ಹುಬ್ಬಳ್ಳಿ | ಬಾಲಕಿಯ ಹತ್ಯೆ ಆರೋಪಿ ಎನ್‌ಕೌಂಟರ್; ಪೊಲೀಸ್ ಕಮಿಷನರ್ ಹೇಳಿದ್ದೇನು?

Date:

ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಆರೋಪಿಯು ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಗಿದ್ದು, ಆರೋಪಿ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

- Advertisement -

ಹುಬ್ಬಳಿಯ ಅಶೋಕನಗರದಲ್ಲಿ ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವ ಆಮಿಷವೊಡ್ಡಿ ಆರೋಪಿ‌ಕರೆದೊಯ್ದಿದ್ದ. ಆಕೆಯ ಮೇಲೆ ಅತ್ಯಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು. ಬಾಲಕಿಯ ಮೃತದೇಹ ಪಾಳುಬಿದ್ದ ಶೌಚಾಲಯದಲ್ಲಿ ಪತ್ತೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಆರೋಪಿಯ ಚಲನವಲನಗಳು ಸಿಸಿಟಿವಿ‌ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆರೋಪಿಯನ್ನು‌ ಬಿಹಾರ ಮೂಲದ ರಿತೇಶ್ ಕುಮಾರ್ ಎಂದು ಗುರುತಿಸಲಾಗಿತ್ತು.

ಬಾಲಕಿ ಹತ್ಯೆಯ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಯನ್ನು ಎನ್‌ಕೌಂಟರ್ ಮಾಡಬೇಕು ಎಂದು ಆಗ್ರಹಿಸಿ ಪೋಷಕರು ಮತ್ತು ಸಾರ್ವಜನಿಕರು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಈ‌ ಬೆನ್ನಲ್ಲೇ, ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆಗೈದಿದ್ದಾರೆ.

ಆರೋಪಿಯನ್ನು ಬಂಧಿಸುವ ವೇಳೆ ಆತ ಪೊಲೀಸರ ಮೇಲೆ ದಾಳಿ ಮಾಡಿ, ಓಡಿ ಹೋಗಲು ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಪೊಲೀಸ್​ ಸಿಬ್ಬಂದಿ ಗುಂಡು ಹಾರಿಸಿದ್ದರು ಎಂದು ಹೇಳಲಾಗಿದೆ. ಆರೋಪಿ ಬೆನ್ನಿಗೆ ಗುಂಡು ತಗುಲಿತ್ತು. ಆತನನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆರೋಪಿ‌ ಮೃತಪಟ್ಟಿದ್ದಾನೆ..

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ್, “ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಪತ್ತೆ ಮಾಡಲಾಗಿತ್ತು. ಆರೋಪಿ ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿ ವಾಸವಿದ್ದನು. ಆತನನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ದಾಳಿ ಮಾಡಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ, ಪಿಎಸ್​ಐ ಅನ್ನಪೂರ್ಣ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಆರೋಪಿ ಓಡಿ ಹೋಗಲು ಯತ್ನಿಸಿದ್ದು, ಆತನ ಮೇಲೆ ಫೈರಿಂಗ್ ಮಾಡಿದ್ದಾರೆ. ಆರೋಪಿಯ ಬೆನ್ನಿಗೆ ಗುಂಡು ತಗುಲಿತ್ತು. ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಮೃತಪಟ್ಟಿದ್ದಾನೆ. ಇಂತಹ ಗಂಭೀರ ಪ್ರಕರಣದಲ್ಲಿ ಆರೋಪಿಯನ್ನು ತಪ್ಪಿಸಿಕೊಳ್ಳಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಆದಾಗ್ಯೂ, ಪೋಷಕರು ಮತ್ತು ಸಾರ್ವಜನಿಕರ ಆಕ್ರೋಶವನ್ನು ಥಣಿಸಲು‌ ಆರೋಪಿಯನ್ನು ಎನ್‌ಕೌಂಟರ್ ಮಾಡಿರಬಹುದು ಎಂಬ ಅನುಮಾನಗಳೂ ಸಾರ್ವಜನಿಕ‌ ವಲಯದಲ್ಲಿ‌ ವ್ಯಕ್ತವಾಗಿವೆ. ಈ ಹಿಂದೆ, ಆಂಧ್ರಪದೇಶದ ಪಶು ವೈದ್ಯೆ ಕೊಲೆ ಪ್ರಕರಣದಲ್ಲಿಯೂ ನಾಲ್ವರು ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...