ಶಿರಸಿ | ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಪರಾರಿ

Date:

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಳ್ಳಿಯೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.

- Advertisement -

ಏಳನೇ ತರಗತಿ ವ್ಯಾಸಂಗ ಮುಗಿಸಿ ಬೇಸಿಗೆ ರಜೆಯ ಕಾರಣ ಮನೆಯಲ್ಲಿಯೇ ಇದ್ದ ಬಾಲಕಿ ಮೇಲೆ ವಿಶ್ವನಾಥ್‌ ಹೆಗಡೆ(40) ಎಂಬಾತ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಮಗು ತನ್ನ ತಾಯಿಗೆ ಈ ವಿಷಯವನ್ನು ತಿಳಿಸಿದ್ದು, ತಾಯಿ ಆರೋಪಿಯ ಮನೆ ಬಾಗಿಲಿಗೆ ಹೋಗಿ ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಆರೋಪಿ ವಿಶ್ವನಾಥ್‌ ಹೆಗಡೆ, “ನಾನು ಹಾಗೇನೂ ಮಾಡಿಲ್ಲ. ನಾನೇ ಮಾಡಿದ್ದೇನೆ ಎನ್ನುವುದಕ್ಕೆ ನಿನ್ನ ಹತ್ತಿರ ಸಾಕ್ಷಿ ಇದೆಯೇ?” ಎಂದು ಭಂಡತನ ಮೆರೆದಿದ್ದಾನೆ. ಬಳಿಕ ತಾಯಿ, ʼಮಗುವಿನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಶಿರಸಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣದಡಿ ದೂರು ನೀಡಿದ್ದಾರೆ.

ಆರೋಪಿ ವಿಶ್ವನಾಥ್‌ ಹೆಗಡೆ
ಅತ್ಯಾಚಾರ ಎಸಗಿ ತಲೆಮರೆಸಿಕೊಂಡಿರುವ ಆರೋಪಿ ವಿಶ್ವನಾಥ್‌ ಹೆಗಡೆ

ದೂರು ನೀಡಿದ ಮೂರ್ನಾಲ್ಕು ದಿನಗಳ ಬಳಿಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೂ ದೌರ್ಜನ್ಯ ಪ್ರಕರಣವೆಂದು ದೂರು ದಾಖಲಿಸಿಕೊಂಡಿದ್ದು, ದೂರುದಾರರಿಗೆ ಪೊಲೀಸರು ಎಫ್‌ಐಆರ್‌ ಪ್ರತಿಯನ್ನೂ ಕೂಡ ನೀಡದೆ ಕಳುಹಿಸಿದ್ದಾರೆ ಎನ್ನಲಾಗಿದೆ. ‌ಮಗುವನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿರುವುದಾಗಿ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿಯಲ್ಲಿ ನಡೆಯಬೇಕಿದ್ದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ಮುಂದೂಡಿಕೆ

ಬುಧವಾರ ಬೆಳಿಗ್ಗೆ ಪೊಲೀಸರು ಗ್ರಾಮಕ್ಕೆ ಭೇಟಿ ನೀಡುವ ಕುರುಹು ತಿಳಿದ ಆರೋಪಿ ಪರಾರಿಯಾಗಿದ್ದಾನೆ. ಇಡೀ ದಿನ ಮನೆಗೆ ಬಾರದೆ ತಲೆಮರೆಸಿಕೊಂಡಿದ್ದಾನೆಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ.

ಪ್ರಕರಣ ಸಂಬಂಧ ಈ ದಿನ.ಕಾಮ್‌ ಮಾಹಿತಿಗಾಗಿ ಪೊಲೀಸ್‌ ಠಾಣೆಗೆ ಕರೆ ಮಾಡಿದಾಗ, ಅವರು ಎಫ್‌ಐಆರ್‌ ಕಾಪಿ ಸಂಖ್ಯೆಯನ್ನು ನೀಡಿದ್ದಾರೆ. ಆ ಸಂಖ್ಯೆಯ ಅನ್ವಯ ಕಾಪಿ ಹುಡುಕಿದಾಗ ಆನ್‌ಲೈನ್‌ನಲ್ಲಿ ನಾಟ್‌ ಫೌಂಡ್‌ ಎಂದು ಕಂಡುಬರುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಶಿರಸಿ ಗ್ರಾಂತರ ಪೊಲೀಸ್‌ ಠಾಣೆಗೆ ಸಂಪರ್ಕಿಸಿದೆ. ಆದರೆ ಅಲ್ಲಿಯ ಸಿಬ್ಬಂದಿ ಯಾವುದೇ ರೀತಿಯ ಮಾಹಿತಿಯನ್ನು ನೀಡಿಲ್ಲ. ಬಳಿಕ ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ(ಎಸ್‌ಪಿ)ಯವರನ್ನು ಸಂಪರ್ಕಿಸಿದೆ. ಆದರೂ ಅವರು ಕರೆಗೆ ಲಭ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...