ಭಾರತ ಬಂದ್‌ಗೆ ಬಾಗೇಪಲ್ಲಿ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ

Date:

ಬಾಗೇಪಲ್ಲಿ:ಕೇಂದ್ರ ಸರಕಾರದ 4 ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಮನರೇಗಾ ಯೋಜನೆಯನ್ನು ಪುನರ್‌ ಸ್ಥಾಪಿಸಬೇಕು ವಿಬಿ- ಜಿ ರಾಮ್‌ ಜಿ ಕಾಯಿದೆ ರದ್ದುಗೊಳಿಸುವುದು ಹಾಗೂ ವಿದ್ಯುಚ್ಛಕ್ತಿ ಖಾಸಗೀಕರಣ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸಂಯುಕ್ತ ಹೋರಾಟ ಸಮಿತಿ ವಿವಿಧ ಕಾರ್ಮಿಕ ಒಕ್ಕೂಟ ಅಂಗನವಾಡಿ ಕಾರ್ಯಕರ್ತೆಯರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿದ ಭಾರತ ಬಂದ್‌ಗೆ ಬಾಗೇಪಲ್ಲಿ ತಾಲ್ಲೂಕು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

- Advertisement -

ಕೇಂದ್ರ ಸರಕಾರದ ವಿವಿಧ ನೀತಿಗಳನ್ನು ಖಂಡಿಸಿ ಹಮ್ಮಿಕೊಂಡಿದ್ದ ಭಾರತ್‌ ಬಂದ್‌ನ ಭಾಗವಾಗಿ ವಿವಿಧ ಕೈಗಾರಿಕೆಗಳ ಕಾರ್ಮಿಕ ಯೂನಿಯನ್‌ಗಳ ಮುಖಂಡರು ಸಿಪಿಐಎಂ ರೆಡ್ ಪ್ಲಾಗ್ ಮಹಿಳಾ ಸಂಘಟನೆಗಳ ಹೊರ ಗುತ್ತಿಗೆ ನೌಕರರ ಸಂಘ ಕೆ.ಆರ್.ಪಿ.ಎಸ್ ರೈತ ಸಂಘ ಸಿಐಟಿಯು ಪದಾಧಿಕಾರಿಗಳನ್ನು ಒಳಗೊಂಡ ಪ್ರತಿಭಟನಾ ನಿರತರು ಗೂಳೂರು ವೃತ್ತದಿಂದ ಪಟ್ಟಣದ ಬಸ್‌ ನಿಲ್ದಾಣದ ವರೆಗೆ ಬೃಹತ್ ಪ್ರತಿಭಟನಾ ಜಾಥಾ ಆರಂಭಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತಾಲೂಕಿನಲ್ಲಿ ಭಾರತ್‌ ಬಂದ್‌ನ್ನು ಯಶಸ್ವಿ ಮಾಡುವ ನಿಟ್ಟಿನಲ್ಲಿ ಕಾರ್ಮಿಕ ಒಕ್ಕೂಟಗಳು ಪ್ರತಿಭಟನೆ ನಡೆಸಿದವು. ಬಸ್ ನಿಲ್ದಾಣದ ಮುಂಭಾಗದಲ್ಲಿ ಬೆಳಗ್ಗೆಯಿಂದಲೇ ಆರಂಭವಾದ ಪ್ರತಿಭಟನೆ ಸುಮಾರು 5 ಗಂಟೆಗಳ ಕಾಲ ನಿರಂತರವಾಗಿ ನಡೆಯಿತು ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಬಾಗೇಪಲ್ಲಿ ತಾಲ್ಲೂಕು ಅಂಗನವಾಡಿ ನೌಕರರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಹೋರಾಟ ನಡೆಸಿದರು. ಬಾಗೇಪಲ್ಲಿ ತಾಲ್ಲೂಕು ವಿಶೇಷವಾಗಿ ಅಂಗನವಾಡಿ ನೌಕರರು ಜಾಥಾ ನಡೆಸಿ ಗಮನ ಸೆಳೆದರು. ನೌಕರರು ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆ ಅಂಗನವಾಡಿಗಳಿಗೆ ರಜೆ ನೀಡಲಾಗಿತ್ತು ಎಂದು ಸಿಐಟಿಯು ಮುಖಂಡ ಮುಸ್ತಫಾ ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ಕಾರ್ಮಿಕ ರೈತ ವಿರೋಧಿ ನೀತಿಗಳ ವಿರುದ್ಧ ಗುರುವಾರ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಚೇಳೂರಿನಲ್ಲಿ ಹೋರಾಟಕ್ಕೆ ಮಾತ್ರ ಸೀಮಿತವಾಯಿತು ಕಾರ್ಮಿಕರು ರೈತರು ಯುವಜನರು ಮಹಿಳೆಯರು ಸೇರಿ ಕಾರ್ಮಿಕ ವರ್ಗಗಳ ನೂರಾರು ಮಂದಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಮುಖಂಡ ಎಂ.ಪಿ.ಮುನಿ ವೆಂಕಟಪ್ಪ ಮಾತನಾಡಿ ಕೇಂದ್ರ ಸರಕಾರ ಜಾರಿಗೊಳಿಸಿರುವ ಹಾಗೂ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳು ದುಡಿಯುವ ವರ್ಗದ ಹಕ್ಕುಗಳನ್ನು ಸಂಪೂರ್ಣವಾಗಿ ಕಿತ್ತುಕೊಳ್ಳುವಂತಿವೆ. ದಿನಕ್ಕೆ 12 ಗಂಟೆ ದುಡಿಮೆ ಗುತ್ತಿಗೆ ಹಾಗೂ ನಿಗದಿತ ಅವಧಿಯ ಉದ್ಯೋಗಗಳ ವಿಸ್ತರಣೆ, ಮಹಿಳೆಯರನ್ನು ರಾತ್ರಿ ಪಾಳೆಯಲ್ಲಿ ದುಡಿಸಿಕೊಳ್ಳುವ ನೀತಿಗಳು ಕಾರ್ಮಿಕರ ಬದುಕನ್ನು ಅನಿಶ್ಚಿತತೆಗೆ ತಳ್ಳಿವೆ. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಖಾಸಗೀಕರಣದಿಂದ ಜನಸಾಮಾನ್ಯರಿಗೆ ಮೂಲಭೂತ ಸೇವೆ ಸಿಗದಂತಾಗಿದೆ. ನರೇಗಾ ಯೋಜನೆ ದುರ್ಬಲಗೊಳಿಸುವ ಪ್ರಯತ್ನಗಳು ಗ್ರಾಮೀಣ ಜನರ ಜೀವನಾಧಾರಕ್ಕೆ ಹೊಡೆತ ನೀಡುತ್ತಿವೆ ವಿದ್ಯುತ್‌ ಕ್ಷೇತ್ರ ಖಾಸಗೀಕರಣಗೊಂಡರೆ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಬೃಹತ್ ಪ್ರತಿಭಟನೆ

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ರಘುರಾಮ ರೆಡ್ಡಿ, ಚನ್ನರಾಯಪ್ಪ,ಜಿ.ಕೃಷ್ಣಪ್ಪ,ವಾಲ್ಮೀಕಿ ಅಶ್ವತ್ಥಪ್ಪ,ಡಿ.ಟಿ.ಮುನಿಸ್ವಾಮಿ ,ಮುನಿಯಪ್ಪ,ರಾಮಾಂಜಿ,ಓಬಳರಾಜು,ಎಸ್.ಎಫ್.ಐ.ಸೋಮಶೇಖರ ಹಾಗೂ ಇತರೆ ಸಂಘಟನೆಗಳ ಮುಖಂಡರು ಹಾಜರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...