ಬೀದರ್‌ | ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಿ : ಡಿಸಿ ಗೋವಿಂದರೆಡ್ಡಿ

Date:

ಬೀದರ್ ಜಿಲ್ಲೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪ್ರಥಮ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದರು.

- Advertisement -

ಸೋಮವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಯಾವುದೇ ಸಮಸ್ಯೆಗಳು ಕಂಡುಬಂದರೆ ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕು” ಎಂದು ಸೂಚಿಸಿದರು.

“ಸಂಬಂಧಪಟ್ಟ ಗ್ರಾಮಗಳಲ್ಲಿ ಖಾಸಗಿ ಬೋರವೆಲ್‌ಗಳನ್ನು ಬಾಡಿಗೆ ಪಡೆಯಬೇಕು. ಖಾಸಗಿಯಾಗಿ ಲಭ್ಯ ಇಲ್ಲದಿದ್ದರೆ ಕೂಡಲೇ ಟ್ಯಾಂಕರ್ ಮಾಲೀಕರಿಂದ ಕೊಟೆಶನ್ ಪಡೆದು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕು” ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈಗಾಗಲೇ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ನೀರಿನ ಟ್ಯಾಂಕರ್ ಬಾಡಿಗೆ ಪಡೆದು ಕುಡಿಯುವ ನೀರು ಸರಬರಾಜು ಮಾಡುತ್ತಿದ್ದು, ಟ್ಯಾಂಕರ್ ಮಾಲೀಕರಿಗೆ 15 ದಿನಕೊಮ್ಮೆ ಬಾಡಿಗೆ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು. ಅದೇ ರೀತಿಯಾಗಿ ಬಾಡಿಗೆ ಪಡೆದ ಖಾಸಗಿ ಬೋರವೆಲ್ ಮಾಲೀಕರಿಗೂ ಸಹ ಬಾಡಿಗೆ ಪಾವತಿಸುವ ಕ್ರಮಕೈಗೊಳ್ಳಬೇಕೆಂದು ಸಂಬಂಧಪಟ್ಟ ತಹಸೀಲ್ದಾರ್‌ಗಳಿಗೆ ಸೂಚಿಸಿದರು.

ಬಸವಕಲ್ಯಾಣ, ಭಾಲ್ಕಿ, ಕಮಲನಗರ ತಾಲೂಕುಗಳಲ್ಲಿ ಹಲವೆಡೆ ಮೋಟಾರ್ ಮತ್ತು ಪೈಪ್ ಲೈನ್ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಅದರ ಬಿಲ್‌ಗಳ ಪಾವತಿಗೆ ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಮಾತನಾಡಿ‌, “ಈಗಾಗಲೇ ಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಮುಂಜಾಗ್ರತೆ ಕ್ರಮಗಳನ್ನು ವಹಿಸಿಕೊಳ್ಳಲಾಗಿದ್ದು, ಕೆಲವೊಂದು ಗ್ರಾಮಗಳಲ್ಲಿ ಬೋರವೆಲ್ ಕೊರೆಸಿ ಪೈಪ್‌ಲೈನ್ ಅಳವಡಿಸಲು ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳ್ಳುವಂತೆ ಅಧಿಕಾರಿಗಳು ಕ್ರಮವಹಿಸಬೇಕು” ಎಂದರು.

“ಅದೇ ರೀತಿ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ, ವಸತಿ ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು” ಎಂದು ಜಿಲ್ಲಾ ಪಂಚಾಯತ್‌ ಸಿಇಓ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ನಾಲ್ವರ ವಿರುದ್ಧ ಪ್ರಕರಣ ದಾಖಲು

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಮೇಶ್ವರ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಬಸವಕಲ್ಯಾಣ | ಬೌದ್ಧ ಧರ್ಮ ಚಾರಿಕಾ ಕಾರ್ಯಕ್ರಮ

ಮಾತಾ ರಮಾಬಾಯಿ ಅಂಬೇಡ್ಕರ್ ಮಹಿಳಾ ಟ್ರಸ್ಟ್ ಹಾಗೂ ಸರ್ವೋದಯ ಸಿದ್ಧಾರ್ಥ ಕ್ಲಬ್...