ಉಡುಪಿ | ಅಪಪ್ರಚಾರ ನಡೆಸುವವರಿಗೆ ಪಡುಕುಡೂರಿನ‌ ತಾಯಿ ಭದ್ರಕಾಳಿ ಸದ್ಬುದ್ದಿ ನೀಡಲಿ : ಗೋಪಿನಾಥ ಭಟ್

Date:

ಬ್ರಹ್ಮಾಂಡ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ನಕಲಿ ಪರಶುರಾಮ ಪ್ರತಿಮೆ ವಿವಾದದಿಂದ ಕಾರ್ಕಳದಲ್ಲಿ ವರ್ಚಸ್ಸು ಕಳೆದುಕೊಂಡಿರುವವರು ವಿನಾಕಾರಣ ಕಾಂಗ್ರೆಸ್ ನಾಯಕರ ವಿರುದ್ದ ಆರೋಪ ಮಾಡುತ್ತಿದ್ದಾರೆ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ ಭಟ್ ಹೇಳಿದ್ದಾರೆ.

- Advertisement -

ಒಂದು ಕಡೆ ಆರೋಪಗಳಿಂದ ಮುಖ ತೋರಿಸಲಾಗದ ಪರಿಸ್ಥಿತಿ, ಮತ್ತೊಂದೆಡೆ ಹೆಚ್ಚುತ್ತಿರುವ ಕಾಂಗ್ರೆಸ್ ಸರಕಾರದ ಜನಪ್ರೀಯತೆಯಿಂದ ಕಂಗಾಲಾಗಿರುವ ಕಾರ್ಕಳ ಬಿಜೆಪಿ ನಾಯಕರು ದಿನಕ್ಕೊಂದು ಸುಳ್ಳುಗಳೊಂದಿಗೆ ಕಾಂಗ್ರೆಸ್ ನಾಯಕರ ವಿರುದ್ದ ಅಪಪ್ರಚಾರ ನಡೆಸುತ್ತಿರುವುದು ಖಂಡನೀಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ಯಥೇಚ್ಛವಾಗಿ ಅನುದಾನವನ್ನು ನೀಡುತ್ತಿದ್ದು ಅದರಂತೆ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೂ ಅನುದಾನವು ಮಂಜೂರಾಗಿದೆ. ರಾಜ್ಯ ಸರ್ಕಾರದ ಅನುದಾನವನ್ನು ನನ್ನದೇ ಸಾಧನೆ ಎಂದು ಬಿಂಬಿಸಿಕೊಳ್ಳಲು ತಿಣುಕಾಡುತ್ತಿರುವ ಶಾಸಕ ಸುನೀಲ್ ಕುಮಾರ್ ತನ್ನ ಹಿಂಬಾಲಕರ ಮೂಲಕ ಕಾಂಗ್ರೆಸ್ ನಾಯಕರ ವಿರುದ್ದ ಹೇಳಿಕೆ ಕೊಡಿಸುತ್ತಿದ್ದಾರೆ.

ಮುನಿಯಾಲು ಪಡುಕುಡೂರು ರಸ್ತೆಯಾಗಲಿ ಅಥವಾ ಕಾರ್ಕಳದ ಯಾವುದೇ ರಸ್ತೆಯಾಗಲಿ ಗುತ್ತಿಗೆ ಪಡೆದುಕೊಂಡವರಿಗೆ ಮಾತ್ರಾ ಕಾಮಗಾರಿ ನಡೆಸಲು ಸಾಧ್ಯ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಸಹಿಸದ ಬಿಜೆಪಿ ನಾಯಕರು ಕಾಮಗಾರಿಗೆ ಅಡ್ಡಿಪಡಿಸುವ, ಗುತ್ತಿಗೆದಾರರನ್ನು ಬೆದರಿಸುವ ಕೃತ್ಯಕ್ಕೆ ಇಳಿದಿರುವುದು ಸರಿಯಲ್ಲ. ಕಾರ್ಕಳದಲ್ಲಿ ಎಲ್ಲವೂ ನಾನು ಹೇಳಿದಂತೆ ನಡೆಯಬೇಕು ಎನ್ನುವ ಸರ್ವಾಧಿಕಾರಿ ಧೋರಣೆಯನ್ನು ಶಾಸಕರು ಬಿಟ್ಟು ಪ್ರಜಾಪ್ರಭುತ್ವಕ್ಕೆ ಗೌರವ ನೀಡಬೇಕು.

ಶಾಸಕರ ಆಣತಿಯಂತೆ ಹೇಳಿಕೆ ನೀಡುವ ಮೊದಲು ಸುರೇಶ್ ಶೆಟ್ಟಿಯವರು ಪಡುಕುಡೂರು ಮುನಿಯಾಲು ಅಭಿವೃದ್ಧಿಯ ಕುರಿತು ಕಾಳಜಿ ಹೊಂದಲಿ, ಶಾಸಕರ ಕೈಗೊಂಬೆಯಂತೆ ವರ್ತಿಸದೇ ಸ್ವಂತ ಬುದ್ದಿಯಿಂದ ಆಲೋಚಿಸಿ ಊರಿನ ಅಭಿವೃದ್ಧಿಗೆ ಕೈ ಜೋಡಿಸಲಿ, ವಿನಾಕಾರಣ ಪದೇ ಪದೇ ನಮ್ಮ ನಾಯಕರ ವಿರುದ್ದ ಅಪಪ್ರಚಾರಗಳನ್ನು ನಡೆಸುತ್ತಿರುವ ವಿಘ್ನ ಸಂತೋಷಿಗಳಿಗೆ ಪಡುಕುಡೂರಿನ ತಾಯಿ ಭದ್ರಕಾಳಿ ಸದ್ಬುದ್ದಿ ನೀಡಲಿ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ ಭಟ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ...

ರಾಯಚೂರು | ಸೂರ್ಯಕಾಂತಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8,343: ಖರೀದಿ ಕೇಂದ್ರ ಆರಂಭ; ಡಿಸಿ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು...

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ...

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು...