ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಘಟನೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ(ಬಿ) ಗ್ರಾಮದ ಬಿಎಸ್‌ಎಸ್‌ಕೆ ಕಾರ್ಖಾನೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.
ಕಾರು ಚಾಲಕ ಹಾಗೂ ಕಲಬುರಗಿ ಮೂಲದ ಜಗನ್ನಾಥ (46) ಎಂಬುವವರು ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕಾರು ಚಾಲಕನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ. ಗೂಡ್ಸ್ ವಾಹನದಲ್ಲಿದ್ದವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಳ್ಳಿಖೇಡ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಪಘಾತ ಸ್ಥಳಕ್ಕೆ ಹಳ್ಳಿಖೇಡ್(ಬಿ) ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಮೃತರ ಮಾಹಿತಿಯನ್ನು ಕಲೆಹಾಕುತ್ತಿದ್ದೇವೆ ಎಂದು ಪಿಎಸ್‌ಐ ಮಾಹಿತಿ ನೀಡಿದ್ದಾರೆ.
ಹಳ್ಳಿಖೇಡ(ಬಿ) ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.