ಹಾಸನ ನಗರದ ಲಾಡ್ಜ್ ಒಂದರಲ್ಲಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರು ಅರಸಿಕರೆ ತಾಲೂಕಿನ ಮುದುಡಿ ಸಿದ್ದಾಪುರದ ರಂಗಸ್ವಾಮಿ (57) ಎಂದು ಗುರುತಿಸಲಾಗಿದೆ. ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಶನಿವಾರ ಲಾಡ್ಜ್‌ನಲ್ಲಿ ರೂಮ್ ಪಡೆದು ಉಳಿದುಕೊಂಡಿದ್ದರು. ಅಲ್ಲೇ ನೇಣಿಗೆ ಶರಣಾಗಿದ್ದಾರೆ.
ಮೃತ ರಂಗಸ್ವಾಮಿ ಬೇಲೂರು ತಾಲೂಕಿನ ತೊಳಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿವೃತ್ತಿಯಾಗಲು ಕೇವಲ ಎರಡು ವರ್ಷಗಳು ಮಾತ್ರ ಬಾಕಿ ಇತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೃತರ ಓರ್ವ ಪುತ್ರ ಅಂಗವೈಕಲ್ಯದಿಂದ ಬಳಲುತ್ತಿದ್ದರು, ಇತ್ತೀಚೆಗೆ ಸಾವನಪ್ಪಿದ್ದರು. ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಸಾವಿನ ಹಾದಿ ಹಿಡಿದಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.