ಕೊಡಗು | ʼದೇಶ ಉಳಿಸಿ ಸಂಕಲ್ಪ ಯಾತ್ರೆʼಗೆ ಮಡಿಕೇರಿಯಲ್ಲಿ ಸ್ವಾಗತ

Date:

ಕರ್ನಾಟಕ ಸಮಸ್ತ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 1ರಿಂದ 8ರ ತನಕ ಬೆಂಗಳೂರಿನಿಂದ ಬೆಳಗಾವಿಯವರೆಗೆ ದೇಶ ಉಳಿಸಿ ಸಂಕಲ್ಪ ಯಾತ್ರೆ ಆರಂಭಿಸಿದ್ದು, ಮೈಸೂರು, ಕುಶಾಲನಗರ ದಾರಿಯಾಗಿ ಆಗಮಿಸಿದ ಜಾಥಾ ತಂಡವನ್ನು ಕೊಡಗು ನಗರದ ಸುದರ್ಶನ್ ವೃತದಲ್ಲಿ  ಸ್ವಾಗತಿಸಲಾಯಿತು.

ನಗರದ ಸುದರ್ಶನ ವೃತ್ತದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಸೇರಿದ ಪ್ರಗತಿಪರ ಸಂಘಟನೆಯ ಮುಖಂಡರು ಹಾಗೂ ಜಾಥಾದಲ್ಲಿ ಆಗಮಿಸಿದ ಪ್ರಮುಖರು ಸಭೆ ನಡೆಸಿ, ಬಿಜೆಪಿ ಪಕ್ಷ ʼಇಸ್ ಬಾರ್ ಚಾರ್ ಸೌ ಪಾರ್ʼ ಎಂಬ ಹುಸಿ ಪ್ರಚಾರದಲ್ಲಿ ನಿರತವಾಗಿದೆ. ಇಂತಹ ಸಮಯದಲ್ಲಿ ಮತದಾರರು ಎಚ್ಚೆತ್ತು ʼಇಸ್ ಬಾರ್ ಬಿಜೆಪಿಕಿ ಹಾರ್ʼ ಎನ್ನುವ ಸಂದೇಶ ಸಾರಿದರು.

ಸಭೆಯಲ್ಲಿ ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ, ಧರ್ಮ ಧರ್ಮಗಳ ನಡುವೆ ದ್ವೇಷ ಬೆಳೆಸುವ, ದೇಶವನ್ನು ಭಾವೋಧ್ರೇಕಗೊಳಿಸಿ ವಾಮ ಮಾರ್ಗದ ಮೂಲಕ ಜನರ ಮತ ಪಡೆದು, ಅಧಿಕಾರ ಪಡೆದು ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ಕುತಂತ್ರಿಗಳಿಗೆ ಸೋಲಿನ ರುಚಿ ತೋರಿಸಬೇಕು ಎಂದು ನಿರ್ಧರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಮಾ ಅತೆ ಇಸ್ಲಾಮೀ ಜಿಲ್ಲಾ ಅಧ್ಯಕ್ಷ ಅಬ್ದುಲ್ ರೆಹಮಾನ್, ಕಾರ್ಯದರ್ಶಿ ಮೊಹಮ್ಮದ್ ಮುಸ್ತಪಾ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮುಖಂಡ  ಅಬ್ದುಲ್ ಗಪೂರ್, ನಗರ ಸಭಾ ಸದಸ್ಯರುಗಳಾದ ಅಮೀನ್ ಮೊಹ್ಸಿನ್ ಹಾಗೂ ಮನ್ಸೂರ್, ದಲಿತಪರ ಹೋರಾಟಗಾರ ನಿರ್ವಾಣಪ್ಪ, ಲಕ್ಷ್ಮಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃದ್ಧರು ಹಾಗೂ ವಿಕಲಚೇತನರ ಬೆಂಬಲ ಸಭೆ

ಪಿಂಚಣಿ ಕಡಿತ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಮತ್ತು ವಿಕಲಚೇತನರಿಗೆ ಉಂಟಾಗುತ್ತಿರುವ...

ಕೋಲಾರ | ಜಡತ್ವಕ್ಕೆ ವಿವೇಕ ನೀಡಿದ ಕುಸ್‌ ಕುಸ್ ದಿಲ್ ಕುಶ್ ನಾಟಕ

ಯಾವುದು ಸ್ಥಿರವಲ್ಲ. ಗಳಿಗೆ ಗಳಿಗೆಯೂ ಬದಲಾಗುತ್ತಿರುತ್ತದೆ. ಸ್ಥಿರವೆಂದು ಭಾವಿಸಿದವನಿಗೆ ಅವನ ತಲೆಯೇ...

ರಾಯಚೂರು | ಮದುವೆಗೆ ಪ್ರಿಯಕರನ ಮನೆಯವರ ವಿರೋಧ : ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

ಪ್ರೀತಿಸಿದ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಯುವತಿ ಮಹಿಳಾ...

ದಕ್ಷಿಣ ಕನ್ನಡ | ಭಾರೀ ಮಳೆ; ಕಲ್ಲಡ್ಕದಲ್ಲಿ ರಸ್ತೆಯೇ ಮಾಯವಾದ ದೃಶ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಭಾರೀ ಮಳೆ ಸುರಿಯಿತು....