ಗೌರಿಬಿದನೂರು | ಭ್ರಷ್ಟಾಚಾರ ಸಾಬೀತಾದ ಅಧಿಕಾರಿಗೆ ಕೆಆರ್‌ಎಸ್ ಪಕ್ಷದಿಂದ ಸಾರ್ವಜನಿಕ ಸನ್ಮಾನ

Date:

Advertisements

ಗೌರಿಬಿದನೂರು ನಗರದ ಮದನಹಳ್ಳಿ ಕೆರೆಯಂಗಣದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಆಂಜನೇಯ ಮೂರ್ತಿ ಭ್ರಷ್ಟ ಅಧಿಕಾರಿ ಎಂದು ಸಾಬೀತಾದ ಹಿನ್ನೆಲೆ ಕೆಆರ್‌ಎಸ್‌ ಪಕ್ಷವು ನಾಗರಿಕ ಸನ್ಮಾನ ಮಾಡಿದೆ.

ಅಕ್ರಮ ಆಸ್ತಿ ಗಳಿಕೆಯ ಆರೋಪದಡಿಯಲ್ಲಿ ಜುಲೈ 29ರಂದು  ಲೋಕಾಯುಕ್ತ ಅಧಿಕಾರಿಗಳು ಆಂಜನೇಯ ಮೂರ್ತಿಗೆ ಸಂಬಂಧಿಸಿದ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸಿದ್ದರು. ಆಗ ಅಕ್ರಮ ಆಸ್ತಿ ಗಳಿಸಿರುವ ಬಗ್ಗೆ ದೃಢವಾಗಿತ್ತು.

ಕರ್ನಾಟಕ ರಾಷ್ಟ್ರೀಯ ಸಮಿತಿ (KRS) ಪಕ್ಷ ಭ್ರಷ್ಟ ಅಧಿಕಾರಿ ಆಂಜನೇಯ ಮೂರ್ತಿ ಅವರಿಗೆ ಸನ್ಮಾನ ಮಾಡುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕೆಆರ್ ಎಸ್ ಪಕ್ಷದ  ಕಾರ್ಯಕರ್ತರು ಆಂಜನೇಯ ಮೂರ್ತಿ ಅವರ ಭಾವಚಿತ್ರ ಇರುವ ಫ್ಲೆಕ್ಸ್ ತಯಾರಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡುವ ಮೂಲಕ ವಿಶೇಷ ಗೌರವ ಸಲ್ಲಿಸಿದೆ. ಕಚೇರಿಯಲ್ಲಿ ಆಂಜನೇಯ ಮೂರ್ತಿ ಇಲ್ಲದ ಕಾರಣ ಅವರು ಕೂರುವ ಕುರ್ಚಿಗೆ ಭಾವಚಿತ್ರವನ್ನಿಟ್ಟು ಪೇಟ ಮತ್ತು ಹೂಮಾಲೆ ಹಾಕುವ ಮೂಲಕ ಭ್ರಷ್ಟ ಅಧಿಕಾರಿ ಎಂದು ಕೂಗುತ್ತಾ ಸನ್ಮಾನಿಸಲಾಗಿದೆ.

ಈ ವೇಳೆ ಪಕ್ಷದ ರಾಜ್ಯ ಉಪಾಧ್ಯಕ್ಷ ರಘು ಜಾಣಗೆರೆ ಮಾತನಾಡಿ, “ರಾಜ್ಯದಲ್ಲಿ ಭ್ರಷ್ಟಾಚಾರ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಭ್ರಷ್ಟಾಚಾರ ಮಾಡಿ ಸಿಕ್ಕಿದವರಿಗೆ ಶಿಕ್ಷೆ ಅತಿ ಕಡಿಮೆ. ಭ್ರಷ್ಟಾಚಾರದಲ್ಲಿ ತೊಡಗಿದವರಿಗೆ 1% ನಷ್ಟು ಶಿಕ್ಷೆಯಾಗುತ್ತಿಲ್ಲ. ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ನಾವೆಲ್ಲ ನೋಡುತ್ತಿದ್ದೇವೆ ಕೇಳುತ್ತಿದ್ದೇವೆ. ಕೋಟಿ ಕೋಟಿ ಆಸ್ತಿಗಳು ಸಿಕ್ಕಿದೆ ಎಂದು ನಾವು ನೋಡುತ್ತೇವೆ. ಕೊನೆದಾಗಿ ಒಬ್ಬರಿಗೂ ಶಿಕ್ಷೆಯಾಗುತ್ತಿಲ್ಲ. ನಮ್ಮ ತೆರಿಗೆ ಹಣ ಲೂಟಿ ಮಾಡಿ ಇಂತಹ ಭ್ರಷ್ಟ ಅಧಿಕಾರಿಗಳು ಮೋಜು ಮಸ್ತಿ ಮಾಡುತ್ತಿದ್ದಾರೆ. ಕಾರು ಬಂಗಲೆಗಳ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಅಧಿಕಾರಿಗಳಿಗೆ ಅವಮಾನ ಆಗುವ ರೀತಿಯಲ್ಲಿ ನಾಗರಿಕ ಸನ್ಮಾನ ಎಂದು ಕೆ ಆರ್ ಎಸ್ ಪಕ್ಷ ಮಾಡಿಕೊಂಡು ಬರುತ್ತಿದೆ. ಇದರಿಂದ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ ಅವಮಾನದ ಶಿಕ್ಷೆ ಕೊಡಲಾಗುತ್ತಿದೆ” ಎಂದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ

ಈ ವೇಳೆ ಜಿಲ್ಲಾ ಉಸ್ತುವಾರಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಆರೋಗ್ಯ ಸ್ವಾಮಿ, ಜಿಲ್ಲಾಧ್ಯಕ್ಷ ಡ್ಯಾನಿಯಲ್, ತಾಲೂಕು ಅಧ್ಯಕ್ಷ ಕುಮಾರ್, ತಾಲೂಕು ಉಪಾಧ್ಯಕ್ಷ ಮಹಮ್ಮದ್, ಪ್ರಧಾನ ಕಾರ್ಯದರ್ಶಿ ಸಂತೋಷ್, ನಂಜುಂಡಿ, ಫೈರೋಸ್ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X