ಕೊಡಗು | ಪ್ರತಿಯೊಬ್ಬರೂ ಸಂತ ಸೇವಾಲಾಲ್‌ರ ತತ್ವಾದರ್ಶ ತಿಳಿದುಕೊಳ್ಳಬೇಕು: ವೆಂಕಟ ನಾಯಕ

Date:

Advertisements

ಮಹಾನ್ ಮಾನವತಾವಾದಿ ಸಂತ ಸೇವಾಲಾಲ್ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಶಿಕ್ಷಕ ವೆಂಕಟ ನಾಯಕ ಹೇಳಿದರು.

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಅಲೆಮಾರಿ ಜನ ಸಮುದಾಯದ ಬಂಜಾರ, ಲಂಬಾಣಿ, ಲಮಾಣಿ, ಸುಗಾಲಿ, ಸುಕಾಲಿ ಗೋರ್, ಸೋನಾರ್, ಲೋಹಾರ್, ಬಾಜೀಗರ್ ಸೇರಿದಂತೆ ಅನೇಕ ಉಪ ನಾಮಗಳಿಂದ ಗುರುತಿಸಲ್ಪಡುವ ಬಂಜಾರರು ಮೂಲತಃ ದಿನಸಿ ಮತ್ತು ಲವಣದ ವ್ಯಾಪಾರಿಗಳಾಗಿದ್ದರು. ಲಂಬಾಣಿ, ಬಂಜಾರ ಸಮಾಜದ ಬಗ್ಗೆ ಮಹಾಭಾರತದಲ್ಲಿ ಉಲ್ಲೇಖವಾಗಿರುವುದನ್ನು ಕಾಣಬಹುದಾಗಿದ್ದು, ಸುಮಾರು ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಸಂತ ಸೇವಾಲಾಲ್ 1739 ಫೆಬ್ರವರಿ 15ರಂದು ಸೂರಗೊಂಡನ ಕೊಪ್ಪದಲ್ಲಿ ಜನಿಸಿದರೆಂದು ಹೇಳಲಾಗುತ್ತದೆ. ಇವರು ಗೋವುಗಳ ಸಂರಕ್ಷಣೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಅವರ ಆದರ್ಶಗಳು ಇಂದಿನ ಪೀಳಿಗೆಗೂ ಸ್ಫೂರ್ತಿ” ಎಂದರು.

Advertisements

“ಲಂಬಾಣಿ ಭಾಷೆ, ಸಂಸ್ಕೃತಿ, ಆಚಾರ-ವಿಚಾರ, ಉಡುಗೆ-ತೊಡುಗೆ ವೈಶಿಷ್ಟ್ಯತೆಯಿಂದ ಕೂಡಿದೆ. ಸಮಾಜದ ಮುಖ್ಯವಾಹಿನಿಯಿಂದ ಬಂಜಾರ ಸಮಾಜವು ದೂರವಿತ್ತು. ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದು ಪ್ರಗತಿಯ ಸಂಕೇತ” ಎಂದರು.

“ಸಂತ ಸೇವಾಲಾಲ್ ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇವರ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ತಾವು ಓದಬೇಕು, ಇತರರನ್ನು ಓದಿಸಬೇಕು ಎಂಬ ಆಶಯ ಹೊಂದಿದ್ದರು. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಮಹಾರಾಷ್ಟ್ರ ಮತ್ತಿತರ ರಾಜ್ಯಗಳು ಸೇರಿದಂತೆ ದೇಶ ವಿದೇಶಗಳಲ್ಲಿ ಲಂಬಾಣಿ ಸಮಾಜದವರು ಇದ್ದಾರೆ. ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಬಳಸಿಕೊಂಡು ಸಮಾಜದ ಪೀಳಿಗೆ ಮುಖ್ಯವಾಹಿನಿಗೆ ಬರುವಂತಾಗಬೇಕು” ಎಂದು ಆಶಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ತಾಯಿ, ಪತ್ನಿ, ಮಗನನ್ನು ಹತ್ಯೆಗೈದು ವ್ಯಕ್ತಿ ಆತ್ಮಹತ್ಯೆ

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯ ನಿರ್ದೇಶಕ ಕುಮಾರ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪಿ ಪಿ ಕವಿತಾ, ಗಣಿ ಮತ್ತು ಭೂ ವಿಜ್ಮಾನ ಇಲಾಖೆ ಹಿರಿಯ ಭೂ ವಿಜ್ಞಾನಿ ನಾಗರಾಜು, ಬಿಸಿಎಂ ಇಲಾಖೆಯ ತಾಲೂಕು ಅಧಿಕಾರಿ ಮೋಹನ್ ಕುಮಾರ್, ಮಣಜೂರು ಮಂಜುನಾಥ್ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X