ದಾವಣಗೆರೆ | ʼಸರ್ಕಾರಗಳು ಯೋಜನೆ ಘೋಷಣೆ ಮಾಡುವುದಕ್ಕೂ ಮೊದಲು ರೈತರೊಂದಿಗೆ ಚರ್ಚಿಸಬೇಕುʼ

Date:

ಕೇಂದ್ರ ಅಥವಾ ರಾಜ್ಯ ಸರ್ಕಾರವಾಗಲಿ ಯಾವುದೇ ಯೋಜನೆಗಳನ್ನು ಘೋಷಣೆ ಮಾಡುವುದಕ್ಕಿಂತ ಮೊದಲು ರೈತರೊಂದಿಗೆ ಚರ್ಚೆ ಮಾಡಬೇಕೆಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್‌ ಒತ್ತಾಯಿಸಿದ್ದಾರೆ.

- Advertisement -

ದಾವಣಗೆರೆಯಲ್ಲಿ ಸುದ್ದಿಗೋಷಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಾರ್ವಜನಿಕರಿಗೆ 29ರೂ.ಗಳಿಗೆ ಅಕ್ಕಿ ಕೊಡುವ ಯೋಜನೆಯನ್ನು ಜಾರಿಗೊಳಿಸಿದೆ. ಅದೇ ರೀತಿ ಕೇಂದ್ರ ಸರ್ಕಾರ ರೈತ ಬೆಳೆದ ಭತ್ತಕ್ಕೆ 2,180 ರೂ.ಗಳ ಬೆಂಬಲ ಬೆಲೆಯನ್ನು ಘೋಷಣೆ ಮಾಡಿದೆ. ಈ ಬೆಂಬಲ ಬೆಲೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಜಾರಿಗೊಳಿಸಿದರೆ, ಮಾತ್ರ ರೈತನ ಬದುಕ ಹಸನಾಗಿ ಉಳಿಯುವುದಕ್ಕೆ ಅವಕಾಶವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆಯನ್ನು ಮಾಡದೇ ಕೇಂದ್ರ ಸರ್ಕಾರ 29 ರೂ.ಗಳಿಗೆ ಅಕ್ಕಿ ಹಾಗೂ ರಾಜ್ಯ ಸರ್ಕಾರ ಉಚಿತ ಅಕ್ಕಿ ಘೋಷಣೆ ಮಾಡಿದರೆ ರೈತ ಯಾವ ದರಕ್ಕೆ ಭತ್ತವನ್ನು ಮಾರಬೇಕು, ಖರೀದಿದಾರರು ಯಾವ ದರಕ್ಕೆ ಖರೀದಿ ಮಾಡಬೇಕು ಎಂಬುವುದು ಗೊತ್ತಾಗದೇ ಈ ದಿನ ರೈತ ಬೆಳೆದ ಭತ್ತಕ್ಕೆ ಮಾರುಕಟ್ಟೆಯಲ್ಲಿ ಖರೀದಿದಾರರು ಇಲ್ಲದ ಪರಿಸ್ಥಿತಿ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆಯನ್ನು ಮಾಡಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು ಪ್ರತಿಭಟನೆಯನ್ನು ಮಾಡುತ್ತಿದ್ದಾರೆ ಹಾಗೂ ಕಳೆದ ಬಾರಿ  ಕನಿಷ್ಠ ಬೆಂಬಲ ಬೆಲೆ ಕಾಯ್ದೆಯನ್ನು ಮಾಡುತ್ತೇವೆಂದು ಎಂದು ಹೇಳಿದ ಕೇಂದ್ರ ಸರ್ಕಾರ ಪತ್ರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆಯನ್ನು ಮಾಡಬೇಕೆಂದು ಒತ್ತಾಯಿಸಿದರು. ರಾಜ್ಯ ಸರ್ಕಾರವು ಫಾರಂ 52, 53, 57ರಲ್ಲಿ ಹಾಕಿರುವ ಬಗರ್ ಹುಕುಂ ಅರ್ಜಿಗಳನ್ನು ಈ ಕೂಡಲೇ ಇತ್ಯಾರ್ಥಗೊಳಿಸಿ ಹಕ್ಕು ಪತ್ರಗಳನ್ನು ನೀಡಬೇಕೆಂದರು.

ಜಗಳೂರು ತಾಲೂಕಿನಲ್ಲಿ ತೀವ್ರವಾದ ಕುಡಿಯುವ ನೀರಿನ ಸಮಸ್ಯೆ ಇದ್ದು, ಸುಮಾರು 80ಕ್ಕಿಂತ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ದನಕರುಗಳಿಗೆ ಕುಡಿ ಕುಡಿಯಲು ನೀರು, ಮೇವಿನ ಅಭಾವವಿರುವುದರಿಂದ ಜಿಲ್ಲಾಡಳಿತ ಬೋರ್- ವೆಲ್ ಗಳನ್ನು ಕೊರೆದು ಕುಡಿಯಲು ನೀರು ಹಾಗೂ ದನಕರುಗಳಿಗೆ ಗೋಶಾಲೆಗಳನ್ನು ತೆರೆಯಬೇಕೆಂದರು.

ರಾಜ್ಯ ಸರ್ಕಾರ ಅಕ್ರಮ-ಸಕ್ರಮ ವಿದ್ಯುತ್ ಯೋಜನೆಯನ್ನು ಮುಂದುವರೆಸಬೇಕು, ನಿವೇಶನ ರಹಿತ ಗ್ರಾಮಗಳಲ್ಲಿ ಇರುವ ಕುಟುಂಬಗಳಿಗೆ ಸರ್ಕಾರದ ಜಮೀನು ಲಭ್ಯವಿದ್ದರೂ ಸಹ ನಿವೇಶನಗಳನ್ನು ಮಾಡಿ ನಿವೇಶನ ನೀಡಿಲ್ಲ. ಸಾವಿರಾರು ಕುಟುಂಬಗಳು ನಿವೇಶನವಿಲ್ಲದೆ ಅತಂತ್ರ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಇಂತಹ ಕುಟುಂಬಗಳಿಗೆ ಜಿಲ್ಲಾ ಪಂಚಾಯಿತಿ ನಿವೇಶನಗಳನ್ನು ನೀಡುವುದು ಸೇರಿದಂತೆ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿದರು.

ಫೆ. 19ರಂದು ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಿಂದ ಬೃಹತ್ ಪಾದಯಾತ್ರೆಯ ಕೈಗೊಂಡು, ಫೆ.22ರಂದು ಜಿಲ್ಲಾಧಿಕಾರಿಗಳ ಕಛೇರಿ ತಲುಪಿ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೈದಾಳೆ ರವಿಕುಮಾ‌ರ್, ಯಲೋದಹಳ್ಳಿ ರವಿಕುಮಾರ್, ಬಾಲಾಜಿ, ಅಸ್ತಾಪನಹಳ್ಳಿ ಗಂಡುಗಲಿ, ಪೂಜಾರ್ ಅಂಜಿನಪ್ಪ, ಬಸಣ್ಣ, ಕುಮಾರ್, ನಾಗರಾಜ್, ಕೃಷ್ಣಮೂರ್ತಿ, ಹನುಮಂತ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...