ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ರಾಷ್ಟ್ರೀಯ ನಾಯಕರು ಈಗಾಗಲೇ ಸಭೆ ಮಾಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೊಟ್ಟ ಮಾತಿನಂತೆ ನಡೆಯುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಬೋಸರಾಜು ಹೇಳಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಪರೇಷನ್ ಹಸ್ತ ಪದ ಬಳಕೆ ನಾವು ಮಾಡಲ್ಲ. ಆಪರೇಷನ್ ಎಂಬ ಕೆಟ್ಟ ಶಬ್ದ ತಂದಿದ್ದು ಬಿಜೆಪಿ. ಹಲವು ರಾಜ್ಯಗಳಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿದೆ. ಪಕ್ಷ ಸೇರ್ಪಡೆಗೆ ಹಲವು ಹೊಸ ಹೊಸ ಮುಖಗಳ ಹೆಸರುಗಳು ಬರುತ್ತಿದೆ. ಕಲ್ಯಾಣ ಕರ್ನಾಟಕದಲ್ಲೂ ಹಲವರು ನನ್ನ ಸಂಪರ್ಕದಲ್ಲಿದ್ದಾರೆ. ಇಂತಿಷ್ಟೇ ಜನ ಬರುತ್ತಾರೆಂದು ಹೇಳಲಾಗದು. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆದಿದೆ. ಇಂದಿಗೂ ಬಿಜೆಪಿ ಪರಿಸ್ಥಿತಿ ಬದಲಾಗಿಲ್ಲ” ಎಂದು ವ್ಯಂಗ್ಯವಾಡಿದರು.
“ಅನೇಕ ಜಿಲ್ಲೆಗಳಿಂದ ಶಾಸಕರು, ಮಾಜಿ ಶಾಸಕರು, ಪಕ್ಷದ ಪ್ರಮುಖರು ಕಾಂಗ್ರೆಸ್ ಸೇರ್ಪಡೆಯಾಗಲ್ಲಿದ್ದಾರೆ. ಅನೇಕ ನಾಯಕರು ಈಗಾಗಲೇ ಕಾಂಗ್ರೆಸ್ ಪಕ್ಷದ ಸಂಪರ್ಕದಲ್ಲಿದ್ದಾರೆ, ನಮ್ಮಲ್ಲಿ ಯಾವುದೇ ಆಪರೇಷನ್ ಹಸ್ತ ಎಂಬೂದು ಇಲ್ಲ. ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಅವರಾಗಿಯೇ ಬರುತ್ತಾರೆ. ಅಂತವರನ್ನು ಪಕ್ಷ ಬರಮಾಡಿಕೊಳ್ಳಲ್ಲಿದೆ” ಎಂದು ಹೇಳಿದರು.
ಹಾನಿಗೊಳಗದ ಜನರಲ್ ತಿಮ್ಮಯ್ಯ ಪ್ರತಿಮೆ ವೀಕ್ಷಣೆ
ಕಳೆದ ಸೋಮವಾರ ಸರ್ಕಾರಿ ಬಸ್ ಡಿಕ್ಕಿಯಾಗಿ ಹಾನಿಗೆ ಒಳಗಾಗಿದ್ದ 50 ವರ್ಷದ ಜನರಲ್ ತಿಮ್ಮಯ್ಯ ಪ್ರತಿಮೆಯನ್ನು ಬೋಸರಾಜ್ ಪರಿಶೀಲಿಸಿದರು. ಪ್ರತಿನೆಯನ್ನೆ ದುರಸ್ತಿ ಮಾಡಿ ಪುನರ್ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿರಿಯ ರಾಜಕಾರಣಿ ಎಂ.ಸಿ ನಾಣಯ್ಯ ಅವರ ಪರಿಶ್ರಮದಿಂದ 1973ರಲ್ಲಿ ಈ ಪ್ರತಿಮೆ ನಿರ್ಮಿಸಲಾಗಿತ್ತು. ಅದನ್ನು ಉಳಿಸಿಕೊಳ್ಳಬೇಕು ಎಂದು ಸಚಿವರಿಗೆ ಮಡಿಕೇರಿ ಶಾಸಕ ಮಂತರ್ ಗೌಡ ಮನವಿ ಮಾಡಿದರು.