ಚಿಕ್ಕಬಳ್ಳಾಪುರ | ಸರಕಾರಿ ನೌಕರರು ಸಾರ್ವಜನಿಕರ ವಿಶ್ವಾಸ ಗಳಿಸಿ; ಸಚಿವ ಎಂ.ಸಿ.ಸುಧಾಕರ್‌ ಸಲಹೆ

Date:

Advertisements

ಸರ್ಕಾರಿ ನೌಕರರು ಸಾರ್ವಜನಿಕರನ್ನು ಪದೇ ಪದೇ ಕಚೇರಿಗಳಿಗೆ ಅಲೆಯುವಂತೆ ಮಾಡಬಾರದು ಮತ್ತು ಅನವಶ್ಯಕವಾಗಿ ಕಿರುಕುಳ ಕೊಡದೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸರ್ಕಾರಿ ಕಚೇರಿಗಳ ಮೇಲೆ ಸಾರ್ವಜನಿಕರಿಗೆ ವಿಶ್ವಾಸ ಹೆಚ್ಚಾಗುವಂತೆ ನಡೆದುಕೊಂಡು ಜನರ ವಿಶ್ವಾಸವನ್ನು ಗಳಿಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ಹೇಳಿದರು.

ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಮತ್ತು ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ “ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ(2023) ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಉತ್ತಮವಾಗಿ ಮತ್ತು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸುವ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಮೇಲೆ ವೈಯಕ್ತಿಕ ದ್ವೇಷ ಹಾಗೂ ರಾಜಕೀಯ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಅವರನ್ನು ಬ್ಲಾಕ್‌ಮೇಲ್ ಮಾಡಿ ಅವರ ನೈತಿಕ ಸ್ಥೈರ್ಯ ಕುಗ್ಗಿಸುವುದು ಸರಿಯಲ್ಲ ಎಂದರು.

Advertisements

ಸಾರ್ವಜನಿಕರೂ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಳ್ಳುವ ಅಗತ್ಯವಿದ್ದು, ಅಧಿಕಾರಿಗಳು ಮತ್ತು ಸರ್ಕಾರಿ ನೌಕರರನ್ನು ಬ್ಲಾಕ್ ಮೇಲ್ ಮಾಡುವುದು, ಪ್ರಕರಣ ದಾಖಲಿಸುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದನ್ನು ಮಾಡುವ ಮೂಲಕ ಅವರ ನೈತಿಕ ಸ್ಥೈರ್ಯವನ್ನು ಕುಗ್ಗಿಸಬಾರದು ಎಂದು ಕರೆ ನೀಡಿದರು.

ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸನ್ನು ಜಾರಿ ಮಾಡಿ ವೇತನ ಪರಿಷ್ಕರಿಸಿ ನುಡಿದಂತೆ ನಡೆದುಕೊಂಡಿದೆ. ಬಜೆಟ್ ನಲ್ಲಿ ಸುಮಾರು 19ಸಾವಿರ ಕೋಟಿ ರೂಪಾಯಿಗಳಷ್ಟು ಹಣ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ವೇತನಕ್ಕಾಗಿಯೇ ವೆಚ್ಚವಾಗುತ್ತಿದೆ. ಅಧಿಕಾರಿಗಳು ಮತ್ತು ನೌಕರರು ಜನರ ಕೆಲಸಗಳನ್ನು ನಿಗದಿತ ಕಾಲಮಿತಿಯೊಳಗೆ ಮಾಡಿಕೊಟ್ಟು ತಮ್ಮ ಕರ್ತವ್ಯ, ಜವಾಬ್ದಾರಿಗಳನ್ನು ಯಾವುದೇ ಇತರೆ ನಕಾರಾತ್ಮಕ ನಿರೀಕ್ಷೆಗಳಿಲ್ಲದೆ ಕರ್ತವ್ಯ ನಿರ್ವಹಿಸಬೇಕು. ಆ ಮೂಲಕ ಪರಿಷ್ಕೃತ ವೇತನ ಶ್ರೇಣಿ ಜಾರಿಗೊಳಿಸಿದ ಸರ್ಕಾರಕ್ಕೂ ಒಳ್ಳೆಯ ಹೆಸರು ತಂದುಕೊಡಬೇಕು ಎಂದರು.

ಆರೋಗ್ಯ ಸಂಜೀವಿನಿ ಜಾರಿಗೆ ಬದ್ದ :
ಸರ್ಕಾರಿ ನೌಕರರ ಮಹತ್ವಾಕಾಂಕ್ಷಿ ಯೋಜನೆಯಾದ ನಗದು ರಹಿತ ಆರೋಗ್ಯ ಸೇವೆ ಪಡೆಯುವ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೆ ತರುವ ಸಂಬಂಧ ಸರ್ಕಾರ ಕ್ರಮವಹಿಸಿದ್ದು, ಶೀಘ್ರದಲ್ಲೇ ಈ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ದಕ್ಷತೆ ಮತ್ತು ಸಮಾಜಮುಖಿ ಸೇವೆಗಳನ್ನು ಪರಿಗಣಿಸಿ ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುತ್ತಿರುವುದು ಹರ್ಷದಾಯಕವಾದ ವಿಚಾರ. ಸರ್ಕಾರಿ ನೌಕರರಿಗೆ ಬಹಳ ಉಪಯೋಗ ಆಗಲಿರುವ ಆರೋಗ್ಯ ಸಂಜೀವಿನಿ ಯೋಜನೆಯನ್ನು ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಆದಷ್ಟು ಶೀಘ್ರವಾಗಿ ಜಾರಿಗೆ ತರಬೇಕು ಎಂದು ಸಚಿವರ ಮುಖಾಂತರ ಸರ್ಕಾರಕ್ಕೆ ಮನವಿ ಮಾಡಿದರು.

ಇದೇ ವೇಳೆ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿರುವ ಕಂದಾಯ ಇಲಾಖೆಯ ಧಪೇದಾರ್ ಸುಬ್ರಮಣಿ ಅವರಿಗೆ ಅಭಿನಂದನೆ ತಿಳಿಸಿದರು.

ಪ್ರಶಸ್ತಿ ಪುರಸ್ಕೃತರ ವಿವರ :
ಕಾರ್ಯಕ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿದ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕೆ ಮಾಧವಿ, ಕಾರ್ಯ ಪಾಲಕ ಅಭಿಯಂತರ ಎಂ.ಕೆ ನಾಗರಾಜು, ಮುಖ್ಯ ಪಶು ವೈದ್ಯಾಧಿಕಾರಿ ಡಾ.ರವಿಚಂದ್ರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅಂಜಿನಪ್ಪ, ಆನೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕಾತ್ಯಾಯಿನಿ, ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್ ಮಂಜುನಾಥ್, ಪೆದ್ದೂರು ಗ್ರಾಮ ಆಡಳಿತ ಅಧಿಕಾರಿ ಎಸ್ ರಮೇಶ್, ನಾಯನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಯೋಗಶಾಲ ತಂತ್ರಜ್ಞಾನ ಅಧಿಕಾರಿ ಸುರೇಶ್, ಜಿಲ್ಲಾ ಪಂಚಾಯತ್ ಡಿ ದರ್ಜೆ ನೌಕರ ನಾರಾಯಣಸ್ವಾಮಿ ಅವರಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ‘ಸಂವಿಧಾನವೇ ಸಾರ್ವಭೌಮ’ ಎನ್ನುವ ಸತ್ಯ ಮರೆತರೇ ಧನಕರ್?

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಲ್ಲಾ ಪಂಚಾಯತ್ ಉಪಕಾರ್ಯಕದರ್ಶಿ ಅತಿಕ್ ಪಾಷ, ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ. ವೆಂಕಟೇಶ್ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಖಜಾಂಚಿ ಅರುಣ್ ಕುಮಾರ್, ಸಂಘದ ಜಿಲ್ಲಾ ರಾಜ್ಯ ಪರಿಷತ್ ಸದಸ್ಯ ವಿ. ಅಮರ್, ರಾಜ್ಯ ಕಾರ್ಯದರ್ಶಿ ಪಿ.ಆರ್.ಸುನಿಲ್, ತಾಲ್ಲೂಕು ಅಧ್ಯಕ್ಷರಾದ ಸುಬ್ಬಾರೆಡ್ಡಿ, ಅಶೋಕ್, ಮಂಜುನಾಥ್, ಹನುಮಂತರೆಡ್ಡಿ, ಕೆ.ವಿ.ನಾರಾಯಣಸ್ವಾಮಿ, ಸಂಘದ ಸದಸ್ಯರು, ಸರ್ಕಾರಿ ನೌಕರರು ಉಪಸ್ಥಿತರಿದ್ದರು.

WhatsApp Image 2024 08 09 at 11.58.31 de404b09
+ posts

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.

ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ವಿಜಯ್‌ ಕುಮಾರ್ ಗಜ್ಜರಹಳ್ಳಿ
ವಿಜಯ್‌ ಕುಮಾರ್ ಗಜ್ಜರಹಳ್ಳಿ
ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X