ಎಡಗೈ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸಿದ ಸರ್ಕಾರ

Date:

  • ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
  • 4 ಗುಂಪು ಮಾಡಿ ಪರಿಶಿಷ್ಟರ ಒಳ ಮೀಸಲಾತಿ ಹಂಚಿದ ಸರ್ಕಾರ

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ವಿಚಾರವಾಗಿ ಮಹತ್ವದ ನಿರ್ಧಾರಗಳನ್ನು ಸರ್ಕಾರ ತಗೆದುಕೊಂಡಿದೆ.

ಪರಿಶಿಷ್ಟರ ಮೀಸಲಾತಿ ವಿಚಾರದಲ್ಲಿ ಆರ್ಟಿಕಲ್​ 342 ಅನ್ವಯ 4 ಗುಂಪುಗಳನ್ನು ಮಾಡಿರುವ ಸರ್ಕಾರ ಇವುಗಳಿಗೆ ಒಳಮೀಸಲಾತಿ ಹಂಚಿದೆ.

ಈ ಪೈಕಿ ಗುಂಪು ಒಂದು ಆದಿಜಾಂಬವ ಸಮುದಾಯಕ್ಕೆ ಶೇ 6ರಷ್ಟು ಮೀಸಲಾತಿ, ‘ಗುಂಪು 2’ ಆದಿಕರ್ನಾಟಕ ಸಮುದಾಯಕ್ಕೆ ಶೇ 5.5ರಷ್ಟು ಮೀಸಲಾತಿ, ಗುಂಪು 3 ಬಂಜಾರ, ಬೋವಿ, ಕೊರಚರಿಗೆ ಶೇ 4.5ರಷ್ಟು ಮೀಸಲಾತಿ, ಗುಂಪು 4ರಲ್ಲಿರುವ ಮತ್ತಿತರರಿಗೆ ಶೇ.1ರಷ್ಟು ಮೀಸಲಾತಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಂಜೆ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯನ್ನು ಪ್ರಸಕ್ತ ವಿಧಾನಸಭೆ ಅವಧಿಯ ಬಹುತೇಕ ಕೊನೆಯ ಸಚಿವ ಸಂಪುಟ ಸಭೆ ಎಂದೇ ಪರಿಗಣಿಸಲಾಗಿದೆ.

ಒಕ್ಕಲಿಗ, ಲಿಂಗಾಯತ ಸಮುದಾಯಕ್ಕೂ ಮೀಸಲಾತಿ

ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ನೀಡಲಾಗುವ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ. 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಿ, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳಲಾಗಿದೆ.

ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಮೂಲಕ ಚುನಾವಣೆ ಸಂದರ್ಭದಲ್ಲಿ ಎರಡು ಬೃಹತ್ ಸಮುದಾಯಗಳನ್ನು ಸೆಳೆಯುವ ತಂತ್ರಗಾರಿಕೆಯನ್ನು ಸರ್ಕಾರ ಮಾಡಿದೆ.

“ಹಿಂದುಳಿದ ವರ್ಗದಲ್ಲಿ ಒಂದೇ ಕೆಟಗರಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರಿಗೆ 7 ರಾಜ್ಯಗಳಲ್ಲಿ ಒಬಿಸಿ ಮೀಸಲಾತಿ ಇಲ್ಲ. ಹೀಗಾಗಿ 2ಬಿ ಅಡಿ ಮೀಸಲಾತಿ ನೀಡಿಲ್ಲ. 2C ಅಡಿ ಒಕ್ಕಲಿಗರಿಗೆ ಶೇಕಡಾ 6ರಷ್ಟು ಮೀಸಲಾತಿ ಹಾಗೂ 2D ಅಡಿ ಲಿಂಗಾಯತರಿಗೆ ಶೇಕಡಾ 7ರಷ್ಟು ಮೀಸಲಾತಿ ನೀಡಲಾಗುವುದು” ಎಂದು ಸಿಎಂ ಹೇಳಿದ್ದಾರೆ.

ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ನೀಡುವ ವಿಷಯಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಯಥಾಸ್ಥಿತಿ ಮಧ್ಯಂತರ ಆದೇಶವನ್ನು ಗುರುವಾರ ತೆರವುಗೊಳಿಸಲಾಗಿತ್ತು. ಇದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರ ನಿರಾಳವಾಗಿತ್ತು. 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ಹೈಕೋರ್ಟ್​ಗೆ ತಿಳಿಸಿದ್ದರು. ಈ ಭರವಸೆ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ ಬರ ಪರಿಸ್ಥಿತಿ, ರೈತರ ಸಂಕಷ್ಟ ಪರಿಹರಿಸುವ ಚರ್ಚೆಗಳಿಗೆ ಸದನದಲ್ಲಿ ಪ್ರಾಮುಖ್ಯತೆ ನೀಡಿ; ಎಎಪಿ ಒತ್ತಾಯ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ 16ನೇ ವಿಧಾನಸಭೆಯ ವಿಧಾನ ಮಂಡಲಗಳ ಚಳಿಗಾಲದ...

ಬೆಂಗಳೂರಿನ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೊಸದೇನಲ್ಲ ಎಂಬಂತೆ ಆಗಿದೆ. ಬೆಂಗಳೂರಿನ...

ಹಾಸನ | ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ; ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ...

ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ...