ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಕಚೇರಿಗೆ ಹಾಜರಾದ ಜಯಂತ್, ಗಿರೀಶ್ ಮಟ್ಟಣ್ಣನವರ್

Date:

Advertisements

ಧರ್ಮಸ್ಥಳ ಆಸುಪಾಸಿನಲ್ಲಿ ಹಲವು ಮೃತದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಸಾಮಾಜಿಕ ಕಾರ್ಯಕರ್ತ ಜಯಂತ್ ಟಿ, ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಕಚೇರಿಗೆ ಹಾಜರಾಗಿದ್ದಾರೆ.

ಬೆಳಗ್ಗೆ ಸುಮಾರು 10 ಗಂಟೆ ಆಸುಪಾಸಿನಲ್ಲಿ ಜಯಂತ್ ಟಿ ಅವರು ಮಾಧ್ಯಮಗಳ ಕಣ್ಣು ತಪ್ಪಿಸಿ ಒಳದಾರಿ ಮೂಲಕ ಎಸ್‌ಐಟಿ ಕಚೇರಿಗೆ ತಲುಪಿದ್ದಾರೆ ಎನ್ನಲಾಗಿದೆ. ಐದನೇ ಬಾರಿಗೆ ಎಸ್‌ಐಟಿ ವಿಚಾರಣೆಗೆ ಜಯಂತ್ ಒಳಪಡುತ್ತಿದ್ದಾರೆ. ಇನ್ನು ಇಂದು ಬೆಳಗ್ಗೆ ಗಿರೀಶ್ ಮಟ್ಟಣ್ಣನವರ್ ಕೂಡಾ ಎಸ್ಐಟಿ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.

ಇದನ್ನು ಓದಿದ್ದೀರಾ? ಶಿವಮೊಗ್ಗ | ಧರ್ಮಸ್ಥಳ ಪ್ರಕರಣ; ಬಿಜೆಪಿಯಿಂದ ಪ್ರತಿಭಟನೆ

ಇಬ್ಬರೂ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿ ನೀಡುವುದಾಗಿ ಹೇಳಿರುವ ಕಾರಣ ಇಬ್ಬರ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಈಗಾಗಲೇ ದೂರುದಾರ ಚಿನ್ನಯ್ಯ ತೋರಿಸಿದ ಸ್ಥಳದಲ್ಲಿ ಉತ್ಖನನ ಮಾಡಲಾಗಿದ್ದು, ಎರಡು ಸ್ಥಳಗಳಲ್ಲಿ ಮಾನವನ ಮೂಲೆಗಳು ಪತ್ತೆಯಾಗಿದೆ. ಅದಾದ ಬಳಿಕ ಸಾಕ್ಷಿ ದೂರುದಾರನ ಬಂಧಿಸಿದ ಎಸ್‌ಐಟಿ ವಿಚಾರಣೆ ನಡೆಸುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿಕಾರ ಹಂಚಿಕೆ ಕುರಿತು ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ: ಡಿ ಕೆ ಶಿವಕುಮಾರ್

ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ....

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X