ಗೋಕರ್ಣ | ಕಡಲತೀರದಲ್ಲಿ ಅಕ್ರಮ ರೆಸಾರ್ಟ್ ತೆರವು: ಕಾನೂನು ಸುವ್ಯವಸ್ಥೆಗೆ ನಿಷೇಧಾಜ್ಞೆ ಜಾರಿ

Date:

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಗೋಕರ್ಣದ ಸಮೀಪವಿರುವ ನಾಡುಮಾಸ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ರಮ ರೆಸಾರ್ಟ್ ಹಾಗೂ ಹೋಂ ಸ್ಟೇಗಳ ತೆರವು ಕಾರ್ಯಾಚರಣೆ ಆರಂಭವಾಗಿದೆ.

- Advertisement -

ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕುಮಟಾ ಉಪವಿಭಾಗಾಧಿಕಾರಿಗಳು ಆಯ್ದ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಕರಾವಳಿ ನಿಯಂತ್ರಣ ವಲಯ (CRZ) ನಿಯಮಗಳನ್ನು ಗಾಳಿಗೆ ತೂರಿ ಮತ್ತು ಕಂದಾಯ ಇಲಾಖೆಯ ಪೂರ್ವಾನುಮತಿ ಪಡೆಯದೆ ನಿರ್ಮಿಸಲಾಗಿರುವ ಒಟ್ಟು 44 ರೆಸಾರ್ಟ್‌ಗಳ ವಿರುದ್ಧ ತಾಲೂಕಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ. ನಾಡುಮಾಸ್ಕೇರಿ ಪಂಚಾಯತ್ ವ್ಯಾಪ್ತಿಯ ದುಬ್ಬನಸಸಿ, ಭಾವಿಕೊಡ್ಲ ಹಾಗೂ ಗಂಗೆಕೊಳ್ಳ ಗ್ರಾಮಗಳಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ.

1000581435

ಒಟ್ಟು 44 ಪತ್ತೆಯಾದ ಅಕ್ರಮ ರೆಸಾರ್ಟ್‌ಗಳು ಅದರಲ್ಲಿ 16 ರೆಸಾರ್ಟ್ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸುವುದಾಗಿ ತಿಳಿಸಿ ನ್ಯಾಯಾಲಯದಿಂದ ತಾತ್ಕಾಲಿಕ ತಡೆ ತಂದಿದ್ದಾರೆ. ಈಗಾಗಲೇ 7 ರೆಸಾರ್ಟ್ ಮಾಲೀಕರು ತಾವಾಗಿಯೇ ಕಟ್ಟಡಗಳನ್ನು ತೆರವುಗೊಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ರಾಜ್ಯದ ಜಿಎಸ್ಟಿ ಪಾಲು ಕೊಡಿಸಲು ಬಿಜೆಪಿ ನಾಯಕರು ತಮ್ಮ ತಾಕತ್ತು ತೋರಿಸಲಿ: ಭೀಮಣ್ಣ ನಾಯ್ಕ ವಾಗ್ದಾಳಿ

ಬಾಕಿ ಉಳಿದಿರುವ 21 ಅಕ್ರಮ ರೆಸಾರ್ಟ್‌ಗಳನ್ನು ತಾಲೂಕಾಡಳಿತವು ಇಂದು ವಶಕ್ಕೆ ಪಡೆದು, ನಿಯಮಾನುಸಾರ ತೆರವುಗೊಳಿಸಲು ನಿರ್ಧರಿಸಿದೆ ಎಂದು ತಹಶೀಲ್ದಾರ್ ಶ್ರೀಕೃಷ್ಣ ಮಾಹಿತಿ ನೀಡಿದ್ದಾರೆ.

ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಥವಾ ರೆಸಾರ್ಟ್ ಮಾಲೀಕರಿಂದ ವಿರೋಧ ವ್ಯಕ್ತವಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವ ಸಾಧ್ಯತೆ ಇರುವುದರಿಂದ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅಡಿಯಲ್ಲಿ ನಿರ್ಬಂಧ ಹೇರಲಾಗಿದೆ.

ಈ ಆದೇಶವು ಮಾರ್ಚ್ 09, 2026ರ ಬೆಳಗ್ಗೆ 10:00 ಗಂಟೆಯಿಂದ ಮಾರ್ಚ್ 10, 2026ರ ಬೆಳಗ್ಗೆ 10:00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಸದರಿ ಪ್ರದೇಶದ ಸಮುದ್ರ ತೀರದಲ್ಲಿ ಗುಂಪು ಸೇರುವುದು, ಸಾರ್ವಜನಿಕ ವಾಹನಗಳ ಸಂಚಾರ ಮತ್ತು ಪ್ರತಿಭಟನೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಪಿ. ಶ್ರವಣ್ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...