ದ ವೇಳೆ ಗ್ಯಾಸ್ ಗೀಸರ್‌ನಿಂದ ವಿಷಾನಿಲ ಸೋರಿಕೆಯಾಗಿ ಅವರು ಅಸ್ವಸ್ಥಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಾತ್‌ರೂಮ್‌ನಲ್ಲಿ ಸಮರ್ಪಕ ಗಾಳಿಯಾಡುವ ವ್ಯವಸ್ಥೆ ಹಾಗೂ ಕಿಟಕಿ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ?ಕುಂಡೆಹಬ್ಬ–ಬೋಡ್ ನಮ್ಮೆ: ಕೊಡಗಿನ ಜನಪದ ಸಂಸ್ಕೃತಿಯ ಜೀವಂತ ಪರಂಪರೆ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?ಗುಂಡ್ಲುಪೇಟೆ | ಚನ್ನಾಜಯ್ಯನಹುಂಡಿ ಗೋಮಾಳ ತೆರವು ಕಾರ್ಯ ಸ್ಥಗಿತ; ಗ್ರಾಮಸ್ಥರ ನಡುವೆ ವಾಗ್ವಾದ

ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...