ಸಿಎಸ್‌ಆರ್‌ ನಿಧಿಯಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ: ಡಿಕೆ ಶಿವಕುಮಾರ್

Date:

  • ‘ಪಂಚಾಯಿತಿ ಮಟ್ಟದಲ್ಲಿ ಮೂರು ಸರ್ಕಾರಿ ಶಾಲೆ ದತ್ತು ಪಡೆಯುವೆ’
  • ‘ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆ ದತ್ತು ಪಡೆಯಲಿ’

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಬುಧವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆ ಬೆಂಗಳೂರಿನ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಿಎಸ್‌ಆರ್‌ (ಕಾರ್ಪೋರೇಟ್‌ ಕಂಪನಿಗಳ ಸಾಮಾಜಿಕ ಜವಾಬ್ದಾರಿ ನಿಧಿ) ಅನುದಾನ ಕುರಿತು ಚರ್ಚಿಸಲಾಯಿತು.

- Advertisement -

ಸಭೆ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್‌, “ಕಾರ್ಪೋರೇಟ್‌ ಕಂಪನಿಗಳ ಸಾಮಾಜಿಕ ಜವಾಬ್ದಾರಿ ನಿಧಿಯಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

“ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಬೇಕು. ಹೀಗೊಂದು ಹೊಸ ಪರಿಕಲ್ಪನೆ ಜಾರಿಗೆ ಮುಂದಾಗಿದ್ದೇವೆ. ಈ ಹೊಸ ಪರಿಕಲ್ಪನೆಯನ್ನು ಹೇಗೆ ಜಾರಿ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ. ನಾನೂ ಕೂಡ ಮೂರು ಶಾಲೆಗಳ ಮಾಲೀಕ. ಪಂಚಾಯಿತಿ ಮಟ್ಟದಲ್ಲಿ ಮೂರು ಸರ್ಕಾರಿ ಶಾಲೆಗಳನ್ನು ನಾನು ದತ್ತು ಪಡೆಯುವೆ” ಎಂದರು.

“ಕೆಆರ್​​ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರವಾಗಿ ಪ್ರತಿಪಕ್ಷಗಳು ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿ, “ಯಾಕೆ ನೀರು ಬಿಟ್ಟಿದ್ದೀರಿ ಎಂದು ನಮ್ಮನ್ನು ಪ್ರಶ್ನಿಸಲು ನಮ್ಮ ಬಳಿ ಡ್ಯಾಂನ ಬೀಗ ಇದೆಯಾ ಎಂದು ಮರು ಪ್ರಶ್ನೆ ಮಾಡಿದರು. ಕೆಆರ್​ಎಸ್ ಬೀಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಳಿ ಇದೆ, ಕೇಂದ್ರ ಸರ್ಕಾರದ ಬಳಿ‌ ಇದೆ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

“ಸರ್ಕಾರ ನಡೆಸಬೇಕಾದರೆ ಎಲ್ಲರ ವಿಚಾರ ಗಮನದಲ್ಲಿಟ್ಟುಕೊಳ್ಳಬೇಕು. ಕಾನೂನು ಸಲಹೆಗಾರರು ಏನ್ ಹೇಳುತ್ತಾರೆ ಎಂಬುದನ್ನೂ ಸಹ ಕೇಳಬೇಕಲ್ಲ. ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಕೆ ಮಾಡಿದೆ. ತಮಿಳುನಾಡು ಸರ್ಕಾರ ಕೇಳಿದಷ್ಟು ನೀರು ನಾವು ಬಿಟ್ಟಿಲ್ಲ” ಎಂದು ತಿಳಿಸಿದರು.

“ರಾಜಕಾರಣವನ್ನು ಎಷ್ಟು ಮಾಡಬೇಕೋ ಅಷ್ಟೇ ಮಾಡಬೇಕು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೂ ಕಾನೂನು ಗೊತ್ತಿದೆ. ನೀರು ಯಾರ ನಿಯಂತ್ರಣದಲ್ಲಿ ಇದೆ? ಇದೆಲ್ಲ ಈಗ ಚರ್ಚೆ ಮಾಡಲ್ಲ. 30-40 ವರ್ಷಗಳಲ್ಲಿ ಈಗಲೇ ರಾಜ್ಯದಲ್ಲಿ ಮಳೆ‌ ಕೊರತೆ ಆಗಿರೋದು. ನೀರು ಬಿಡಬೇಡಿ ಅಂತಾ ನಮ್ಮ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ಕೋರ್ಟ್ ಕೇಳಬೇಕಲ್ಲ, ರೈತರೂ ಕೋರ್ಟ್​​ಗೆ ಅರ್ಜಿ ಹಾಕಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...

ಕೂಡಲೇ ಸೌಜನ್ಯ ಎಸ್‌ಐಟಿ ಪುನರಚಿಸಿ: ರಾಜ್ಯ ಸರ್ಕಾರಕ್ಕೆ ‘ಕೊಂದವರು ಯಾರು?’ ಆಂದೋಲನ ಬಹಿರಂಗ ಪತ್ರ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಈಗ ರಚನೆಯಾಗಿರುವ...

ವಿಜಯಪುರ | ಬೋಧಕರ ಕೊರತೆ: ಪಿಎಚ್‌ಡಿ ವಿದ್ಯಾರ್ಥಿನಿಯರಿಂದಲೇ ಪಿಜಿ ಪಾಠ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ (ಪಿಜಿ) ತರಗತಿಗಳಿಗೆ...

ಧಾಂದಲೆ ನಡೆಯುವ ಚುನಾವಣೆಗಳನ್ನು ಬಹಿಷ್ಕರಿಸಿ: ವಿಪಕ್ಷಗಳಿಗೆ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ

ದೇಶದ ವಿರೋಧ ಪಕ್ಷಗಳಿಗೆ 'ಅಕ್ರಮ/ಧಾಂದಲೆ ನಡೆಯುತ್ತಿರುವ' ಚುನಾವಣೆಗಳಲ್ಲಿ ಭಾಗವಹಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ...