ಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿಗೆ ತುಪ್ಪ ಪೂರೈಕೆ ಸ್ಥಗಿತ: ಸಿಎಂ ಸಿದ್ದರಾಮಯ್ಯ

Date:

Advertisements
  • ರಾಜ್ಯ ಸರ್ಕಾರ ಕೇಳುವ ದರ ನೀಡಲು ಒಪ್ಪಿದರೆ ತುಪ್ಪ ಪೂರೈಸುತ್ತೇವೆ’
  • ‘ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ?’

ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಂಸದ ನಳಿನ್‌ ಕುಮಾರ್‌ ಕಟೀಲ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಅವರು, “ಮಾನ್ಯ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರೇ ಈಗ ಹೇಳಿ, ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ? ಅಥವಾ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಮಾತ್ರ ಹಿಂದೂ ವಿರೋಧಿಯೋ?” ಎಂದು ಕುಟುಕಿದ್ದಾರೆ.

“ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆಗೆ ಹೈನುಗಾರರ ಬದುಕು ಮುಖ್ಯ. ಹೀಗಾಗಿ ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ತಿರುಪತಿ ದೇವಾಲಯದವರು ಒಪ್ಪುವುದಾದರೆ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಗಳಿಲ್ಲ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಚಕರು, ನಂಬಿಕೆದ್ರೋಹಿಗಳು ಕೇವಲ ಒಂದು ಸಮುದಾಯಕ್ಕೆ ಸೇರಿದವರೇ?

ನಳಿನ್‌ ಕುಮಾರ್‌ ಕಟೀಲ್‌ ಏನು ಟ್ವೀಟ್

“ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ‌ ಕಾಂಗ್ರೆಸ್‌ ನೀತಿಯಿಂದಾಗಿ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತಗೊಂಡಿದೆ. ತಿರುಪತಿಯೊಂದಿಗಿನ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದ್ದು, ಹಿಂದೂಗಳೆಡಗಿನ ಸಿದ್ದರಾಮಯ್ಯ ಅವರ ತಾತ್ಸಾರ ನೀತಿ ರುಜುವಾತಾಗಿದೆ” ಎಂದು ಕಟೀಲ್‌ ಟ್ವೀಟ್‌ ಮಾಡಿದ್ದರು.

ಸಿದ್ದರಾಮಯ್ಯ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

Download Eedina App Android / iOS

X