ಹಾವೇರಿ | ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ : ಸಚಿವ ಕೃಷ್ಣ ಬೈರೇಗೌಡ

Date:

“ಜಿಲ್ಲೆಯಲ್ಲಿ ಹಟ್ಟಿ, ತಾಂಡಾ ನಿವಾಸಿಗಳಿಗೆ ಶಾಶ್ವತ ಸೂರು ಒದಗಿಸುವ ನಿಟ್ಟಿನಲ್ಲಿ ತಾಂಡಾಗಳಿಗೆ ಕಂದಾಯ ಗ್ರಾಮದ ಸ್ಥಾನಮಾನ ನೀಡಲು ಸರ್ಕಾರ ನಿರ್ಧರಿಸಿದ್ದು, ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಉಳಿದುಕೊಂಡಿರುವ ಕಂದಾಯ ಗ್ರಾಮಗಳ ರಚನೆಗೆ ಅಂತಿಮ ಅಧಿಸೂಚನೆ ಸಲ್ಲಿಸಬೇಕು” ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರವರು ಹೇಳಿದರು.

- Advertisement -

ಹಾವೇರಿ ಪಟ್ಟಣದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುದುವಾರ ಆಯೋಜಿಸಿದ್ದ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ಕರ್ನಾಟಕದಲ್ಲಿ ಕಳೆದ ಹತ್ತು ವರ್ಷದಿಂದ ಕಂದಾಯ ಗ್ರಾಮ ಮಾನ್ಯತೆ ನೀಡುವ ಪ್ರಕ್ರಿಯೆ ಚಾಲನೆಯಲ್ಲಿದ್ದರೂ ಈವರೆಗೂ ಪೂರ್ಣಗೊಂಡಿಲ್ಲ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಈಗ ಸರ್ಕಾರ ಮುಂದಾಗಿದೆ. ಜಿಲ್ಲೆಯ ಅನೇಕ ಹಳ್ಳಿಗಳಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಗುಂಪುಗಳು ವಾಸಿಸುತ್ತಿವೆ. ಅವುಗಳನ್ನು ಕಾನೂನು ಬದ್ಧಗೊಳಿಸಿ ಆ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಮೂಲಕ ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಸರ್ಕಾರ ಮಹತ್ತರ ಉದ್ದೇಶವನ್ನು ಹೊಂದಿದೆ. ರಾಜ್ಯಾದಂತ್ಯ ಸುಮಾರು 3 ಸಾವಿರ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಲು ಭೂಕಂದಾಯ ಕಾಯ್ದೆಗೆ 2017 ರಲ್ಲಿ ತಿದ್ದುಪಡಿ ಮಾಡಲಾಗಿದೆ. ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಸಮುದಾಯಗಳಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ನೀಡುವ ಉದ್ದೇಶದಿಂದ ಕಾನೂನಿಗೆ ತಿದ್ದುಪಡಿ ತರಲಾಗಿದೆ. ಆದರೂ ಅದರ ಅನುಷ್ಠಾನ ಈ ವರೆಗೂ ಪೂರ್ಣಗೊಂಡಿರುವುದಿಲ್ಲ” ಎಂದರು.

ಭೂ ಸುರಕ್ಷಾ ಯೋಜನೆಗೆ ವೇಗ ನೀಡಿ: “ಭೂ ಸುರಕ್ಷಾ ಯೋಜನೆಯನ್ನು ಭೂ ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಉದ್ದೇಶವನ್ನು ಹೊಂದಿದೆ. ಈ ಯೋಜನೆಯು ತ್ವರಿತಗತಿಯಲ್ಲಿ ಸಾಗಬೇಕು. ಜಿಲ್ಲೆಯಲ್ಲಿ ಸರಾಸರಿ 10 ಸಾವಿರ ಪುಟಗಳ ಸ್ಕ್ಯಾನ್ ಹಾಗೂ ಅಪ್ಲೋಡ್ ಆಗಬೇಕು. ಇದರಿಂದ ಸಾರ್ವಜನಿಕರಿಗೆ ಆನ್ಲೈನ್ ನಲ್ಲಿಯೇ ಅವಶ್ಯಕ ವಿರುವ ದಾಖಲೆಗಳನ್ನು ಪಡೆದುಕೊಳ್ಳಬಹುದು. ಇದರಿಂದ ಸಾರ್ವಜನಿಕರು ವಿನಾಕಾರಣ ಕಚೇರಿಗೆ ಅಲೆದಾಡುವುದು ತಪ್ಪಲಿದೆ. ದಲ್ಲಾಳಿಗಳ ಹಾವಳಿಯು ತಪ್ಪಲಿದೆ. ಜನರ ದಾಖಲೆಗಳು ಬೆರಳ ತುದಿಯಲ್ಲಿ ಲಭ್ಯವಾಗುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಸುಮಾರು 52 ಲಕ್ಷಕ್ಕೂ ಹೆಚ್ಚು ಕೃಷಿ ಭೂಮಿಯ ಪ್ರಕರಣಗಳು ಇನ್ನೂ ಮೃತ ವ್ಯಕ್ತಿಗಳ ಹೆಸರಿನಲ್ಲಿವೆ ಪಿತ್ರಾರ್ಜಿತ ದಾಖಲೆಗಳನ್ನು ನವೀಕರಿಸುವ ಕಾರ್ಯಕ್ಕೆ ವೇಗಹೆಚ್ಚಿಸುವ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಅಂಗವೈಕಲ್ಯ ಮೆಟ್ಟಿ ನಿಂತ ಜಯಶ್ರೀ; ಬದುಕಿಗೊಂದು ಸ್ಫೂರ್ತಿಯ ಸೆಲೆ

ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್ ಎಫ್ ಎಲ್ ಗಾಜಿಗೌಡರ, ಹಾನಗಲ್ ಶಾಸಕರಾದ ಶ್ರೀನಿವಾಸ ಮಾನೆ, ಹಿರೇಕೆರೂರ ಶಾಸಕರಾದ ಯು ಬಿ ಬಣಕಾರ, ಶಿಗ್ಗಾಂವ ಶಾಸಕರಾದ ಯಾಸೀರಅಹ್ಮದಖಾನ್ ಪಠಾಣ. ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ, ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್, ಎಲ್ಲ ತಾಲೂಕಿನ ಎಸಿ. ತಹಸೀಲ್ದಾರರು ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...