ಹಲವು ಮಂದಿ ಸರಕಾರಿ ನೌಕರರು ಇದುವರೆಗೆ ಆಸ್ತಿ ಘೋಷಣೆ ಮಾಡಿಕೊಂಡಿಲ್ಲ. ಪ್ರತಿಯೊಬ್ಬ ಸರಕಾರಿ ನೌಕರರು ತಮ್ಮ ಆಸ್ತಿ ಘೋಷಣೆ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ರೂಪಿಸಲಾಗುವುದು ಎಂದು ಕೆ.ಆರ್.ಎಸ್ ಪಕ್ಷದ ಜಿಲ್ಲಾಧ್ಯಕ್ಷ ಶಿವ ರೆಡ್ಡಿ ಹೇಳಿದರು.
ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನ ಸೌಧ ಸರಕಾರಿ ನೌಕರರ ಸಂಘದ ನೌಕರರು ಆಸ್ತಿ ಘೋಷಣೆ ಮಾಡಿಕೊಂಡಿಲ್ಲ. ಸರಕಾರಿ ನೌಕರರು ನೇಮಕಾತಿ ಸಂದರ್ಭದಲ್ಲಿ ಈ ಷರತ್ತನ್ನು ಒಪ್ಪಿಯೇ ಬಂದಿರುತ್ತಾರೆ. ಅದರಂತೆ ತಮ್ಮ ಆಸ್ತಿ ಘೋಷಣೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಸರಕಾರಿ ನೌಕರರು ಆಸ್ತಿ ಘೋಷಣೆ ಮಾಡಿಕೊಳ್ಳದಿದ್ದರೆ, ಅಂತವರನ್ನು ಭ್ರಷ್ಟರೆಂದೇ ಕರೆಯುತ್ತೇವೆ ಎಂದು ಕಿಡಿಕಾರಿದರು.
ಕೋರ್ಟ್ ನ್ಯಾಯಮೂರ್ತಿಗಳು, ಜಿಲ್ಲಾಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಸೇರಿದಂತೆ ಎಲ್ಲಾ ಸರಕಾರಿ ನೌಕರರು ಆಸ್ತಿ ಘೋಷಣೆ ಮಾಡಿಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ : ಚಿಕ್ಕಬಳ್ಳಾಪುರ | 58% ಕೃಷಿಸಾಲ ಕಡಿತ, ಕಿರುಸಾಲಗಾರರಿಂದ ಕಿರುಕುಳ; ಜ.29ರಂದು ಬೆಂಗಳೂರಿನಲ್ಲಿ ಪ್ರತಿಭಟನೆ
ಸುದ್ದಿಗೋಷ್ಠಿಯಲ್ಲಿ ಕೆ.ಆರ್.ಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
