ಕೊಡವ ಸಂಸ್ಕೃತಿಯ ಅಸ್ಮಿತೆಗಾಗಿ ಫೆ. 02 ರಿಂದ 07ರವರೆಗೆ ಅಖಿಲ ಕೊಡವ ಸಮಾಜ ನೇತೃತ್ವದಲ್ಲಿ ಕೊಡಗಿನ ಕುಟ್ಟಾದಿಂದ ಮಡಿಕೇರಿವರೆಗೆ ಬೃಹತ್ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ ಎಂದು ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನುಕುಮಾರ್ ತಿಳಿಸಿದರು.
ವಿರಾಜಪೇಟೆಯ ಕಟ್ಟೆಮಾಡು ಗ್ರಾಮದಲ್ಲಿ ನಡೆದ ದೇವರ ವಾರ್ಷಿಕ ಜಾತ್ರೆಯಲ್ಲಿ ಸಾಂಪ್ರದಾಯಿಕ ಉಡುಪಿನಲ್ಲಿದ್ದ ಕೊಡವರು, ಕೊಡವ ಭಾಷಿಕ ಸಮುದಾಯದ ಪುರುಷರು, ಮಹಿಳೆಯರು ಹಾಗೂ ಮಕ್ಕಳನ್ನು ದೇವಸ್ಥಾನದ ಒಳಗೆ ಬಿಡದಂತೆ ನಿರ್ಬಂಧ ಹೇರಿರುವ ಜೊತೆಗೆ ಕುಪ್ಯಚೇಲೆ ಹಾಕಿದ ಕೊಡವರ ಮೇಲೆ ಹಲ್ಲೆ ಮಾಡುವ ಮೂಲಕ ಅಲ್ಪ ಸಂಖ್ಯಾತರಾದ ಕೊಡವರಿಗೆ ಭದ್ರತೆ ಸೃಷ್ಟಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದರ ವಿರುದ್ಧ ಹೋರಾಟ ಮುಂದುವರೆಸಲಾಗುವುದು ಎಂದರು.
ಇಷ್ಟೆಲ್ಲಾ ಆದರೂ ಕಿಡಿಗೇಡಿಗಳ ವಿರುದ್ಧ ಇದುವರೆಗೆ ಯಾವುದೇ ಕಾನೂನು ಕ್ರಮ ಕೈಗೊಂಡಿರುವುದಿಲ್ಲ. ಕೆಲವರು ತಮ್ಮ ರಾಜಕೀಯ ಪ್ರಭಾವ ಬಳಸಿ ಕೊಡವರನ್ನೇ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಎಲ್ಲಾ ಕುತಂತ್ರಗಳನ್ನು ಹೆಣೆಯುತ್ತಿದ್ರುದಾರೆ. ಅಲ್ಲದೆ ಕೊಡವ ಹಾಗೂ ಕೊಡವ ಸಂಸ್ಕೃತಿಯ ಮೇಲೆ ಜನಾಂಗೀಯ ದೌರ್ಜನ್ಯ ಮತ್ತು ಜನಾಂಗೀಯ ತಾರತಮ್ಯಕ್ಕೆ ಸಾಕ್ಷಿಯಾಗುವ ಹಲವು ಘಟನೆಗಳು ನಡೆದಿವೆ. ಇದಕ್ಕೆಲ್ಲ ಕೊನೆ ಯಾವಾಗ ಎಂದು ಆತಂಕ ವ್ಯಕ್ತಪಡಿಸಿದರು.
ಕೊಡವ ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಹಕ್ಕಿನ ರಕ್ಷಣೆಯ ಹಿನ್ನೆಲೆಯಲ್ಲಿ ಎಲ್ಲಾ ಸಂಘ ಸಂಸ್ಥೆಗಳು, ವಿವಿಧ ಕೊಡವ ಸಮಾಜಗಳನ್ನು ಒಟ್ಟಿಗೆ ಕರೆದುಕೊಂಡು ಕಾಲ್ನಡಿಗೆ ಜಾಥಾ ಮೂಲಕ ಪ್ರತಿಭಟಿಸಲಿದ್ದೇವೆ ಎಂದರು.
ಈ ಸುದ್ದಿ ಓದಿದ್ದೀರಾ?: ಕೊಡಗು | ʼನಮ್ಮ ಬದುಕೇ ಹೋರಾಟ; ನಾವು ಮತಕ್ಕಾಗಿ ಬೇಕೇ ಹೊರತು ಸಾಮಾಜಿಕ ಬದುಕಿಗಲ್ಲʼ; ಆದಿವಾಸಿಗಳ ಅಳಲು
ಈ ವೇಳೆ ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ, ಬೆಂಗಳೂರು ಕೊಡವ ಸಮಾಜ ಅಧ್ಯಕ್ಷ ಕರವಟ್ಟೀರ ಪೆಮ್ಮಯ್ಯ ಸೇರಿದಂತೆ ವಿವಿಧ ಕೊಡವ ಸಮಾಜಗಳ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಇದ್ದರು.
