ರಾಯಚೂರು | ಬರ ಪರಿಹಾರ ವಿಚಾರದಲ್ಲಿ ರೈತರಿಗೆ ಮಲತಾಯಿ ಧೋರಣೆ: ಎಐಕೆಕೆಎಸ್

Date:

ರಾಜ್ಯ ಸರಕಾರ ಬರಗಾಲ ಘೋಷಿಸಿ ಹಣ ಬಿಡುಗಡೆ ಮಾಡಿದರೂ ರೈತರ ಖಾತೆಗೆ ಹಣ ಜಮೆಯಾಗದ ಪರಿಣಾಮ ರೈತರು ಕಂಗಾಲಾಗಿದ್ದಾರೆ. ರೈತರ ಬಗ್ಗೆ ಸರಕಾರ ಮಲತಾಯಿ ಧೋರಣೆ ತಾಳುತ್ತಿದೆ. ಶೀಘ್ರವೇ ಬರಗಾಲ ಪರಿಹಾರ ಧನ ನೀಡಬೇಕೆಂದು ಎಐಕೆಕೆಎಸ್ ಒತ್ತಾಯಿಸಿದೆ.

- Advertisement -

ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕಮರಿ ಹೋದ ಬೆಳೆಗಳನ್ನು ಪ್ರದರ್ಶಿಸಿದ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜಿಲ್ಲೆಯ ದೇವದುರ್ಗ, ಮಾನ್ವಿ, ಸಿಂಧನೂರು, ಮಸ್ಕಿ, ಸಿರವಾರ, ಲಿಂಗಸುಗೂರು ಮತ್ತು ರಾಯಚೂರು ತಾಲೂಕುಗಳಲ್ಲಿ ಸಕಾಲಕ್ಕೆ ಮುಂಗಾರು ಮತ್ತು ಹಿಂಗಾರು ಮಳೆಯಾಗದ ಕಾರಣ ರೈತರು ತಮ್ಮ ಜಮೀನುಗಳಲ್ಲಿ ಬಿತ್ತನೆ ಮಾಡಿದ ಬೆಳೆಗಳು ಬಿಸಿಲಿಗೆ ಕಮರಿ ಹೋಗುತ್ತಿವೆ. ಇದರಿಂದ ಸರಕಾರಿ ಮತ್ತು ಸಹಕಾರಿ ಬ್ಯಾಂಕ್‍ಗಳಲ್ಲಿ ಸಾಲ ಮಾಡಿದ ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗುವ ಪರಿಸ್ಥತಿ ಬಂದೊದಗಿದೆ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.

“ಸಾಲ ವಸೂಲಿಗೆ ಬ್ಯಾಂಕ್ ಅಧಿಕಾರಿಗಳು ರೈತರ ಮನೆ ಮನೆಗೆ ಅಲೆಯುತ್ತಿದ್ದಾರೆ. ಮೊದಲೇ ಬರಗಾಲದಿಂದ ಕಂಗಾಲಾದ ರೈತ ಸಾಲ ತೀರಿಸಲು ಅಸಾಧ್ಯವಿದೆ. ಖಾಸಗಿ ಮತ್ತು ಬ್ಯಾಂಕಿನವರು ಸಾಲ ಮರು ಪಾವತಿಸದಿದ್ದರೆ ಮನಬಂದಂತೆ ಬಡ್ಡಿ ವಸೂಲಿ ಮಾಡುತ್ತಿದ್ದಾರೆ. ಮಳೆ ಕೊರತೆಯಿಂದ ಬೆಳೆಗಳು ಸಂಪೂರ್ಣ ನಷ್ಟವಾದರೂ ಕೇಂದ್ರ ಸರಕಾರ ಬರಗಾಲ ಘೋಷಿಸದೇ ಇರುವುದು ರೈತರಿಗೆ ಮಾಡಿರುವ ದ್ರೋಹವಾಗಿದೆ. ಕೂಡಲೇ ಕೇಂದ್ರ ಸರಕಾರ ಬರಗಾಲ ಘೋಷಿಸಿ ಪರಿಹಾರ ಒದಗಿಸಬೇಕೆಂದು” ಆಗ್ರಹಿಸಿದರು.

ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ಹಣ ಬಿಡುಗಡೆ ಮಾಡಬೇಕು. ಮಳೆ ಅಭಾವದಿಂದಾಗಿ ತೊಗರಿ, ಶೇಂಗಾ, ಕಬ್ಬು ಹಾಗೂ ಇನ್ನಿತರ ಬೆಳೆ ಬೆಳೆದ ರೈತರು ನೀರಿಲ್ಲದೆ ಪರದಾಡುವಂತಾಗಿದೆ. ನೀರಾವರಿ ಸೌಲಭ್ಯ ಹೊಂದಿರುವ ಕಷಿಕರಿಗೂ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ ಎಂದು ಹೇಳಿದರು.

“ಉದ್ಯೋಗ ಖಾತ್ರಿ ಯೋಜನೆಯನ್ನು ವರ್ಷಪೂರ್ತಿ ವಿಸ್ತರಿಸಬೇಕು. ರೈತರು ಗುಳೆ ಹೋಗುವುದು ತಪ್ಪಿಸಬೇಕು. ಬರಪೀಡಿತ ಗ್ರಾಮಗಳಲ್ಲಿ ಉಚಿತ ಶುದ್ಧ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ನೀರು ಮತ್ತು ಮೇವಿನ ವ್ಯವಸ್ಥೆ ಮಾಡಬೇಕು. ಶಾಲಾ-ಕಾಲೇಜು ಮಕ್ಕಳ ಶಾಲಾ ಶುಲ್ಕ ಮನ್ನಾ ಮಾಡಬೇಕು. ಎಲ್ಲ ಅರ್ಹ ಬಡ ಕುಟುಂಬಗಳಿಗೆ ವರ್ಷವಿಡೀ ಉಚಿತ ಪಡಿತರ ನೀಡಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಾದ್ಯಂತ ಕೆರೆ ಜೋಡಣೆ ಯೋಜನೆ ಜಾರಿಗೊಳಿಸಿ ಶಾಶ್ವತವಾಗಿ ನೀರಿನ ಸಮಸ್ಯೆ ಮುಕ್ತಿಗೊಳಿಸಬೇಕು” ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಜನತೆ ಬರಗಾಲದಿಂದ ತತ್ತರಿಸಿದ್ದಾರೆ. ಗ್ರಾಮೀಣ ಭಾಗದ ಜನರು ಕೆಲಸ ಕಾರ್ಯಗಳಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ‌ ವೇಳೆ ರಾಜ್ಯದ ಸಚಿವರು ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ನಿರತರಾಗಿದ್ದಾರೆ. ಆದರೆ ತಮ್ಮ ರಾಜ್ಯದ ಜನರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಾಳಜಿ‌ ಇಲ್ಲದಂತಾಗಿದೆ ಎಂದು ಕಿಡಿಕಾರಿದರು. ಕೂಡಲೇ ನಮ್ಮ ಬೇಡಿಕೆಗಳಿಗೆ ಸ್ಪಂದನೆ ಮಾಡದಿದ್ದಲ್ಲಿ ರಾಜ್ಯವ್ಯಾಪಿ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಬೇಡಿಕೆಗಳು:
1.ರಾಜ್ಯದಲ್ಲಿ ಕೂಡಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಬರ ಪರಿಹಾರ ಕೊಡಬೇಕು.
2.ಕೇಂದ್ರದಿಂದ ಬರ ಪರಿಹಾರ ಪ್ರತಿ ಎಕರೆಗೆ 50 ಸಾವಿರ ರೂ. ಗಳಂತೆ ನಿಗದಿಗೊಳಿಸಿ, ರಾಜ್ಯ ಸರಕಾರ 30 ಸಾವಿರ ಹಣ ಬಿಡುಗಡೆ ಮಾಡಬೇಕು.
3.ಸಹಕಾರಿ ಬ್ಯಾಂಕ್‍ಗಳು, ಸರಕಾರಿ ಬ್ಯಾಂಕ್‍ಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು.
4.ರೈತರು ಬೆಳೆದು, ಮಳೆಯಿಂದ ಅಥವಾ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು.
5.ರಾಜ್ಯ ಸರಕಾರವು ರೈತರಿಗೆ ಗ್ಯಾರಂಟಿ ಕೊಡಬೇಕು.
6.ಮನರೇಗಾ ಯೋಜನೆಯ ಬಾಕಿ ಹಣ ಶೀಘ್ರ ಬಿಡುಗಡೆ ಮಾಡಬೇಕು.

ಈ ಸುದ್ದಿ ಓದಿದ್ದೀರಾ? ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ವಾಸ್ತವ ಕುಮಾರಸ್ವಾಮಿ ನಿದ್ದೆಗೆಡಿಸಿದೆ: ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಕರ್ನಾಟಕ ರೈತ ಸಂಘ ಜಿಲ್ಲಾಧ್ಯಕ್ಷ ಮಲ್ಲಯ್ಯ ಕಟ್ಟಿಮನಿ ಸೇರಿದಂತೆ ಪ್ರಮುಖರಾದ ಜಿ.ಅಂಬರೀಶ್, ಅಜೀಜ್ ಜಾಗೀರ್ದಾರ್, ಕೆ. ಗಿರಿಲಿಂಗ ಸ್ವಾಮಿ, ಶಿವರಾಂ, ಅಡಿವೆಪ್ಪ, ಶಫೀಕ್ ಪಾಷಾ, ಸಿದ್ದಲಿಂಗಪ್ಪ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...