ಧಾರವಾಡ | ಅಡುಗೆ ಅನಿಲದ ಬೆಲೆ ಇಳಿಕೆ – ಚುನಾವಣೆ ಗಿಮಿಕ್; ಬಿಜೆಪಿ ವಿರುದ್ಧ ಶೆಟ್ಟರ್ ಕಿಡಿ

Date:

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಒಂಭತ್ತು ವರ್ಷಗಳಿಂದ ಆಡಳಿತ ನಡೆಸುತ್ತಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅಡುಗೆ ಅನಿಲದ ಬೆಲೆ ಇಳಿಕೆ ಮಾಡಿ, ದೇಶದ ಜನತೆಯನ್ನು ಯಾಮಾರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, “ದೇಶದ ಜನರ ಬಗ್ಗೆ ಕಾಳಜಿ ಇದ್ದಿದ್ದರೆ ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಅಗತ್ಯವೇನಿತ್ತು? ಇಷ್ಟು ವರ್ಷ ಇಲ್ಲದ ಕಾಳಜಿ, ಈಗ ಒಮ್ಮಿಂದೊಮ್ಮೆಲೆ ಬಂದು ಬಿಟ್ಟಿದೆಯೇ? ₹1,000 ಏರಿಕೆ ಮಾಡಿ, ₹200 ಇಳಿಸಿದ್ದಾರೆ. ಇದು ಚುನಾವಣೆ ಗಿಮಿಕ್‌. ಅಷ್ಟೊಂದು ಕಾಳಜಿ ಇದ್ದಿದ್ದರೆ ₹600-₹800 ರಷ್ಟು ಇಳಿಕೆ ಮಾಡಬೇಕಿತ್ತು” ಎಂದು ಹೇಳಿದ್ದಾರೆ.

“ಅಡುಗೆ ಅನಿಲದ ಬೆಲೆ ಇಳಿಕೆ ಹಾಗೂ ಕೆಲವು ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆಯ ವಾತಾವರಣ ಗಮನಿಸಿದರೆ ಡಿಸೆಂಬರ್‌ ತಿಂಗಳಲ್ಲಿಯೇ ಲೋಕಸಭಾ ಚುನಾವಣೆ ನಡೆಯಬಹುದು. ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಉಚಿತ ಯೋಜನೆ ಕೊಡಬೇಡಿ ಅನ್ನುತ್ತಾರೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಉಚಿತ ಯೋಜನೆ ಘೋಷಣೆ ಮಾಡುತ್ತದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತಷ್ಟು ಉಚಿತ ಯೋಜನೆ ಘೋಷಿಸಿದರೂ ಅಚ್ಚರಿಯಿಲ್ಲ. ಹೇಳುವುದು ಒಂದು, ಮಾಡುವುದು ಮತ್ತೊಂದು” ಎಂದು ಕಿಡಿಕಾರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“‘ಲೀಡರ್ ಲೆಸ್’ ಬಿಜೆಪಿಯ ಅನೇಕ ಮುಖಂಡರು ನನ್ನ ಸಂಪರ್ಕದಲ್ಲಿದ್ದಾರೆ. ಸದ್ಯ ಅಲ್ಲಿ ಸ್ಮಶಾನ ಮೌನ ಆವರಿಸಿದ್ದು, ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಲೋಕಸಭಾ ಸುನಾವಣೆಯಲ್ಲಿ ಧಾರವಾಡ ಕ್ಷೇತ್ರ ಸೇರಿ ಕನಿಷ್ಠ 15 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಶೆಟ್ಟರ್ ಸಾಹೇಬ್ರೆ ನಿಮ್ಮ aukat yenada ಅದನ್ನ ಮಾತಾಡಿ ಬೇರೆಯವರ ಮೇಲೆ ಏನ್ ಗುಬೇ ಕುದುಸ್ತ್ರ niu uddaragri modalu Anil ಕಡಿಮೆ ಆದ್ರೆ ಹೆಮ್ಮೆ ಪಡಿ ಆದ್ರೆ ಅದನ್ನೇ ಅಸ್ತ್ರ ಮಾಡ್ಕೊಂಡು ದೇಶದ ಜನರನ್ನ ಮೂರ್ಖರನ್ನಾಗಿಸಿ ಮಾಡೋ ಕೆಲಸ ಮದುಕ್ hogbyadi ಶೆಟ್ಟರ್,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...

ದಾವಣಗೆರೆ | ಕಾಂಗ್ರೆಸ್‌ಗೆ ಮಡಿವಾಳ ಸಮಾಜ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ಆಗ್ರಹ

ರಾಜ್ಯದಲ್ಲಿನ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದು, ರಾಜ್ಯದ ಎಲ್ಲ ತಾಲೂಕಿನಲ್ಲಿ...

ಚಿಕ್ಕಮಗಳೂರು | ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ

ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ...