ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ ಸ್ಪಷ್ಟನೆ

Date:

ಏಟ್ರಿಯಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಜು.28ರಂದು ನಡೆದ ಅಂತರ ಜೀವಿ (ಪ್ರಭೇದ) ಸಮಾವೇಶದಲ್ಲಿ ಪಾಲ್ಗೊಂಡಿದ್ದ ವೇಳೆ, ಪಶ್ಚಿಮ ಘಟ್ಟದಲ್ಲಿ ಜೀವವೈವಿಧ್ಯ ಮತ್ತು ಸಸ್ಯ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ ಎಂದು ಹೇಳಿದ್ದೇ ಹೊರತು ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

- Advertisement -

ಬೀದರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಆ ಕಾರ್ಯಕ್ರಮದಲ್ಲಿ ಕೆಲವರು ಪಶ್ಚಿಮ ಘಟ್ಟದ ಬಗ್ಗೆ ಮತ್ತು ಕಸ್ತೂರಿ ರಂಗನ್ ವರದಿ ಕುರಿತಂತೆ ನನಗೆ ಪ್ರಶ್ನಿಸಿದಾಗ, ಕೇಂದ್ರ ಸರ್ಕಾರ ಸಂಜಯ್ ಕುಮಾರ್ ನೇತೃತ್ವದ ಪುನರ್ ಪರಿಶೀಲನಾ ಸಮಿತಿ ರಚಿಸಿದ್ದು, ಸಮಿತಿ ಸದಸ್ಯರು ತಮ್ಮನ್ನು ಇತ್ತೀಚೆಗೆ ಭೇಟಿ ಮಾಡಿದ್ದರು. ಸಮಿತಿ ಡಿಸೆಂಬರ್ ವೇಳೆಗೆ ವರದಿ ಸಲ್ಲಿಸಲಿದ್ದು, ವರದಿ ಬಂದ ಬಳಿಕ ಸಂಪುಟದ ಉಪ ಸಮಿತಿಯಲ್ಲಿ ಅದರ ಸಾಧಕ ಬಾಧಕ ಚರ್ಚಿಸಿ, ಪಶ್ಚಿಮಘಟ್ಟದ ಎಲ್ಲ ಬಾಧ್ಯಸ್ಥರೊಂದಿಗೆ ಮಾತುಕತೆ ನಡೆಸಿ ನಂತರ ಸರ್ಕಾರ ವರದಿ ಕುರಿತಂತೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

“ಕಸ್ತೂರಿ ರಂಗನ್ ವರದಿ 10 ವರ್ಷಗಳಷ್ಟು ಹಳೆಯದಾಗಿದೆ. ಇಂದಿಗೆ ಅದು ಪ್ರಸ್ತುತವೇ ಎಂಬ ವಾದವೂ ಇದೆ. ಪಶ್ಚಿಮಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿದರೆ ಜೀವನ, ಜೀವನೋಪಾಯಕ್ಕೆ ತೊಂದರೆ ಆಗುತ್ತದೆ ಎಂಬ ಭೀತಿಯೂ ಆ ಭಾಗದ ಜನರಲ್ಲಿದೆ. ಹೀಗಾಗಿ ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಸರ್ಕಾರ ಯಾವುದೇ ಆತುರದ ಕ್ರಮ ಕೈಗೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಪಶ್ಚಿಮ ಘಟ್ಟದಲ್ಲಿ ಕೆಂಪು ಪ್ರವರ್ಗದ ಕೈಗಾರಿಕೆಗಳು ನಡೆಯಬಾರದು. ಅದರ ತ್ಯಾಜ್ಯ ಪಶ್ಚಿಮ ಘಟ್ಟದ ಜಲ ಮೂಲಗಳಿಗೆ ಅಪಾಯ ತಂದೊಡ್ಡುತ್ತದೆ ಎಂಬ ಆತಂಕ ಇದೆ. ಅದು ಸರಿ ಎನಿಸುತ್ತದೆ. ಆದರೆ, ಅಂಗನವಾಡಿ, ಆಸ್ಪತ್ರೆ, ಶಾಲೆ, ಜನವಸತಿ, ಮೂಲಸೌಕರ್ಯ ವಿಚಾರದಲ್ಲಿ ಹಾಗೆ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಇದರಿಂದ ಹಲವು ದಶಕಗಳಿಂದ ಅಲ್ಲಿಯೇ ಬದುಕು ಕಟ್ಟಿಕೊಂಡಿರುವ ಸ್ಥಳೀಯ ಜನರಿಗೆ ತೊಂದರೆ ಆಗುತ್ತದೆ. ಪರಿಸರವೂ ಉಳಿಯಬೇಕು, ಜನರ ಜೀವನೋಪಾಯಕ್ಕೂ ಧಕ್ಕೆ ಆಗಬಾರದು, ಸುಸ್ಥಿರ ಅಭಿವೃದ್ಧಿ ಸರ್ಕಾರದ ನಿಲುವು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ನಾಯಕರು ಹತಾಶರಾಗಿ ಸರ್ಕಾರದ ವಿರುದ್ಧ ಅಪಪ್ರಚಾರಕ್ಕಿಳಿದಿದ್ದಾರೆ: ಕೃಷ್ಣಭೈರೇಗೌಡ

“ಕಸ್ತೂರಿ ರಂಗನ್ ವರದಿಯಲ್ಲಿ ಹಲವು ಸಡಿಲಿಕೆಗೂ ಸಂಜಯ್ ಕುಮಾರ್ ಸಮಿತಿ ಸಮ್ಮತಿಸುತ್ತಿದೆ. ವಿಶ್ವದ ಜೀವವೈವಿಧ್ಯತೆಯ 8 ಅದ್ಭುತ ತಾಣಗಳಲ್ಲಿ ಒಂದಾಗಿರುವ ಪಶ್ಚಿಮ ಘಟ್ಟ ಉಳಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ. ಆದರೆ, ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿರುವ ರೀತಿ ತಾವು ಯಾವುದೇ ಹೇಳಿಕೆ ನೀಡಿಲ್ಲ. ಅಂತಹ ಯಾವುದೇ ನಿರ್ಧಾರವನ್ನು ಸರ್ಕಾರ ಮಾಡಿಲ್ಲ” ಎಂದು ಪುನರುಚ್ಚರಿಸಿದರು.

ಪಶ್ಚಿಮಘಟ್ಟ, ಅಲ್ಲಿನ ಸಸ್ಯ ಸಂಕುಲ ಮತ್ತು ಪ್ರಾಣಿ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ ಎಂದು ಹೇಳಿದ್ದ, ತಮ್ಮ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಿ ಕೆಲವು ಸುದ್ದಿ ಮಾಧ್ಯಮಗಳಲ್ಲಿ ಮಾತ್ರ ಈ ರೀತಿ ವರದಿ ಪ್ರಕಟಿಸಲಾಗಿದೆ. ಈ ಬಗ್ಗೆ ಬೀದರ್ ನಲ್ಲಿ ನಿನ್ನೆ ನಡೆದ ಪತ್ರಿಕಾ ದಿನಾಚರಣೆಯಲ್ಲೂ ತಾವು ಸ್ಪಷ್ಟೀಕರಣ ನೀಡಿದ್ದಾಗಿ ಈಶ್ವರ ಖಂಡ್ರೆ ತಿಳಿಸಿದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶೇಷ ಅಧಿವೇಶನ: ಡಿಲಿಮಿಟೇಶನ್ ಮಸೂದೆ ವಿರುದ್ಧ ಮತ ಚಲಾಯಿಸಲು ಎಸ್‌ಪಿ ಸಂಸದರಿಗೆ ‘ತ್ರೀ-ಲೈನ್ ವಿಪ್’ ಜಾರಿ

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಂಡಿಸಲಿರುವ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್)...

ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ...

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...