ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕಾಟೀನ್‌ಕಂಬ ಬಳಿ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಶಾಲಾ ಮಕ್ಕಳು ಸೇರಿ 55 ಜನರಿಗೆ ಗಾಯವಾದ ಘಟನೆ ಬುಧವಾರ ನಡೆದಿದೆ.
ಗಾಯಗೊಂಡ ಪ್ರಯಾಣಿಕರಿಗೆ ಸಂಡೂರು ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡ 11 ಜನರನ್ನು ಬಳ್ಳಾರಿಯ ವಿಮ್ಸ್‌ಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟ ಗಾಯಗಳಾಗಿ ಕೆಲವರು ಬಿಡುಗಡೆ ಆಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ..
ತಾಲ್ಲೂಕಿನ ಗಡಿಗ್ರಾಮ ಗಿರೇನಹಳ್ಳಿಯಿಂದ ಉತ್ತರ ಮಲೈ, ಕಾಟೀನ್‌ಕಂಬ ಮಾರ್ಗವಾಗಿ ಸಂಡೂರಿಗೆ ಬರುತ್ತಿದ್ದ ಬಸ್‌ನಲ್ಲಿ 25 ವಿದ್ಯಾರ್ಥಿಗಳು ಇದ್ದರು. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆಯಾದರೂ ಖಚಿತ ಮಾಹಿತಿ ತಿಳಿದು ಬಂದಿಲ್ಲ ಎಂದು ಬಸ್ ಡಿಪೊ ವ್ಯವಸ್ಥಾಪಕರು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಶಿಕ್ಷಕಿ ‘ದಲಿತೆ’ ಎಂಬ ಕಾರಣಕ್ಕೆ ಅಂಗನವಾಡಿ ಬಹಿಷ್ಕರಿಸಿದ ʼಪ್ರಬಲ ಜಾತಿʼ ಪೋಷಕರು
ಸ್ಥಳಕ್ಕೆ ಸಂಡೂರು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಸಂಕನೂರು, ತಹಶೀಲ್ದಾರ್ ಅನಿಲ್ ಕುಮಾರ್ ಜಿ., ತಾಲ್ಲೂಕು ಪಂಚಾಯಿತಿ ಇಒ ಷಡಕ್ಷರಿ, ಶಾಸಕ ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಮ್ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.