ಸ್ಲಂ ನಿವಾಸಿಗಳ ವಸತಿಗಾಗಿ ನಗರ ಲ್ಯಾಂಡ್ ಬ್ಯಾಂಕ್ ಜಾರಿಗೆ ಸರ್ಕಾರದಿಂದ ಸಿದ್ದತೆ: ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ

Date:

Advertisements

ವಿಧಾನ ಮಂಡಲ ಅಧಿವೇಶನದ ಭಾಗವಾಗಿ ಸ್ಲಂ ಜನಾಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ನರಸಿಂಹ ಮೂರ್ತಿಯವರ ನೇತೃತ್ವದ ನಿಯೋಗವು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯನವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿತು.

ಮನವಿ ಸಲ್ಲಿಸುವ ವೇಳೆ ರಾಜ್ಯದ ಸ್ಲಂ ನಿವಾಸಿಗಳ ಬೇಡಿಕೆಗಳು ಹಾಗೂ ಕುಂದುಕೊರತೆ ಸಭೆ ಕರೆಯಲು ಸಮಾಲೋಚನೆ ನಡೆಸಲಾಯಿತು.

ಮನವಿ ಸ್ವೀಕರಿಸಿ ಮಾತನಾಡಿದ ಪ್ರಸಾದ್ ಅಬ್ಬಯ್ಯ, ರಾಜ್ಯದ ಸ್ಲಂ ನಿವಾಸಿಗಳ ವಸತಿಗಾಗಿ ನಗರ ಲ್ಯಾಂಡ್ ಬ್ಯಾಂಕ್ ಜಾರಿಗೆ ಸರ್ಕಾರದಿಂದ ಸಿದ್ದತೆ ಮಾಡಿಕೊಂಡಿರುವುದಾಗಿ ನಿಯೋಗಕ್ಕೆ ತಿಳಿಸಿದರು.

Advertisements

ಸ್ಲಂ ಜನಾಂದೋಲನ ಕರ್ನಾಟಕದ ನಿಯೋಗವು ತಮ್ಮ ಮನವಿಯಲ್ಲಿ ಹಲವು ಹಕ್ಕೊತ್ತಾಯಗಳನ್ನು ಸಲ್ಲಿಸಿದೆ. ಸಮಗ್ರ ಸ್ಲಂ ಅಭಿವೃದ್ಧಿ ಕಾಯಿದೆ, ರಾಜ್ಯದ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರಗಳ ವಿತರಣೆ ಮತ್ತು ಕ್ರಯ ಪತ್ರಗಳ ಪ್ರಕ್ರಿಯೆ ಚುರುಕುಗೊಳಿಸುವುದು, ಕೊಳಚೆ ಪ್ರದೇಶಗಳ ಘೋಷಣೆಗೆ ಎದುರಾಗಿರುವ ತೊಡಕುಗಳನ್ನು ಸರಿಪಡಿಸುವುದು ಮತ್ತು ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳನ್ನು ಘೋಷಿಸಲು ಇರುವ ತೊಡಕನ್ನು ನಿವಾರಿಸುವಂತೆ ತಿಳಿಸಿದೆ.

ಸ್ಲಮ್

ಅಲ್ಲದೇ, ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿಗಳ ವಸತಿ ಯೋಜನೆ ಜಾರಿ ಮಾಡಬೇಕು, ಸ್ಲಂ ನಿವಾಸಿಗಳ ಫಲಾನುಭವಿ ವಂತಿಕೆಯನ್ನು ಕಡಿತ ಮಾಡುವುದು ಸೇರಿದಂತೆ ನಗರ ಲ್ಯಾಂಡ್ ಬ್ಯಾಂಕ್ ನೀತಿ ಜಾರಿಗೊಳಿಸಿ ಜಿಲ್ಲಾ ಮಟ್ಟದಲ್ಲಿ ಸ್ಲಂ ಜನರು ಭಾಗವಹಿಸುವ 2016ರ ನೀತಿಯನ್ನು ಜಾರಿಗೊಳಿಸಬೇಕು ಹಾಗೂ ಪ್ರಧಾನಮಂತ್ರಿ ಅವಾಸ್ ಯೋಜನೆಯಲ್ಲಿ ಅರ್ಧಕ್ಕೆ ನಿಂತಿರುವ ಮನೆಗಳನ್ನು ಪೂರ್ಣಗೊಳಿಸಲು ಒತ್ತಾಯಿಸಲಾಯಿತು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ ಮನವಿ ಸ್ವೀಕರಿಸಿ ಮಾತನಾಡಿ, ಸ್ಲಂಗಳೆಂದರೆ ಬರೀ ವಸತಿ ಸಮಸ್ಯೆಯಲ್ಲ. ಇದೊಂದು ಜಾತಿ ಸಮಸ್ಯೆ. ಹಾಗಾಗಿ ರಾಜ್ಯ ಸರ್ಕಾರದಿಂದ ಘೋಷಿತ ಪ್ರದೇಶಗಳನ್ನು ಸಮಗ್ರ ಅಭಿವೃದ್ಧಿಗೊಳಿಸಲು ಚಿಂತಿಸುತ್ತಿದೆ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಸ್ಲಂ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು, ಸ್ಥಳೀಯ ಸಂಸ್ಥೆಗಳಲ್ಲಿ ಸೆಸ್ ಸಂಗ್ರಹ ಮಾಡಿ ಕೊಳಚೆ ಪ್ರದೇಶಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಮುಂದಾಗುತ್ತಿದ್ದೇವೆ ಹಾಗೂ ಅಧಿವೇಶನದಲ್ಲು ಈ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸ್ಲಂ ನಿವಾಸಿಗಳಿಗೆ ವಸತಿ ಕಲ್ಪಿಸಲು ನಗರ ಲ್ಯಾಂಡ್ ಬ್ಯಾಂಕ್ ಯೋಜನೆ ಜಾರಿಗೊಳಿಸಿ ಪ್ರತಿ ಜಿಲ್ಲೆಗೆ 250 ಎಕರೆ ಭೂಮಿಯನ್ನು ಮೀಸಲಿಡಲು ಪ್ರಸ್ತಾಪಿಸಲಾಗಿದೆ. ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ಮಂಡಳಿ ಕ್ರಮ ವಹಿಸಲಿದೆ. ಪ್ರಧಾನ್ ಮಂತ್ರಿ ಅವಾಸ್ ಯೋಜನೆಯಲ್ಲಿ 1.5 ಲಕ್ಷ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡಿ, ಜಿ.ಎಸ್.ಟಿ ರೂಪದಲ್ಲಿ 1.35 ಲಕ್ಷ ವಾಪಸ್ ಪಡೆಯುತ್ತಿದೆ. ಹಾಗಾಗಿ ರಾಜ್ಯ ಸರ್ಕಾರವೇ ಸ್ಲಂ ಜನರಿಗೆ ವಸತಿ ನಿರ್ಮಾಣಕ್ಕೆ 500 ಕೋಟಿಗೂ ಹೆಚ್ಚು ಹಣವನ್ನು ನೀಡುತ್ತಿದೆ ಮತ್ತು ರಾಜ್ಯ ಸರ್ಕಾರವೇ ವಸತಿ ಯೋಜನೆಗೆ ಹೊಸ ಹೆಸರನ್ನು ಘೋಷಿಸಲಿದೆ ಎಂದರು.

ಸೆಪ್ಟೆಂಬರ್‌ನಲ್ಲಿ ಸ್ಲಂ ನಿವಾಸಿಗಳ ರಾಜ್ಯ ಸಮಾವೇಶ

“2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಸ್ಲಂ ನಿವಾಸಿಗಳಿಗೆ ಘೋಷಿಸಿರುವ ಭರವಸೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ಸಮಾವೇಶವನ್ನು ಹುಬ್ಬಳ್ಳಿ ಅಥವಾ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗುವುದು” ಎಂದು ಸ್ಲಂ ಜನಾಂದೋಲನ ಸಮಿತಿಯ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ತಿಳಿಸಿದ್ದಾರೆ.

ಸ್ಲಂ 2

ಈ ಸಮಾವೇಶದಲ್ಲಿ ಸರ್ಕಾರ ಸ್ಲಂ ನಿವಾಸಿಗಳಿಗೆ ನೀಡಿರುವ ವಸತಿ ಗ್ಯಾರಂಟಿ ಮತ್ತು ಸ್ಲಂ ನಿವಾಸಿಗಳಿಗೆ ಭೂ ಒಡೆತನ ನೀಡುವ ಹಕ್ಕುಪತ್ರ ವಿತರಣೆಗಾಗಿ ಅಭಿನಂದನೆ ಸಲ್ಲಿಸಿ, ನಮ್ಮ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು ನೀಡಲು ಆಗ್ರಹಿಸಲಾಗುವುದು. ಕೇಂದ್ರದ ನಗರಾಭಿವೃದ್ಧಿ ಮತ್ತು ನಗರ ಬಡತನ ಹಾಗೂ ವಸತಿ ಯೋಜನೆಗಳು ಕಾರ್ಪೋರೇಟ್ ಆಧಾರಿತ ದೃಷ್ಟಿಕೋನವನ್ನು ಹೊಂದಿದ್ದು, ಸ್ಲಂ ಜನರು ನಗರಗಳ ಮೇಲೆ ಹಕ್ಕು ಸ್ಥಾಪಿಸಲು ಆಂದೋಲನವನ್ನು ಕೈಗೊಳ್ಳಲಾಗುವುದು ಎಂದು ಸ್ಲಂ ಜನಾಂದೋಲನ-ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಹೇಳಿದರು.

ಈ ಸಂದರ್ಭದಲ್ಲಿ ಸಂಚಾಲಕರಾದ ಇಮ್ತಿಯಾಝ್ ಮಾನ್ವಿ, ಸಂಘಟನಾ ಸಂಚಾಲಕರಾದ ಜನಾರ್ಧನ್ ಹಳ್ಳಿಬೆಂಚಿ, ಜಿಲ್ಲಾ ಸಂಚಾಲಕರಾದ ಶೋಭಾ ಕಮತಾರ್-ಹುಬ್ಬಳ್ಳಿ, ಅರುಣಾ ತುಮಕೂರು, ರೇಣುಕಾ ಎಲ್ಲಮ್ಮ ದಾವಣಗೆರೆ, ವೆಂಕಮ್ಮ ವಿಜಯನಗರ, ರೇಣುಕಾ ಸರಡಗಿ ಕಲ್ಬುರ್ಗಿ, ಸುಧಾ ಚಿತ್ರದುರ್ಗ, ಬೆಂಗಳೂರು ಸಮಿತಿಯ ಮಂಜುಬಾಯಿ, ಹಣಮಂತ, ಶಿವಕುಮಾರ್, ರಾಘವೇಂದ್ರ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X