ಎರಡು ಹಂತಸ್ಥಿನ ಕಟ್ಟಡ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಕಟ್ಟಡದಲ್ಲಿದ್ದ ಎಂಟು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನಲ್ಲಿ ನಡೆದಿದೆ. ಅದಾಗ್ಯೂ, ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಲೂಕಿನ ಗೋಣಿಕೊಪ್ಪಲಿನಲ್ಲಿ ಗುರುವಾರ ಸಂಜೆ ಘಟನೆ ನಡೆಸಿದೆ. ಕಟ್ಟಡವು 75 ವರ್ಷಕ್ಕೂ ಹಳೆಯದ್ದಾಗಿತ್ತು ಎಂದು ಹೇಳಲಾಗಿದೆ. ಕಟ್ಟಡದ ನೆಲ ಮಹಡಿಯಲ್ಲಿ ಬಿರಿಯಾನಿ ಹೋಟೆಲ್ ಹಾಗೂ ಮಾಂಸದ ಅಂಗಡಿ ಇತ್ತು. ಅವುಗಳಲ್ಲಿ ಕೆಲಸ ಮಾಡುತ್ತಿದ್ದ ಎಂಟು ಮಂದಿ ಜೋರು ಶಬ್ದ ಕೇಳಿ, ದೌಡಾಯಿಸಿ ಹೊರಬಂದಿದ್ದಾರೆ. ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವಶೇಷಗಳನ್ನು ತೆರವು ತೆರವು ಮಾಡಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಓರ್ವನನ್ನು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.