ಕೋಲಾರ | ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು : ಎಂ.ಕೆ.ರಾಘವೇಂದ್ರ

Date:

ಕೋಲಾರ: ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿತು.

- Advertisement -

ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ, ರಾಜ್ಯ ಸರ್ಕಾರವು ಎಸ್.ಎಸ್.ಎಲ್.ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ರಾಜ್ಯಪಾಲರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿ ದ್ದಾರೆ. ಹೀಗಾಗಿ ಅವರು ಕರ್ನಾಟಕದಲ್ಲಿ ಒಂದೇ ಒಂದು ನಿಮಿಷವೂ ರಾಜ್ಯಪಾಲರಾಗಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ರಾಜ್ಯಪಾಲರು ರಾಜ್ಯದ ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಅತ್ಯಂತ ಆಕ್ಷೇಪಾರ್ಹವಾದ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರವನ್ನು ಕರ್ನಾಟಕದ ಜನತೆ ಆಯ್ಕೆ ಮಾಡಿದ್ದಾರೆ. ನಾಡಿನ ಜನರ ಬೇಕು, ಬೇಡಗಳನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ಹೀಗಿರುವಾಗ ಸರ್ಕಾರದ ಮುಖ್ಯಸ್ಥರಾಗಿ ಸರ್ಕಾರದ ನಾಡಪರ ಕಾಳಜಿಯ ನಿರ್ಧಾರಗಳನ್ನು ಬೆಂಬಲಿಸುವುದು ಅವರ ಕರ್ತವ್ಯವಾಗಿರುತ್ತದೆ. ಆದರೆ ಅವರು ಹಿಂದಿ ಮಾಫಿಯಾ ಪರವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ತೋರುತ್ತದೆ. ಹೀಗಾಗಿ ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿದರು.

“ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ” ಎಂಬ ಅನಾಮಧೇಯ ಸಂಘಟನೆಯ ಮನವಿಗೆ ತುರ್ತಾಗಿ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದೇ ಒಂದು ದೊಡ್ಡ ದುಷ್ಟ ಹುನ್ನಾರವಾಗಿದೆ. ಕರ್ನಾಟಕವನ್ನು ವಲಸೆ ಬರುತ್ತಿರುವ ಹಿಂದಿಭಾಷಿಕರಿಗಾಗಿ ಸುರಕ್ಷಿತ ಸ್ವರ್ಗವನ್ನಾಗಿಸುವ ದೂರಗಾಮಿ ಉದ್ದೇಶಗಳು ಹಿಂದಿ ಮಾಫಿಯಾಗೆ ಇದೆ. ಅದರ ಭಾಗವಾಗಿಯೇ ರಾಜ್ಯಪಾಲರು ಈ ಪತ್ರ ಬರೆದಿದ್ದಾರೆ ಎಂಬುದು ಸ್ಪಷ್ಟ. ಕರ್ನಾಟಕದ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ರಾಜ್ಯ ಸರ್ಕಾರವನ್ನು ಇದಕ್ಕಾಗಿಯೇ ನಾವು ಆಯ್ಕೆ ಮಾಡಿ ಕಳಿಸಿದ್ದೇವೆ. ಇದನ್ನು ಪ್ರಶ್ನಿಸಲು ರಾಜ್ಯಪಾಲರು ಯಾರು? ಅವರಿಗೆ ಸಂವಿಧಾನ ಈ ಅವಕಾಶ ನೀಡಿಲ್ಲ. ಹಿಂದಿ ಮಾಫಿಯಾ ಎಷ್ಟು ಬಲಶಾಲಿಯಾಗಿದೆ ಎಂಬುದು ಇದರಿಂದ ಗೊತ್ತಾಗುತ್ತಿದೆ. ಹುತ್ತದ ಒಳಗೆ ಇನ್ನೆಷ್ಟು ಹಾವುಗಳು ಇವೆಯೋ ಗೊತ್ತಿಲ್ಲ. ಎಲ್ಲವೂ ಹೊರಬರಲಿ ಎಂದು ತಮ್ಮ ಅಸಮಧಾನವನ್ನು ಹೊರ ಹಾಕಿದರು.

ರಾಜ್ಯಪಾಲರ ಈ ಪತ್ರವನ್ನು ರಾಜ್ಯ ಸರ್ಕಾರ ಕಸದ ಬುಟ್ಟಿಗೆ ಎಸೆಯಬೇಕು. ಕನ್ನಡಿಗರ ಹಿತದೃಷ್ಟಿಗೆ ವಿರುದ್ಧವಾಗಿ ಯಾರೇ ಏನೇ ಹೇಳಿದರೂ ಅದನ್ನು ರಾಜ್ಯ ಸರ್ಕಾರ ಪರಿಗಣಿಸಬೇಕಿಲ್ಲ. ನಾವು ಹಿಂದೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಹೋರಾಡಿದ್ದೆವು. ಈಗ ಹಿಂದಿ ಸಾಮ್ರಾಜ್ಯಶಾಹಿ ನಮ್ಮನ್ನು ಆಳಲು ಯತ್ನಿಸುತ್ತಿದೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನಮ್ಮ ಪ್ರಾಣ ಹೋದರೂ ನಮ್ಮ ನೆಲದ ಅಸ್ಮಿತೆಯನ್ನು ಉಳಿಸಿಕೊಳ್ಳುತ್ತೇವೆ.
ತೃತೀಯ ಭಾಷೆ ಗ್ರೇಡಿಂಗ್ ವ್ಯವಸ್ಥೆಯ ನಿರ್ಧಾರ ಸರ್ಕಾರ ಕೈಗೊಂಡಿದೆ. ಇದನ್ನು ಬದಲಿಸುವ ಪ್ರಯತ್ನ ಯಾರೇ ಮಾಡಿದರೂ ರಕ್ತಕ್ರಾಂತಿಯಾಗುತ್ತದೆ. ರಾಜ್ಯಪಾಲ ಗೆಹ್ಲೋಟ್ ಹಿಂದಿ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಲ್ಲೆಲ್ಲಾ ತೃತೀಯ ಭಾಷೆಯಾಗಿ ಕನ್ನಡ ಕಲಿಸಲು ತಾಕೀತು ಮಾಡಲಿ. ಅಷ್ಟೇಕೆ ಅವರ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಈಗಲೂ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ. ಮೂರನೇ ಭಾಷೆಯನ್ನಾಗಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಲಿನ ಸರ್ಕಾರದ ಮೇಲೆ ಅವರು ಒತ್ತಡ ಹೇರಲಿ. ಅದು ಸಾಧ್ಯವಿಲ್ಲದಿದ್ದರೆ ಕನ್ನಡಿಗರ ಮೇಲೆ ಯಾಕೆ ಹಿಂದಿ ಹೇರಲು ಯತ್ನಿಸುತ್ತಾರೆ. ಇಂಥ ನಾಡದ್ರೋಹಿ ರಾಜ್ಯಪಾಲ ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲ. ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಲಿ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ

ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ವಿ.ಮುನಿರಾಜು, ಮಹಿಳಾ ಅಧ್ಯಕ್ಷೆ ಲತಾಬಾಯಿ ಮಾಡಿಕ್, ತಾಲೂಕು ಅಧ್ಯಕ್ಷ ಕೋಲಾರ ಶಶಿಕುಮಾರ್, ಬಂಗಾರಪೇಟೆ ರಾಮ ಪ್ರಸಾದ್, ಮುಳಬಾಗಿಲು ಹುಸೇನ್, ಕೆಜಿಎಫ್ ನಂಜುಂಡಪ್ಪ, ರೈತ ಘಟಕದ ಅಧ್ಯಕ್ಷ ಡಿ.ವಿ.ಮಂಜುನಾಥ್ ಗೌಡ, ಜಿಲ್ಲಾಧ್ಯಕ್ಷ ಶಂಕರರೆಡ್ಡಿ, ಪದಾಧಿಕಾರಿಗಳಾದ ಗಣೇಶ್, ಸಂತೋಶ್, ಯಾನಾದಹಳ್ಳಿ ಮಂಜುನಾಥ್, ಭಾಗ್ಯಲಕ್ಷ್ಮಿ, ಭಾಗ್ಯ, ನೇತ್ರ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...