ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆ ಯೋಚನೆ ಸರ್ಕಾರದ ಮುಂದಿಲ್ಲ: ಗೃಹ ಸಚಿವ ಪರಮೇಶ್ವರ್‌

Date:

  • ‘ವರ್ಗಾವಣೆ ವಿಚಾರ ಬೀದಿಯಲ್ಲಿ ಚರ್ಚೆ ಮಾಡಲು ಆಗುತ್ತಾ?’
  • ‘ಸಿಎಂ ಸಿದ್ದರಾಮಯ್ಯ ಜೊತೆ ರಹಸ್ಯವಾಗಿ ಮಾತನಾಡಿದ್ದೇನೆ’

ವರ್ಗಾವಣೆ ವಿಚಾರಗಳನ್ನು ಬೀದಿಯಲ್ಲಿ ಕುಳಿತು ಮಾತನಾಡಲು ಆಗುತ್ತಾ? ರಹಸ್ಯವಾಗಿ ಮಾತನಾಡುವ ವಿಚಾರಗಳನ್ನು ಹಾಗೇ ಮಾತನಾಡಬೇಕು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, “ವರ್ಗಾವಣೆ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ರಹಸ್ಯವಾಗಿ ಮಾತನಾಡಿದ್ದೇನೆ. ಹಿಂದೆಯೂ ಮಾತನಾಡಿದ್ದೇವೆ. ಮುಂದೆಯೂ ರಹಸ್ಯವಾಗಿಯೇ ಮಾತನಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹೈಕಮಾಂಡ್‌ ಬುಲಾವ್‌ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, “ಬುಧವಾರ (ಆಗಸ್ಟ್ 2) ದೆಹಲಿಯಲ್ಲಿ ನಡೆಯಲಿರುವ ಸಭೆಯ ಕಾರ್ಯಸೂಚಿಯಲ್ಲಿ ಏನಿದೆ ಗೊತ್ತಿಲ್ಲ. ಈ ಹಿಂದೆ ಪಕ್ಷದ ನಾಯಕರು ಕೆಲವೊಮ್ಮೆ ನಮ್ಮನ್ನು ದೆಹಲಿಗೆ ಕರೆಸಿಕೊಳ್ಳುತ್ತಿದ್ದರು” ಎಂದು ಹೇಳಿದರು.

“ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಗುಲಾಂ ನಬಿ ಆಜಾದ್ ಅವರು ಈ ಹಿಂದೆ ಸಚಿವರ ಜೊತೆಗೆ ಪ್ರತ್ಯೇಕವಾಗಿ ಮಾಹಿತಿ ಪಡೆಯುತ್ತಿದ್ದರು. ದೆಹಲಿ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಸಿದ್ಧತೆ ಬಗ್ಗೆ ಚರ್ಚೆ ಆಗಬಹುದು. ಸಚಿವರ ಕಾರ್ಯ ಪರಿಶೀಲನೆ ಬಗ್ಗೆ ನನಗೆ ಮಾಹಿತಿ ಇಲ್ಲ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಸೌಜನ್ಯಳಿಗೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಲ್ಲ : ದುನಿಯಾ ವಿಜಯ್‌

ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆ ನಮ್ಮ ಮುಂದಿಲ್ಲ

ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಯನ್ನು ಸರ್ಕಾರ ನಡೆಸುತ್ತಾ ಎಂದು ಪ್ರಶ್ನಿಸಿದಾಗ, “ಈ ಪ್ರಕರಣದ ಮರು ತನಿಖೆ ಬಗ್ಗೆ ಯಾವುದೇ ಯೋಚನೆ ಮಾಡಿಲ್ಲ. ಅಂತಹ ಯೋಚನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ. ಮುಖ್ಯಮಂತ್ರಿಯಿಂದಲೂ ಯಾವುದೇ ಸೂಚನೆ ಬಂದಿಲ್ಲ” ಎಂದು ಹೇಳಿದರು.

ಮತೀಯ ಗೂಂಡಾಗಿರಿ ನಿಯಂತ್ರಣ

ಮತೀಯ ಗೂಂಡಾಗಿರಿ ಪ್ರಕರಣ ರಾಜ್ಯದಲ್ಲಿ ನಡೆಯಬಾರದೆಂದು ಪೊಲೀಸ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ. ಮತೀಯ ಗೂಂಡಾಗಿರಿ ನಿಯಂತ್ರಣಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಇದಕ್ಕಾಗಿ ಪ್ರತ್ಯೇಕ ಘಟಕ ಸ್ಥಾಪಿಸಿದ್ದೇವೆ. ಯಾವುದೇ ಧರ್ಮದವರು ಇಂಥ ಪ್ರಕರಣಗಳಲ್ಲಿ ಭಾಗಿಯಾದರೂ ಅವರ ಮೇಲೆ ಕ್ರಮ ಆಗಲಿದೆ” ಎಂದರು.

ಖುಷ್ಬೂ ಹೇಳಿಕೆಯನ್ನೇ ಬಿಜೆಪಿಯವರು ನಂಬುತ್ತಿಲ್ಲ

ಉಡುಪಿ ಕಾಲೇಜು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹಿಸಿರುವ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, “ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾರೆ. ಅವರು ಒತ್ತಾಯಿಸಲೇಬೇಕು. ಅವರು ಹೇಳಿದರು ಎಂದು ನಾವು ಅದನ್ನು ಕೇಳಬೇಕು ಎನ್ನುವ ರೂಲ್‌ ಇಲ್ಲ” ಎಂದು ಹೇಳಿದರು.

ಬಿಜೆಪಿಯವರು ಬೇಕಾದರೆ ರಚನಾತ್ಮಕವಾಗಿ ಸಲಹೆ ಕೊಟ್ಟರೆ ಪರವಾಗಿಲ್ಲ. ಅದು ಬಿಟ್ಟು ಪ್ರತಿಭಟನೆ ಮಾಡುತ್ತಾರೆ ಎಂದರೆ ಮಾಡಲಿ. ಉಡುಪಿ ಪ್ರಕರಣ ಬಗ್ಗೆ ಅವರ ಪಕ್ಷದ ಖುಷ್ಬೂ ಅವರೇ ಹೇಳಿಕೆ ನೀಡಿದ್ದಾರೆ. ಇದರ ಮೇಲೂ ಅವರು ನಂಬಲಿಲ್ಲವೆಂದರೆ ಹೇಗೆ ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...