ಚಾಮರಾಜನಗರ | ಹೆದ್ದಾರಿ ಸುರಕ್ಷತೆಗೆ ಹೆಚ್ಚಿನ ಆಧ್ಯತೆ ನೀಡಿ: ಸಂಸದ ಸುನೀಲ್ ಬೋಸ್

Date:

ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ದಿಶಾ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಸುನೀಲ್ ಬೋಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ರಸ್ತೆಗಳಲ್ಲಿ ಅವೈಜ್ಞಾನಿಕ ರಸ್ತೆ ವಿಭಜಕ(ಡಿವೈಡರ್)ಗಳಲ್ಲಿನ ಲೋಪಗಳನ್ನು ಸರಿಪಡಿಸಿ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಜಿಲ್ಲೆಯ ಅಭಿವೃದ್ಧಿ ಹಿತದೃಷ್ಠಿಯಿಂದ ಉತ್ತಮ ರಸ್ತೆಗಳನ್ನು ನಿರ್ಮಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಆಗಿದ್ದಾಂಗ್ಗೆ ಖುದ್ದು ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳನ್ನು ಪರಿಶೀಲಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಮುಂದಾಗುವಂತೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಂತೇಮರಹಳ್ಳಿಯಿಂದ ಸತ್ತೇಗಾಲದವರೆಗೆ ನಿರ್ಮಿಸಿರುವ ರಸ್ತೆಯಲ್ಲಿ ಕೆಲವೆಡೆ ರಸ್ತೆ ವಿಭಜಕಗಳು, ರಸ್ತೆ ಡುಬ್ಬಗಳು, ಸೇತುವೆ ಕಾಮಗಾರಿಗಳು ಅವೈಜ್ಞಾನಿಕವಾಗಿವೆ. ಇದರಿಂದ, ಇತ್ತೀಚೆಗೆ ಅಪಘಾತಗಳು ಹೆಚ್ಚಾಗಿ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿರುವುದು ಕಂಡುಬಂದಿದೆ. ಸಂತೇಮರಹಳ್ಳಿ, ಸತ್ತೇಗಾಲ, ನರೀಪುರ, ಹಾಗೂ ದೊಡ್ಡರಾಯಪೇಟೆ, ಸೋಮವಾರಪೇಟೆ ವೃತ್ತದಲ್ಲಿ ಜಂಕ್ಷನ್ ನಿರ್ಮಿಸಲು ಅಧಿಕಾರಿಗಳಿಗೆ ಕಳೆದ ಸಭೆಯಲ್ಲಿ ತಿಳಿಸಿದ್ದರೂ ಇನ್ನೂ ಸಹ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಮಾಹಿತಿ ಫಲಕಗಳನ್ನು ಸಮರ್ಪಕವಾಗಿ ಅಳವಡಿಸಿಲ್ಲ. ಇಂತಹ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು.

ನಗರದ ಜೋಡಿರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಆಸ್ತಿಯ ಮಾಲೀಕರಿಗೆ ನಿಗದಿತ ಪರಿಹಾರ ಪಾವತಿಸಿ ರಸ್ತೆ ವಿಸ್ತರಣೆಗೆ ಕ್ರಮ ವಹಿಸಬೇಕು. ಕೋರ್ಟ್ ರಸ್ತೆ ಕಾಮಗಾರಿಯು ವಿಳಂಬವಾಗಿದೆ. ಕಾಮಗಾರಿ ವಿಳಂಬವಾದಷ್ಟೂ ಮುಂದುವರೆದ ಕಾಮಗಾರಿಗೆ ಹೆಚ್ಚುವರಿ ಅನುದಾನ ಬೇಕಾಗುವುದರಿಂದ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಯಾವುದೇ ಸಬೂಬು ಹೇಳದೇ ರಸ್ತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಕೆಲಸ ಮಾಡದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಸೂಚಿಸಿದರು.

ಜಿಲ್ಲೆಯ ಹನೂರು ಭಾಗ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಕುರಟ್ಟಿ ಹೊಸೂರು, ಪಳನೀಮೇಡು, ಕೌದಳ್ಳಿ ಭಾಗದಲ್ಲಿ ಅಂತರ್ಜಲ ಕುಸಿದಿದ್ದು, ಅಲ್ಲಿನ ಜನರ ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಅಮೃತ ನಗರೊತ್ಥಾನ ಯೋಜನೆಯಡಿ ಮಾಲಂಗಿಯಿಂದ ಚಾಮರಾಜನಗರಕ್ಕೆ ನೀರು ತರುವ ಟೆಂಡರ್ ಅನುಮೋದನೆಯಾಗಿದ್ದು, ಕಾಮಗಾರಿ ತ್ವರಿತವಾಗಿ ಆಗಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಜಲಜೀವನ್ ಮಿಷನ್ ಯೋಜನೆ ಕಾಮಗಾರಿಗೆ ಅರಣ್ಯ ಅಧಿಕಾರಿಗಳು ಅಡ್ಡಿಪಡಿಸದೇ ಸಹಕಾರ ನೀಡಬೇಕು ಎಂದರು.

ಪಶುಪಾಲನಾ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಜಾನುವಾರುಗಳಿಗೆ ವಿಮೆ ಮಾಡಿಸಲಾಗುತ್ತಿದ್ದು, ಅಕಸ್ಮಿಕವಾಗಿ ಮರಣ ಹೊಂದುವ ಜಾನುವಾರುಗಳಿಗೆ ವಿಮಾ ಹಣವನ್ನು ಸಕಾಲದಲ್ಲಿ ಪಾವತಿಸಬೇಕು. ಯಾವುದೇ ಸರ್ಕಾರಿ ಭೂಮಿ, ಕೆರೆ-ಕಟ್ಟೆಗಳು, ಸ್ಮಶಾನ, ಗೋಮಾಳಗಳು ಒತ್ತುವರಿಯಾಗಿದ್ದಲ್ಲಿ ಕಂದಾಯ ಅಧಿಕಾರಿಗಳು ಜಾಗದ ಸರ್ವೇ ಮಾಡಿ ಒತ್ತುವರಿ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇತ್ತೀಚೆಗೆ, ಯಳಂದೂರು ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಎದುರಾಗಿ ಡಯಾಲಿಸಿಸ್ ಚಿಕಿತ್ಸೆಗೆ ರೋಗಿಗಳಿಗೆ ತೊಂದರೆಯಾಗಿರುವುದು ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಇದು ಮರುಕಳಿಸಬಾರದು. ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ರಾತ್ರಿ ವೇಳೆಯಲ್ಲಿ ಲಭ್ಯರಿರಬೇಕು. ನಗರದ ಜಿಲ್ಲಾಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಮಧ್ಯಾಹ್ನ 2 ಗಂಟೆಯ ನಂತರವೂ ಜನರಿಗೆ ವೈದ್ಯಕೀಯ ಸೇವೆ ಸಮರ್ಪಕವಾಗಿ ಸಿಗುವಂತಾಗಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳು ಬಾರದ ಹಾಗೇ ಆರೋಗ್ಯ ಇಲಾಖೆ ಅಧಿಕಾರಿಗಳು ನಿಗಾ ವಹಿಸುವಂತೆ ಸೂಚಿಸಿದರು.

ಈ ವಿಶೇಷ ವಿಡಿಯೋ ನೋಡಿ https://youtu.be/YFQAjyMLUY0?si=Qfiwxj6LDDWH46WB

ಇನ್ನುಳಿದಂತೆ ಕೃಷಿ, ತೋಟಗಾರಿಕೆ, ಆಹಾರ, ಸಮಾಜ ಕಲ್ಯಾಣ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ನರೇಗಾ, ಶಿಕ್ಷಣ, ಸ್ವಚ್ಚ ಭಾರತ್ ಮಿಷನ್, ಗ್ರಾಮೀಣಾಭಿವೃದ್ಧಿ, ಗಣಿ ಮತ್ತು ಭೂವಿಜ್ಞಾನ, ಚೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಜಿಲ್ಲೆಯ ಅಭಿವೃದ್ದಿಗಾಗಿ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಒಂದು ತಂಡವಾಗಿ ಕೆಲಸ ಮಾಡಬೇಕು. ಜಿಲ್ಲೆಯ ಪ್ರಗತಿಗೆ ಹೆಚ್ಚಿನ ಪರಿಶ್ರಮ ಹಾಕಬೇಕು ಎಂದು ಸಲಹೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಜ್ಯೋತಿಗೌಡನಪುರಕ್ಕೆ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಭೇಟಿ

ಗುಂಡ್ಲುಪೇಟೆ ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಕ್ಷಯ್ ಪ್ರಕಾಶ್, ಸೇರಿದಂತೆ ಇನ್ನಿತರರು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...