ಕಾವೇರಿ ವಿಷಯದಲ್ಲಿ ಸರ್ಕಾರ ತಪ್ಪು ಮಾಡುವ ಮೂಲಕ ಜನರನ್ನು ಇಕ್ಕಟ್ಟಿಗೆ ಸಿಲುಕಿಸಿದೆ: ಬೊಮ್ಮಾಯಿ

Date:

  • ‘ನೀರು ಬಿಟ್ಟು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಲು ಏನಿದೆ?’
  • ‘ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ ಮುಂದೆ ಸುಳ್ಳು ಹೇಳುತ್ತಿದೆ’

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡುವ ಮೂಲಕ ರಾಜ್ಯದ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಸಿಡಬ್ಲುಎಂಎ ಆದೇಶದಂತೆ ನೀರು ಬಿಡುವುದಾದರೆ ಸುಪ್ರೀಂ ‌ಕೋರ್ಟ್‌ನಲ್ಲಿ ವಾದ ಮಾಡಲು ಏನಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.

ಮಂಗಳವಾರ ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯ ಸರ್ಕಾರ ಸೆ.12 ರ ನಂತರ ನೀರು ತಮಿಳುನಾಡಿಗೆ ಬಿಡಲು ಆಗುವುದಿಲ್ಲ ಎಂದು ಸುಪ್ರೀಂ ಕೊರ್ಟ್ ಮುಂದೆ ಅಪಿಡವಿಟ್ ಹಾಕಿದೆ‌. ಅದಕ್ಕೆ ತಾವು ಬದ್ಧರಾಗಿರಬೇಕಲ್ಲ. ಸರ್ಕಾರದ ಅಪಿಡವಿಟ್ ಅಂದರೆ ಸುಮ್ಮನೆ ಅಲ್ಲ. ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ ಮುಂದೆ ತಾನೇ ಸುಳ್ಳು ಹೇಳುತ್ತಿದೆ ಎಂದಾಯಿತು‌” ಎಂದು ಅಭಿಪ್ರಾಯಪಟ್ಟರು.

“ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಾನು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದೇನೆ ಎಂದು ಹೇಳಿದ್ದಾರೆ. ಅವರನ್ನು ಇಕ್ಕಟ್ಟಿಗೆ ಸಿಲುಕಿಸುವುದರಿಂದ ನನಗೇನು ಆಗುವುದಿಲ್ಲ. ಅದರ ಅಗತ್ಯ ನನಗಿಲ್ಲ. ಸರ್ಕಾರದ ನಡೆ ರಾಜ್ಯದ ರೈತರನ್ನು, ಕಾವೇರಿ ಮಕ್ಕಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ‌. ರಾಜ್ಯದ ಹಿತದೃಷ್ಟಿಯಿಂದ ನಾನು ಸಲಹೆ ನೀಡಿದ್ದೇನೆ. ಸರ್ಕಾರ ನಮ್ಮ ಸಲಹೆಯನ್ನು ಸ್ವೀಕರಿಸಲು ಸಿದ್ದವಿಲ್ಲ. ವಕೀಲರು ಯಾವಾಗಲೂ ನೀರು ಬಿಡುವಂತೆ ಸಲಹೆ ನೀಡುತ್ತಾರೆ. ನಾವು ಅದನ್ನು ಬದಲಾಯಿಸಿದ್ದೆವು. ನಮ್ಮ ಅವಧಿಯಲ್ಲಿ ರಾತ್ರೋರಾತ್ರಿ ನೀರು ಬಿಟ್ಟಿಲ್ಲ. ನೀವು ಸಿಡಬ್ಲುಎಂಎ ಆದೇಶ ಪಾಲನೆ ಮಾಡಿದ ಮೇಲೆ ಸುಪ್ರೀಂ ಕೋರ್ಟ್ ಮುಂದೆ ಹೇಳುವುದೇನಿದೆ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬೊಮ್ಮಾಯಿ ಸಲಹೆ ಸುಪ್ರೀಂ ಕೋರ್ಟಿನಲ್ಲಿ ಇಕ್ಕಟ್ಟಿಗೆ ಸಿಲುಕಿಸುವಂತಹದ್ದು: ಡಿಕೆ ಶಿವಕುಮಾರ್

ದಾರಿ ತಪ್ಪಿಸುವ ಕೆಲಸ

“ಈಗ ಪ್ರಧಾನಿ ಬಳಿ ಹೋಗುವುದರಲ್ಲಿ ಅರ್ಥವಿಲ್ಲ‌. 1990 ಮುಂಚೆಯೇ ಈ ವಿಚಾರ ಪ್ರಧಾನಿ ಬಳಿ ಚರ್ಚೆಯಾಗಿದೆ. ಈಗ ಅಲ್ಲಿ ಚರ್ಚೆ ಅಗತ್ಯವಿಲ್ಲ. ಸುಮ್ಮನೆ ರಾಜ್ಯದ ಜನರ ದಾರಿ ತಪ್ಪಿಸಲು ರಾಜ್ಯ ಸರ್ಕಾರ ಪ್ರಧಾನಿ ಬಳಿ ನಿಯೋಗ ತೆಗೆದುಕೊಂಡು ಹೋಗುವುದಾಗಿ ಹೇಳುತ್ತಿದೆ” ಎಂದರು.

“ನಮ್ಮ ವಕೀಲರು ತಮಿಳುನಾಡಿನ ಅಣೆಕಟ್ಟುಗಳಲ್ಲಿನ ನೀರಿನ ವಸ್ತುಸ್ಥಿತಿ, ಅವರು ಬಳಕೆ ಮಾಡಿರುವ ನೀರಿನ ಪ್ರಮಾಣವನ್ನು ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡುವ ಕೆಲಸ ಮಾಡದಿದ್ದರೆ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ‌. ರಾಜ್ಯದ ಪರ ವಕೀಲರು ಮೊದಲಿನಿಂದಲೂ ಇದ್ದಾರೆ. ನಮ್ಮ ಅವಧಿಯಲ್ಲಿಯೂ ಅವರೇ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಸೂಕ್ತ ಸಲಹೆ ಕೊಡಲು ನಾವು ಸಿದ್ದರಿದ್ದೇವೆ‌. ಅವರು ಸಲಹೆ ತೆಗೆದುಕೊಳ್ಳಲು ಸಿದ್ದರಿಲ್ಲದಿದ್ದರೆ ಏನು ಮಾಡುವುದು” ಎಂದರು.

ತಮಿಳುನಾಡು ಸಹಕರಿಸುವುದಿಲ್ಲ

ಮಾಜಿ ಪ್ರಧಾನಿ ದೇವೆಗೌಡರು ನ್ಯಾಯಾಲಯದ ಹೊರಗೆ ಈ ವಿಷಯ ಇತ್ಯರ್ಥ ಮಾಡಿಕೊಳ್ಳಬೇಕು ಎಂದು ನೀಡಿರುವ ಸಲಹೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಮಾತುಕತೆಗೆ ತಮಿಳುನಾಡು ಸಹಕಾರ ನೀಡುವುದಿಲ್ಲ. ಮೊದಲಿನಿಂದಲೂ ಅವರು ಅಸಹಕಾರ ತೋರುತ್ತಲೇ ಬಂದಿದ್ದಾರೆ. ತಮಿಳುನಾಡು ಸಂಸದರು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡುತ್ತಿದ್ದಾರೆ. ನಮ್ಮ ಸಂಸತ್ ಸದಸ್ಯರು ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಸೂಚಿಸಿದ್ದೇನೆ” ಎಂದು ಹೇಳಿದರು‌.

ಮಹಿಳಾ ಮೀಸಲಾತಿ ಕ್ರಾಂತಿಕಾರಿ ನಿರ್ಧಾರ

“ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಒಪ್ಪಿಗೆ ನೀಡಿರುವುದು ಒಂದು ಕ್ರಾಂತಿಕಾರಿ ನಿರ್ಣಯ. 2009 ರಲ್ಲಿ ಯುಪಿಎ ಅವಧಿಯಲ್ಲಿ ರಾಜ್ಯಸಭೆಯಲ್ಲಿ ಬಿಲ್ ಪಾಸ್ ಮಾಡಿತ್ತು. ಆದರೆ, ಲೋಕಸಭೆಯಲ್ಲಿ ಯುಪಿಎ ಸದಸ್ಯ ಪಕ್ಷಗಳೇ ಒಪ್ಪಿರಲಿಲ್ಲ. ಜನಸಂಖ್ಯೆಯಲ್ಲಿ ಶೇ. 50 ರಷ್ಟಿರುವ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗುತ್ತಿರುವುದು ಒಂದು ಕ್ರಾಂತಿಕಾರಕ ನಡೆ, ಕಾಂಗ್ರೆಸ್ ಇದರ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿರುವುದು ವಿಪರ್ಯಾಸ. ಕೇವಲ ಬಿಲ್ ಸಿದ್ದಪಡಿಸುವುದು ಮಾತ್ರವಲ್ಲ ಎಲ್ಲ ಪಕ್ಷಗಳನ್ನು ಒಪ್ಪಿಸಿ ಬಿಲ್ ಪಾಸ್ ಮಾಡುವುದು ಮುಖ್ಯ. ಕೇಂದ್ರ ಸರ್ಕಾರ ಈಗ ಎಲ್ಲರ ಒಪ್ಪಿಗೆ ಪಡೆದು ಕಾಯ್ದೆಯಾಗಿ ಜಾರಿಗೆ ತರುತ್ತಾರೆ ಎನ್ನುವ ವಿಶ್ವಾಸ ಇದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಾಧ್ಯಾಪಕರ ನೇಮಕಾತಿ | ಡಿಸೆಂಬರ್ ಅಂತ್ಯದೊಳಗೆ ಆದೇಶ: ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್

2021ರಲ್ಲಿ ಆರಂಭಗೊಂಡ 1,242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ವಾರದೊಳಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ...

ಬೆಳಗಾವಿ | ಗಣೇಶ ವಿಸರ್ಜನೆಗೆ 8 ಸ್ಥಳಗಳಲ್ಲಿ ವ್ಯವಸ್ಥೆ; ಬಿಗಿ ಭದ್ರತೆ

ಬೆಳಗಾವಿ ನಗರದಲ್ಲಿ ಸೆಪ್ಟೆಂಬರ್ 28ರಂದು ನಡೆಯಲ್ಲಿರುವ ಗಣೇಶ ವಿಸರ್ಜನೆಗೆ 8 ಸ್ಥಳಗಳಲ್ಲಿ...

ರಾಯಚೂರು | ಮಸ್ಕಿ ತಾಲೂಕು ಶೈಕ್ಷಣಿಕ ಅಭಿವೃದ್ಧಿಗೆ ಡಿವಿಪಿ ಒತ್ತಾಯ

ಗ್ರಾಮೀಣ ಭಾಗದಿಂದ ಪಟ್ಟಣದ ಶಾಲಾ -ಕಾಲೇಜಿಗೆ ಆಗಮಿಸುವ ವಿದಾರ್ಥಿಗಳಿಗೆ ಮೂಲಭೂತ...

ಕೊಡಗು | ಕೆಎಂಎ ಪ್ರತಿಭಾ ಪುರಸ್ಕಾರ; ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಗೌರವ

ಕೊಡವ ಮುಸ್ಲಿಂ ಅಸೋಸಿಯೇಷನ್(ಕೆಎಂಎ) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ...