ಅಧಿವೇಶನ | ಸಭಾಧ್ಯಕ್ಷರ ವಿರುದ್ಧ ಪ್ರತಿಭಟನೆ; ಎಚ್‌ಡಿಕೆ, ಬೊಮ್ಮಾಯಿ ಪೊಲೀಸರ ವಶಕ್ಕೆ

Date:

  • ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ ಸದಸ್ಯರ ಧರಣಿ
  • ಬಿಜೆಪಿ ನಾಯಕರ ಪ್ರತಿಭಟನೆಗೆ ಕುಮಾರಸ್ವಾಮಿ ಸಾಥ್

ರಾಜ್ಯ ಸರ್ಕಾರ ಸರ್ವಾಧಿಕಾರಿ ರೀತಿ ವರ್ತಿಸುತ್ತಿದ್ದು, ಸ್ಪೀಕರ್ ಕುರ್ಚಿಯನ್ನೂ ದುರ್ಬಳಕೆ ಮಾಡಿಕೊಂಡು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದೆ. ಇದೊಂದು ಕರಾಳ ದಿನವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ವಿಧಾನಸಭೆಯಲ್ಲಿ ಧರಣಿ ನಿರತ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಸ್ಪೀಕರ್ ಕಚೇರಿ ಮತ್ತು ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಬಿಜೆಪಿ, ಜೆಡಿಎಸ್ ಸದಸ್ಯರು ಬುಧವಾರ ಧರಣಿ ನಡೆಸಿದರು. ಪೊಲೀಸರು ಧರಣಿ ನಿರತರನ್ನು ವಶಕ್ಕೆ ಪಡೆದರು.‌ ಶಾಸಕರ ಅಮಾನತು ಖಂಡಿಸಿ ಬಿಜೆಪಿ ನಾಯಕರ ಪ್ರತಿಭಟನೆಗೆ ಕುಮಾರಸ್ವಾಮಿ ಸಾಥ್ ನೀಡಿದ್ದರು. ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದರು.

ಧರಣಿ ವೇಳೆ ಮಾತನಾಡಿದ ಬೊಮ್ಮಾಯಿ, “ಜುಲೈ 17, 18 ರಂದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ರಾಜ್ಯದ ಐಎಎಸ್ ಅಧಿಕಾರಿಗಳನ್ನು ಗುಮಾಸ್ತರನ್ನಾಗಿ ಮಾಡಿ ಪ್ರೊಟೋಕಾಲ್ ಇಲ್ಲದವರಿಗೂ ಪಿಎ ಥರಾ ಕೆಲಸ ಮಾಡುವಂತೆ ಮಾಡಿದ್ದಾರೆ. ಯಾರು ರಾಜ್ಯದ ಗೆಸ್ಟ್ ಅಂತ ಇರುತ್ತಾರೋ ಅವರಿಗೆ ಗೌರವ ಸಲ್ಲಿಸಲು ಪ್ರೊಟೋಕಾಲ್ ಅಧಿಕಾರಿಗಳು ಇದ್ದಾರೆ. ಅವರ ಬದಲು ಹಿರಿಯ ಐಎಎಸ್ ಅಧಿಕಾರಿಗಳಿಗೆ ರಾಜಕಾರಣಿಗಳನ್ನು ಬಾಗಿಲು ಕಾಯಲು ಹಚ್ಚಿದ್ದಾರೆ” ಎಂದು ದೂರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಬೊಮ್ಮಾಯಿ

“ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಜಾಪ್ರಭುತ್ವದ ಕಗ್ಗೊಲೆ ಆಗಿದೆ. ಸ್ಪೀಕರ್ ಸ್ಥಾನ ದುರುಪಯೋಗ ಆಗಿದೆ. ಸ್ಪೀಕರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿದ್ದಾರೆ. ನಾವು ಪ್ರತಿಭಟನೆ ಮಾಡುತ್ತಿರುವ ಸಂದರ್ಭದಲ್ಲಿ ನಮ್ಮ ಸದಸ್ಯರಿಗೆ ಊಟಕ್ಕೆ ಬಿಡದೆ ಸದನ ನಡೆಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹಿಟ್ಲರ್ ಶಾಹಿ ಆಡಳಿತ ನಡೆಸಿದೆ. ಸ್ಪೀಕರ್ ಕಾಂಗ್ರೆಸ್‌ನವರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ಸ್ಪೀಕರ್ ಕುರ್ಚಿಗೆ ಅವಮಾನವಾಗುವಂತೆ ನಡೆದುಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಅಧಿವೇಶನದಲ್ಲಿ ಅಸಭ್ಯ ವರ್ತನೆ : 10 ಬಿಜೆಪಿ ಶಾಸಕರು ಅಮಾನತು

“ಈ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ.‌ಶಿವಕುಮಾರ್ ಪೇಪರ್ ಹರಿದು ಹಾಕಿದ ಉದಾಹರಣೆ ಇದೆ. ಒಬ್ಬ ಸದಸ್ಯರು ಸ್ಪೀಕರ್ ಮುಂದಿನ ಮೈಕ್ ಕಿತ್ತು ಹಾಕಿದ ಉದಾಹರಣೆ ಇದೆ. ಸಿದ್ದರಾಮಯ್ಯ ಸದನದ ಬಾಗಿಲು ಒದ್ದು ಹೋಗಿರುವ ನಿದರ್ಶನ ಇದೆ. ಇವರು ಪ್ರತಿಪಕ್ಷದ ಹಕ್ಕನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಇದರ ವಿರುದ್ದ ನಾವು ಸದನದ ಹೊರಗೂ ಹೋರಾಟ ಮಾಡಿ ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ” ಎಂದರು.

ಇದೇ ವೇಳೆ ಉಪ ಸಭಾಧ್ಯಕ್ಷರಿಗೆ ಬಿಜೆಪಿ ಅವಮಾನ ಮಾಡಿದೆ ಎಂಬ ಕಾಂಗ್ರೆಸ್‌ನವರ ಆರೋಪದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕಾಂಗ್ರೆಸ್‌ನವರು ಉಪ ಸಭಾಧ್ಯಕ್ಷರಿಗೆ ಅವಮಾನ ಮಾಡಿದ್ದಾರೆ.‌ ಸ್ಪೀಕರ್ ಸದನದ ಪರಿಸ್ಥಿತಿಯನ್ನು ನಿಭಾಯಿಸದೇ ಎದ್ದು ಹೋಗಿದ್ದಾರೆ. ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಯವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅವರನ್ನು ಉಪಸಭಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಕಾಂಗ್ರೆಸ್‌ನವರೇ ಅವರಿಗೆ ಅವಮಾನ ಮಾಡಿದ್ದಾರೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಜನರ ಬಳಿ ಈಗ ಹೋಗಿ ಪ್ರಯೋಜನ ಇಲ್ಲ. ಏನಿದ್ದರೂ ಐದು ವರ್ಷಗಳ ನಂತರ ಆಯಿತು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಒಳ ಮೀಸಲಾತಿ ಅನುಷ್ಠಾನ ಮಾಡದೆ ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ : ಮಂಜುನಾಥ್ ಕುಂದುವಾಡ

ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಜಾರಿ ಅಧಿಕಾರವಿದ್ದು , ಈ...

ಮಧುಗಿರಿ | ಕಾರುಗಳ ನಡುವೆ ಅಪಘಾತ : ಐವರು ಸಾವು

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಐದು ಜನರು ಮೃತಪಟ್ಟಿರುವ ಘಟನೆ...

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಮೊಂತಿ ಫೆಸ್ಟ್ ಆಚರಣೆ

ಜಿಲ್ಲಾದ್ಯಂತ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್ ಅನ್ನು ಕ್ರೆಸ್ತರು ಭಾನುವಾರ ಸಂಭ್ರಮದಿಂದ...