ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

Date:

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು ಪ್ರವಾಸಿಗರನ್ನು ಕುಡ್ಲೆ ಬೀಚ್‌ನ ಜೀವ ರಕ್ಷಕ ಹಾಗೂ ವಾಟರ್‌ ಸ್ಪೋರ್ಟ್ಸ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾರೆ.

- Advertisement -

ಬೆಂಗಳೂರಿನ ಹರಿಬಾಬು (30) ಹಾಗೂ ಶರವಾನ್ (30) ರಕ್ಷಿಸಲ್ಪಟ್ಟವರು. ಮೂವರು ಸ್ನೇಹಿತರು ಸಮುದ್ರದಲ್ಲಿ ಈಜುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸುಳಿಯ ಸೆಳೆತಕ್ಕೆ ಸಿಲುಕಿದ್ದಾರೆ. ಈ ವೇಳೆ ಹರಿಬಾಬು ಹಾಗೂ ಶರವಾನ್‌ ಅವರಿಗೆ ದಡದ ಕಡೆಗೆ ಈಜಲು ಸಾಧ್ಯವಾಗದೆ ನೀರಿನಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಇದನ್ನು ಗಮನಿಸಿದ ಕರ್ತವ್ಯದಲ್ಲಿದ್ದ ಜೀವ ರಕ್ಷಕ ಮಂಜುನಾಥ ಹರಿಕಂತ್ರ ಹಾಗೂ ಜೆಸ್ಕಿ ಚಾಲಕ ಪ್ರಕಾಶ ಲಮಾಣಿ ಕೂಡಲೇ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಸಮುದ್ರದಿಂದ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ರಕ್ಷಣಾ ಕಾರ್ಯಕ್ಕೆ ಜೀವ ರಕ್ಷಕ ನಾಗೇಂದ್ರ ಕೂರ್ಲೆ, ಪ್ರವಾಸಿ ಮಿತ್ರ ಸತೀಶ್ ನಾಯಕ್ ಹಾಗೂ ಕುಡ್ಲೆ ಬೀಚ್‌ನ ಮೈ ಸ್ಟಿಕ್ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿ ಸಹಕಾರ ನೀಡಿದ್ದಾರೆ.

ಸಿಬ್ಬಂದಿ ತಕ್ಷಣ ಸ್ಪಂದಿಸಿ ನಡೆಸಿದ ಕಾರ್ಯಾಚರಣೆಯಿಂದ ಇಬ್ಬರು ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಬೀಚ್‌ನಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...