ಉಡುಪಿ | 96 ವರ್ಷ ಹಳೆ ಶಾಲೆಗೆ ಹೊಸ ಕಳೆ ನೀಡಲು ಒಂದಾದ ಊರಿನ ಜನ

Date:

ಸರಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿಗೊಳಿಸಲು ಪೋಷಕರು ಹಿಂದೇಟು ಹಾಕುತ್ತಿರುವ ಹೊತ್ತಲ್ಲೇ, ಉಡುಪಿ ಜಿಲ್ಲೆಯ ತೀರಾ ಗ್ರಾಮೀಣ ಪ್ರದೇಶ ಕುಂದಬಾರಂದಾಡಿ ಸರಕಾರಿ ಶಾಲೆ ಉಳಿಸಿ, ಬೆಳೆಸಲು ದಾನಿಗಳ ಸಹಾಯ ಹಸ್ತ ದೊರೆತಿದೆ.

- Advertisement -

ಸ್ಥಳೀಯ ಪ್ರಮುಖರಾದ ಹೊಳಗೆ ಸಿಂಗಾರಿ ಶಿವರಾಮ್ ಶೆಟ್ಟಿ ಕುಟುಂಬಸ್ಥರನ್ನು ಸಂಪರ್ಕಿಸಿ ಶಾಲೆಯನ್ನು ಉಳಿಸುವ ನಮ್ಮ ಕನಸುಗಳಿಗೆ ಜತೆಯಾಗುವಂತೆ ಒಕ್ಕೊರಲ ಮನವಿ ಮಾಡಿದ್ದರು. ಸ್ಥಳೀಯ ವಿದ್ಯಾಭಿಮಾನಿಗಳ ಆಸೆಗಳಿಗೆ ಪ್ರೋತ್ಸಾಹದ ನೀರೇರೆದ ಈ ಕುಟುಂಬದ ಅಳಿಯ, ರಾಜ್ಯ ಹಾಗೂ ಕೇಂದ್ರ ಸರಕಾರದ ಹಿರಿಯ ಅಧಿಕಾರಿಯಾಗಿ ನಿವೃತ್ತರಾದ ಬಿ.ಎನ್.ಶೆಟ್ಟಿಯವರು, ಕುಟುಂಬ ಸದಸ್ಯರನ್ನು ಒಟ್ಟು ಮಾಡಿ, ಶಾಲೆಯ ಅಭಿವೃದ್ಧಿಗೆ ಊರುಗೋಲಾಗುವ ತೀರ್ಮಾನ ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶಾಲೆಯ ಅಭಿವೃದ್ಧಿ ಯೋಜನೆ ರೂಪಿಸಿ, ಒಟ್ಟು ವೆಚ್ಚದ ಮೂರನೇ ಒಂದು ಪಾಲನ್ನು ಹೊಳಗೆ ಸಿಂಗಾರಿ ಶಿವರಾಮ್ ಶೆಟ್ಟಿ ಕುಟುಂಬದಿಂದ ನೀಡಿದರು. ಸರಕಾರದ ನಿಯಮಾನುಸಾರದಂತೆ ಒಟ್ಟು ವೆಚ್ಚದ ಮೂರನೇ ಒಂದು ಪಾಲನ್ನು ನೀಡಿದ್ದ ಕುಟುಂಬದ ಹಿರಿಯರಾದ ಹೊಳ್ಳಗೆ ಸಿಂಗಾರಿ ಶಿವರಾಮ್ ಶೆಟ್ಟಿ ಹೆಸರನ್ನು ಶಾಲೆಗೆ ಮರು ನಾಮಕರಣ ಮಾಡಲು ತೀರ್ಮಾನಿಸಿ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿತ್ತು.

ದಾನಿಗಳು ಹಾಗೂ ಪ್ರಾಕ್ತನ ವಿದ್ಯಾರ್ಥಿಗಳ ನೆರವಿನಿಂದ ಶಾಲೆಯ ಅಭ್ಯುದಯಕ್ಕೆ ಕಾರ್ಯ ಯೋಜನೆಗಳು ವ್ಯವಸ್ಥಿತವಾಗಿ ನಡೆಯುತ್ತಿದೆ. ಸರಕಾರದಿಂದ ಅನುಮತಿಯೂ ದೊರಕಿ, ಇದೀಗ ಶಾಲೆ ಹೊತ್ಮಗೆ ಸಿಂಗಾರಿ ಶಿವರಾಮ್ ಶೆಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂದಬಾರಂದಾಡಿ ಎನ್ನುವ ಹೆಸರಿನೊಂದಿಗೆ ಪುನ‌ರ್ ನಾಮಕರಣಗೊಂಡು ಹೊಸ ಹುರುಪಿನೊಂದಿಗೆ ಶಿಕ್ಷಣ ಯಜ್ಞ ಆರಂಭಿಸಿದೆ.

ಸ್ಥಳೀಯ ಪೋಷಕರ ಬೇಡಿಕೆಗೆ ಪೂರಕವಾಗಿ ಈ ವರ್ಷದಿಂದಲೇ 1 ಮತ್ತು 2 ನೇ ತರಗತಿಯನ್ನು ಆಂಗ್ಲ ಮಾಧ್ಯಮದಲ್ಲಿ ಆರಂಭಿಸಲಾಗಿದೆ. ಉತ್ತಮ ವಿದ್ಯಾರ್ಜನೆ ನೀಡಲು ಮೂವರು ಅರೆಕಾಲಿಕ ಶಿಕ್ಷಕರನ್ನು ನೇಮಕಗೊಳಿಸಲಾಗಿದೆ. ತನ್ನೂರಿನ ಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ದೊರಕಿಸಲು ಇಡೀ ಊರು ಒಟ್ಟಾಗಿದೆ.

ಪ್ರಸ್ತುತ ಎಲ್‌ಕೆಜಿಯಿಂದ 7ನೇ ತರಗತಿಯವರೆಗೆ ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಅವಕಾಶ ಇದೆ. ಮೂವರು ಸರಕಾರಿ ಶಿಕ್ಷಕರಿದ್ದು, ಮೂವರು ಗೌರವ ಶಿಕ್ಷಕರು ಇದ್ದಾರೆ. ಆಟದ ಮೈದಾನ, ಕ್ರೀಡಾ ತರಬೇತಿ, ಯೋಗ ತರಬೇತಿ, ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಕ್ಲಾಸ್, ಕೌಶಲ್ಯ ತರಬೇತಿಯಂತಹ ಹತ್ತಾರು ಯೋಜನೆಯ ಕನಸುಗಳು ಇಲ್ಲಿದೆ.

1929ರಲ್ಲಿ ಕುಂದಾಪುರ ತಾಲೂಕಿನ ಕುಂದಬಾರಂದಾಡಿಯಲ್ಲಿ ಸ್ಥಾಪಿತವಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2029ರಲ್ಲಿ ಶತಮಾನ. ಕುಂದಬಾರಂದಾಡಿ ಪರಿಸರದ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಾರ್ಜನೆಯ ಕನಸನ್ನು ನನಸು ಮಾಡಿ, ಅವರ ಭವಿಷ್ಯದ ಜೀವನಕ್ಕೆ ಭದ್ರ ನೆಲೆ ಒದಗಿಸಿದ ಈ ಶಾಲೆ ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವ ಕಾರಣಕ್ಕಾಗಿ ಗಮನ ಸೆಳೆದಿತ್ತು. ಶತಮಾನೋತ್ಸವದ ಹೊಸ್ತಿಲಲ್ಲಿ ನಿಂತಿರುವ ನಮ್ಮೂರು ಶಾಲೆ ಯಾವುದೇ ಕಾರಣಕ್ಕೂ ಕಳೆ ಕುಂದಬಾರದು ಹಾಗೂ ಶತಮಾನದ ಇತಿಹಾಸವುಳ್ಳ ಈ ವಿದ್ಯಾ ದೇಗುಲ ಮುಚ್ಚ ಬಾರದು ಎನ್ನುವ ನಿಶ್ಚಯ ಮಾಡಿದ್ದ ಊರಿನವರು ಹಾಗೂ ಹಳೆ ವಿದ್ಯಾರ್ಥಿಗಳು ಈ ಶಾಲೆಯ ಉಳಿಯುವಿಕೆಗಾಗಿ ಕಾರ್ಯಯೋಜನೆ ರೂಪಿಸಿದ್ದರು.

100 ಸಂವತ್ಸರಗಳು ಪೂರ್ಣಗೊಳ್ಳುವಾಗ ಜಿಲ್ಲೆಗೆ ಮಾದರಿ ಸರಕಾರಿ ಶಾಲೆಯನ್ನಾಗಿಸುವ ಕನಸುಗಳೊಂದಿಗೆ, ದಾನಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಣಾಭಿಮಾನಿಗಳು ಒಟ್ಟಾಗಿ ಅಭಿವೃದ್ಧಿಯ ಯೋಜನೆಗಳ ಗುರಿಯನ್ನು ಇರಿಸಿಕೊಂಡಿದೆ. ಇದಕ್ಕೆ ಶಿಕ್ಷಕ ರಕ್ಷಕ ಸಂಘ, ಸ್ಥಳೀಯ ಗೆಳೆಯರ ತಂಡಗಳು, ಹಕ್ಲಾಡಿ ಲಯನ್ಸ್ ಕ್ಲಬ್ ಸಾಥ್ ನೀಡುತ್ತಿದೆ.

ಈ ಬಗ್ಗೆ ಮಾತನಾಡಿದ ಶಾಲೆಯ ಪ್ರಧಾನ ಪೋಷಕರಾದ ಶೋಭಾ ಬಿ.ಎನ್. ಶೆಟ್ಟಿ, ಈ ಶಾಲೆಯನ್ನು ಉಳಿಸಲು ಸ್ಥಳೀಯರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಸಿಂಗಾರಿ ಶಿವರಾಮ್ ಶೆಟ್ಟಿಯವರ ಕುಟುಂಬಸ್ಥರ ಸಹಕಾರವನ್ನು ಬಯಸಿದ್ದರು. ವಿದ್ಯಾ ದೇಗುಲವೊಂದರ ಉಳಿಯುವಿಕೆಗಾಗಿ ನಮ್ಮ ಕುಟುಂಬದಿಂದ ಆಗುವ ಸಹಕಾರ ನೀಡಲು ನಾವು ಬದ್ಧರಿದ್ದೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಪ್ರಭಾರ ಮುಖ್ಯ ಶಿಕ್ಷಕ ಶಿವರಾಜ್ ಭಂಡಾರಿ ಎನ್, ಈ ಭಾಗದ ಸರಕಾರಿ ಶಾಲೆಯಲ್ಲಿ ಉಳಿಸಲು ಸ್ಥಳೀಯರು, ದಾನಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು ಸಹಕಾರ ನೀಡುತ್ತಿದ್ದಾರೆ. ಶಿಕ್ಷಕರ ತಂಡ ಉತ್ತಮ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...