ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಬಿರುನಾಣಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು,ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ ಪ್ರಾಥಮಿಕ ಶಾಲೆ ಸಂಯುಕ್ತಾಶ್ರಯದಲ್ಲಿ ‘ ಕೈಬುಲಿರ ಪಾರ್ವತಿ ಬೋಪಯ್ಯ ದತ್ತಿ ‘ ಕಾರ್ಯಕ್ರಮದಲ್ಲಿ ಸಾಹಿತಿ ಉಳುವಂಗಡ ಕಾವೇರಿ ಉದಯ ಮಾತನಾಡಿ ” ಶಿಕ್ಷಣದಿಂದ ಜ್ಞಾನ, ಶ್ರಮದಿಂದ ಬದುಕು ” ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜ್ಞಾನವನ್ನು ಯಾರು ಕದಿಯಲು ಸಾಧ್ಯವಿಲ್ಲ, ಶಿಕ್ಷಣದಿಂದ ಬರುವಂತದ್ದು ಮಕ್ಕಳು ಪ್ರೌಢಶಾಲಾ ಹಂತದಲ್ಲಿ ಉತ್ತಮ ಶಿಕ್ಷಣ ಪಡೆದರೆ ಯಾವ ಸಾಧನೆ ಬೇಕಾದರೂ ಮಾಡಬಹುದು .ದತ್ತಿ ದಾನಿಗಳ ಆಶಯದಂತೆ 2023-24ನೇ ಸಾಲಿನಲ್ಲಿ 10ನೇ ತರಗತಿಯ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮಾದಾಪುರದ ಶ್ರೀಮತಿ ಚೆನ್ನಮ್ಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅದವಿಯಾ ಯು ಮೂಡಬಿದರೆಯ ಕಾಲೇಜಿನಲ್ಲಿ ಮುಂದಿನ ಶಿಕ್ಷಣ ಪಡೆಯುತಿದ್ದು ಮಕ್ಕಳು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಸಾಕ್ಷಿ, ಈ ಸಮಯದಲ್ಲಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ ಪಿ ಕೇಶವ ಕಾಮತ್ ಮಾತನಾಡಿ ” ಕೊಡಗು ಜಿಲ್ಲೆಯಲ್ಲಿ ಈಗಾಗಲೇ 35 ದತ್ತಿನಿಧಿಗಳು ಸ್ಥಾಪಿತವಾಗಿದೆ. ವಿದ್ಯಾರ್ಥಿಗಳಿಗೆ ಸಾಹಿತ್ಯ,ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ವಿಚಾರಗಳ ಪರಿಚಯ ಮಾಡುವುದಾಗಿದೆ. ಜಾನಪದ ಕಲೆ, ಜಾನಪದ ಸಾಹಿತ್ಯ, ಕನ್ನಡ ಸಾಹಿತ್ಯದ ಬೆಳವಣಿಗೆ, ಕನ್ನಡ ಮತ್ತು ಕೊಡವ ಭಾಷಾ ಸಂಬಂಧ, ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರಾದ ಫೀಲ್ಡ್ ಮಾರ್ಷಲ್ ಕಾರಿಯಪ್ಪ, ಜನರಲ್ ತಿಮ್ಮಯ್ಯ ಅವರ ಸಾಧನೆಗಳ ಕುರಿತು ಉಪನ್ಯಾಸಗಳಿವೆ “ಎಂದರು.
ಈ ಸುದ್ದಿ ಓದಿದ್ದೀರಾ? ಮಡಿಕೇರಿ | ಕೊಡಗು ವಿವಿ ಮುಚ್ಚಿದರೆ ಜಿಲ್ಲೆಗೆ ಅಪಮಾನ ; ಕೆಎಂಎ ಅಧ್ಯಕ್ಷ ಸೂಫಿ ಹಾಜಿ
ಬಿರುನಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಮ್ಮತ್ತಿರ ರಾಜೇಶ್, ಪೊನ್ನಂಪೇಟೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಎ ಬಿ ಲಾಲ ಅಪ್ಪಣ್ಣ,ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ, ಶಾಲಾ ಮುಖ್ಯೋಪಾಧ್ಯಾಯರಾದ ಬಿ ಬಿ ಸರಸ್ವತಿ.ಮಾಜಿ ಯೋಧ ಕಾಳಿಮಾಡ ಮುತ್ತಣ್ಣ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಬೊಳ್ಳೆರ ಪೊನ್ನಪ್ಪ, ಹುದಿಕೇರಿ ಹೋಬಳಿ ಗೌರವ ಕಾರ್ಯದರ್ಶಿ ಕುಪ್ಪಣ್ಣಮಾಡ ನಂಜಮ್ಮ, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಾನಂಗಡ ಅರುಣ್, ಪೊನ್ನಂಪೇಟೆ ತಾಲ್ಲೂಕು ಕಸಾಪ ನಿರ್ದೇಶಕ ಬುಟ್ಟಿಯಂಡ ಸುನಿತ ಗಣಪತಿ,ಹುದಿಕೇರಿ ಹೋಬಳಿ ಕಸಾಪ ಗೌರವ ಕೋಶಾಧಿಕಾರಿ ಅಣ್ಣಳಮಾಡ ಭವ್ಯ, ಸಂಘಟನಾ ಕಾರ್ಯದರ್ಶಿ ಕರ್ತಮಾಡ ಪಾರ್ವತಿ ವಿಜಯ, ಸದಸ್ಯರುಗಳಾದ ಬುಟ್ಟಿಯಂಡ ರೋಹಿಣಿ, ಧರಣಿ, ಸಬಿತಾ, ಸದಕುಮಾರ್, ಅರುವತ್ತೊಕ್ಲುವಿನ ಕೆ ಪಿ ಅಶ್ರಫ್, ಶಾಲಾ ಶಿಕ್ಷಕರು ಹಾಗೂ ಪೋಷಕರು ಇದ್ದರು.
